PLACE YOUR AD HERE AT LOWEST PRICE
ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಭವನ ಕಾಮಗಾರಿಗೆ ನೆರವು, ನೌಕರರ ಸಂಘಕ್ಕೆ ಜಮೀನು ಮಂಜೂರು ಮಾಡಿಸುವತ್ತ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಂಸದ ಎಸ್.ಮುನಿಸ್ವಾಮಿ ಭರವಸೆ ನೀಡಿದರು.
ಶುಕ್ರವಾರ ನೌಕರರ ಸಂಘದ ನೂತನ ಪದಾಧಿಕಾರಿಗಳ ತಂಡ ಜಿಲ್ಲಾಧ್ಯಕ್ಷ ಜಿ.ಸುರೇಶ್‌ಬಾಬು ನೇತೃತ್ವದಲ್ಲಿ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ೧೬ ಸಾವಿರ ನೌಕರರಿದ್ದು, ಅವರಿಗೆ ಅಗತ್ಯವಾದ ಸಮುದಾಯಭವನ, ಮತ್ತಿತರ ಅಗತ್ಯಗಳಿಗಾಗಿ ಕೇಳಿರುವ ೫ ಎಕರೆ ಜಮೀನು ಮಂಜೂರು ಮಾಡಿಸಿಕೊಡಲು ಅಗತ್ಯಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಜನವರಿಯಲ್ಲಿ ನಡೆಯುವ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲು ಸಲಹೆ ನೀಡಿದ ಅವರು, ಕ್ರೀಡಾಕೂಟಕ್ಕೆ ಅಗತ್ಯ ಸಹಕಾರ ಒದಗಿಸುವ ಭರವಸೆ ನೀಡಿದರು.
ನೌಕರರು ವರ್ಷವಿಡೀ ಕೆಲಸದ ಒತ್ತಡದಲ್ಲೇ ಇರುತ್ತೀರಿ, ವರ್ಷಕ್ಕೆರಡು ದಿನ ಕ್ರೀಡಾಕೂಟದಲ್ಲಿ ಸಂಭ್ರಮದಿಂದ ಭಾಗವಹಿಸಿ ಎಂದು ಸಲಹೆ ನೀಡಿದ ಅವರು, ಕಳೆದ ಬಾರಿಗಿಂತಲೂ ಸಂಭ್ರಮದಿಂದ ಕ್ರೀಡಾ ಹಬ್ಬ ಆಚರಿಸಿ ಎಂದರು.
ಈ ಸಂದರ್ಭದಲ್ಲಿ ನೌಕರರ ಸಂಘದ ನೂತನ ಕಾರ್ಯದರ್ಶಿ ಅಜಯ್‌ಕುಮಾರ್, ಕಾರ್ಯಾಧ್ಯಕ್ಷ ಶ್ರೀನಿವಾಸರೆಡ್ಡಿ, ಹಿರಿಯ ಉಪಾಧ್ಯಕ್ಷರಾದ ಸಿ.ಸುಬ್ರಮಣಿ, ಎಸ್.ನಂದೀಶ್‌ಕುಮಾರ್, ಉಪಾಧ್ಯಕ್ಷರಾದ ಪುರುಷೋತ್ತಮ್, ಬಿ.ಮಂಜುನಾಥ್, ರತ್ನಪ್ಪ, ನಿಕಟಪೂರ್ವ ಅಧ್ಯಕ್ಷರುಗಳಾದ ಕೆ.ಎನ್.ಮಂಜುನಾಥ್,ಕೆ.ಬಿ.ಅಶೋಕ್, ಸರ್ವೇ ಇಲಾಖೆಯ ಸಂದೀಪ್,ಸುನೀಲ್ ಮತ್ತಿತರರಿದ್ದರು.