• Fri. Oct 11th, 2024

ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಮುಂದಾಗಿ ಕನ್ನಡಿಗರ ತಾಳ್ಮೆ ಕೆಣಕದಿರಿ : ರೈತ ಸಂಘ

PLACE YOUR AD HERE AT LOWEST PRICE

ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊರಟಿರುವುದು ಕನ್ನಡಿಗರ ತಾಳ್ಮೆಯನ್ನೇ ಕೆಣಕುವಂತಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಮಣ್ಣಿನ ಮಕ್ಕಳ ಜೀವನಾಡಿ ಗ್ರಾಮೀಣ ಪ್ರದೇಶದ ರೈತರ ಸ್ವಾಭಿಮಾನ ಕೊಟ್ಟಿರುವಂತಹ ಕೆಎಂಎಫ್ ನಂದಿನಿಯನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವ ಹೇಳಿಕೆ ನೀಡಿರುವ ರಾಜಕಾರಣಿಗಳು ಎಷ್ಟು ಜನ ಹೈನೋದ್ಯಮದಲ್ಲಿ ತೊಡಗಿ ಹಸುವಿನ ಗಂಜಲ, ಸಗಣಿಯನ್ನು ಎತ್ತಿ ದುಬಾರಿಯಾಗಿರುವ ಪಶು ಆಹಾರದ ನಡುವೆ ಕಷ್ಟಪಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ರಾಜ್ಯದಲ್ಲಿ ಪ್ರತಿನಿತ್ಯ ೮೫ ಲಕ್ಷಕ್ಕೂ ಅಧಿಕ ಹಾಲನ್ನು ಶೇಖರಿಸುತ್ತದೆ. ೨೦೨೪-೨೫ರ ವೇಳೆಗೆ ಪ್ರತಿನಿತ್ಯ ೧೩೫.೫೩ ಲಕ್ಷ ಲೀಟರ್ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ೮ ಲಕ್ಷಕ್ಕೂ ಹೆಚ್ಚಿನ ರಾಸುಗಳನ್ನು ಗುಂಪುವಿಮೆಗೆ ಒಳಪಡಿಸುವುದು ನಂದಿನಿಯ ಹೆಚ್ಚುಗಾರಿಕೆಯೂ ಆಗಿದೆ ಎಂದು ಹೇಳಿದರು.

ಪ್ರತಿನಿತ್ಯ ರೈತರಿಗೆ ೩೦ ಕೋಟಿರೂ ಅಧಿಕ ಹಣವನ್ನು ಪಾವತಿ ಮಾಡುತ್ತಿರುವುದಲ್ಲದೆ ೧೭೦ಕ್ಕೂ ಹೆಚ್ಚು ನಂದಿನಿ ಉತ್ಪನ್ನಗಳನ್ನು ಕೆಎಂಎಫ್ ಉತ್ಪಾದಿಸುತ್ತಿರುವುದು ಉಲ್ಲೇಖಾರ್ಹ. ವಿದೇಶಗಳಿಗೂ ಕೆನೆರಹಿತ ಹಾಲಿನ ಫೌಡರ್, ಗಡಿ ಭಾಗಕ್ಕೆ ಗುಡ್‌ಲೈಫ್ ಉತ್ಪನ್ನಗಳನ್ನು ರವಾನಿಸುವಲ್ಲೂ ಯಶಸ್ವಿಯಾಗಿದೆ.

ಪ್ರಸ್ತುತ ಅಮುಲ್ ಅಧಿಪತ್ಯ ಹೊಂದಿರುವ ಉತ್ತರ ಭಾರತದ ರಾಜ್ಯಗಳಲ್ಲಿ ಹಾಲಿನ ಇಳುವರಿ ಗಣನೀಯವಾಗಿ ಇಳಿಕೆ ಕಂಡಿದೆ. ಇಂತಹ ಸಂದರ್ಭದಲ್ಲಿ ತಮ್ಮದೇ ಅಸ್ತಿತ್ವ ಹೊಂದಿರುವ ನಂದಿನಿಯನ್ನು ಅಮುಲ್‌ನೊಂದಿಗೆ ವಿಲೀನ ಮಾಡುವ ಸೂಚನೆಯನ್ನು ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಕರ್ನಾಟಕ ಹೈನೋದ್ಯಮದ ಕೊನೆಯ ಮೊಳೆ ಹೊಡೆಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಕೋಟ್ಯಾಂತರ ರೈತರ ಜೀವನಾಡಿಯಾಗಿರುವ ಹೈನೋದ್ಯಮದ ಮರಣಶಾಸನ ಬರೆಯುವ ನಂದಿನಿ ಅಮುಲ್ ವಿಲೀನ ಪ್ರಕ್ರಿಯೆ ಕೈಬಿಡಬೇಕು. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಮತ ಕೇಳಲು ಬರುವ ಎಲ್ಲಾ ಪಕ್ಷದ ಶಾಸಕರುಗಳಿಗೆ ಮುಖಕ್ಕೆ ಸಗಣಿ ಬಳಿಯುವ ಚಳುವಳಿ ಮಾಡುವ ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರು, ನಂದಿನಿ ಜೊತೆ ಅಮುಲ್ ವಿಲೀನದ ಯಾವುದೇ ಮಾಹಿತಿ ಇಲ್ಲ. ಆ ರೀತಿ ಏನಾದರೂ ಆದೇಶ ಬಂದರೆ ರೈತರ ಹಿತದೃಷ್ಠಿಯಿಂದ ವಿಲೀನಕ್ಕೆ ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ರೈತರಿಗೆ ಭರವಸೆ ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ, ಮಂಗಸAದ್ರ ತಿಮ್ಮಣ್ಣ, ವೆಂಕಟೇಶಪ್ಪ, ಕುವ್ವಣ್ಣ, ಗೋವಿಂದಪ್ಪ, ಯಾರಂಘಟ್ಟ ಗಿರೀಶ್, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಹರೀಶ್, ಸಂದೀಪ್‌ರೆಡ್ಡಿ, ಸಂದೀಪ್‌ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಫಾರೂಖ್‌ಪಾಷ, ಬಂಗಾರಿ ಮಂಜು, ಭಾಸ್ಕರ್, ಬಾಬು, ಗುರುಮೂರ್ತಿ, ವಿಶ್ವ, ವಿಜಯಪಾಲ್, ಮುದುವಾಡಿ ಚಂದ್ರಪ್ಪ ಮುಂತಾದವರಿದ್ದರು.

ಸುದ್ದಿ ಓದಿ ಹಂದಿ

ಇದನ್ನೂ ಓದಿ: ಬ್ಲಡ್ ಕ್ಯಾನ್ಸರನ್ನೇ ಗೆದ್ದು ಹೊಸ ಬದುಕಿನತ್ತ ಮರಳಿದ ಬಾಲಕಿ – ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಿದ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಧನ್ಯವಾದ

Related Post

ಗಾಂಧೀವನದಲ್ಲೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಕನ್ನಡ ಪರ ಸಂಘನೆಗಳ ಒಕ್ಕೂರಲಿನ ತೀರ್ಮಾನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಹತ್ತು ಲಕ್ಷ ಸಸಿ ನೆಡುವ ಯೋಜನೆ : ಸಿದ್ದಗಂಗಯ್ಯ
ಗ್ರಾಮ ಪಂಚಾಯಿತಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವಿವಿಧ  ನ್ಯಾಯಯುತ ಬೇಡಿಕೆಗಳನ್ನು  ಈಡೇರಿಸುವಂತೆ  ಒತ್ತಾಯಿಸಿ, ನಗರದ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಜಿಲ್ಲಾ ಪಿಡಿಒ ಹಾಗೂ ಸಿಬ್ಬಂದಿಗಳ  ವೃಂದ ಸಂಘಟನೆಗಳ ವತಿಯಿಂದ ಅನಿರ್ದಿಷ್ಟವಾಧಿ ಪ್ರತಿಭಟನೆ

Leave a Reply

Your email address will not be published. Required fields are marked *

You missed

error: Content is protected !!