• Thu. Apr 25th, 2024

ಜ.೯ ಸಿದ್ದರಾಮಯ್ಯ ಕೋಲಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ – ಕೆ.ಎಚ್.ಮುನಿಯಪ್ಪ

PLACE YOUR AD HERE AT LOWEST PRICE

ಕೋಲಾರ ನಗರದಲ್ಲಿ ಜ.೯ ರಂದು ನಡೆಯಲಿರುವ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುವೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಜ.೮ ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್‌ಸಿ ಎಸ್‌ಟಿ ಘಟಕದವತಿಯಿಂದ ಐಕ್ಯತಾ ಸಮಾವೇಶವನ್ನು ಆಯೋಜಿಸಿರುವ ಕುರಿತು ವಿವರಿಸಿದರು.

ಇದೇ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಜ.೯ರಂದು ಸಿದ್ದರಾಮಯ್ಯ ಕೋಲಾರಕ್ಕೆ ಆಗಮಿಸುತ್ತಿರುವ ಕುರಿತು ತಮಗೆ ತಿಳಿದಿದೆ, ತಮ್ಮೊಂದಿಗೆ ಈ ಕುರಿತು ಮಾತನಾಡಿದ್ದಾರೆ, ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದರು.

ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾಗಿದ್ದಾರೆ, ಅವರ ಕಾರ್ಯಕ್ರಮವೆಂದರೆ ಅದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವೇ ಆಗಿರುತ್ತದೆ, ಈ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದರು.

ಕೋಲಾರ ಕಾಂಗ್ರೆಸ್‌ನಲ್ಲಿ ಘಟಬಂಧನ್ ಎಂಬಿತ್ಯಾದಿ ಗುಂಪುಗಳಿಲ್ಲ, ಇವೆಲ್ಲವೂ ಮಾದ್ಯಮಗಳ ಸೃಷ್ಟಿ, ೨೦೨೩ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತು ೨೦೨೪ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ಗಾಂಽ ನೇತೃತ್ವದಲ್ಲಿ ಕೇಂದ್ರ ಸರಕಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಽಕಾರಕ್ಕೆ ತರುವುದಷ್ಟೇ ತಮ್ಮ ಪ್ರಯತ್ನ ಎಂದರು.
ಕೋಲಾರ ಕಾಂಗ್ರೆಸ್‌ನಲ್ಲಿ ಹಿಂದೆ ತಮಗಾಗಿರುವ ಎಲ್ಲಾ ಕಹಿ ಅನುಭವಗಳನ್ನು ಮರೆತಿದ್ದೇನೆ, ಪಕ್ಷ ಸಂಘಟನೆಯ ದೃಷ್ಟಿಯಿಂದ ಎಲ್ಲಾ ಸಮುದಾಯಗಳನ್ನು ಕಾಂಗ್ರೆಸ್ ಪಕ್ಷದತ್ತ ಸಂಘಟಿಸುವುದು ತಮ್ಮ ಪ್ರಯತ್ನವಾಗಿದೆ ಎಂದರು.

ಜ.೮ ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಐಕ್ಯತಾ ಸಮಾವೇಶದಲ್ಲಿ ರಾಜ್ಯವ್ಯಾಪಿ ಸುಮಾರು ೫ ಲಕ್ಷ ಮಂದಿ ಸೇರುವ ಗುರಿ ಹೊಂದಲಾಗಿದೆ, ಕೋಲಾರ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸುತ್ತಿದ್ದಾರೆ ಎಂದರು.

ಹಿಂದೆ ನವೆಂಬರ್೧೩ ರಂದು ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ ಸಂದರ್ಭದಲ್ಲಿ ಗುಜರಾತ್ ಚುನಾವಣಾ ಪ್ರಚಾರದ ಉಸ್ತುವಾರಿ ಹೊತ್ತುಕೊಂಡಿದ್ದ ಕಾರಣಕ್ಕಾಗಿ ಕೆ.ಎಚ್.ಮುನಿಯಪ್ಪ ಭಾಗವಹಿಸಿರಲಿಲ್ಲ. ಆದರೂ, ಅವರ ಗೈರು ಹಾಜರಿ ನಾನಾ ರಾಜಕೀಯ ಕಾರಣಗಳಿಗೆ ಎಡೆ ಮಾಡಿಕೊಟ್ಟಿತ್ತು.

ಇದೀಗ ಜ.೯ ರ ಸಿದ್ದರಾಮಯ್ಯ ಕೋಲಾರ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸುವೆ ಎಂದು ಹೇಳುವ ಮೂಲಕ ತಮ್ಮ ಮೇಲಿದ್ದ ಅನುಮಾನಗಳನ್ನು ಕೆ.ಎಚ್.ಮುನಿಯಪ್ಪ ನಿವಾರಿಸುವ ಪ್ರಯತ್ನ ಮಾಡಿದ್ದಾರೆ.

ಕೋಲಾರ ಜಿಲ್ಲಾ ಕಾಂಗ್ರೆಸ್‌ನಲ್ಲಿ ಮಾಜಿ ಸ್ಪೀಕರ್ ಹಾಲಿ ಶ್ರೀನಿವಾಸಪುರಶಾಸಕ ರಮೇಶ್‌ಕುಮಾರ್ ಹಾಗೂ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ನಡುವೆ ಕಳೆದ ಲೋಕಸಭಾ ಚುನಾವಣೆ ನಂತರ ವೈಮನಸ್ಯ ಭುಗಿಲೆದ್ದು ಇಬ್ಬರೂ ನಾಯಕರು ಒಂದೇ ವೇದಿಕೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈಗ ಜ.೯ ರ ವೇದಿಕೆಯಲ್ಲಿ ಈ ಇಬ್ಬರೂ ಒಟ್ಟಾಗಿ ಕಾಣಿಸಿಕೊಳ್ಳುವುದು ಸಾರ್ವಜನಿಕವಾಗಿಯೂ ರಾಜಕೀಯವಾಗಿಯೂ ಕುತೂಹಲ ಕೆರಳಿಸಿದೆ.

ಸುದ್ದಿ ಓದಿ ಹಂಚಿ ಪ್ರೋತ್ಸಾಹಿಸಿ

ಇದನ್ನೂ ಓದಿ:

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!