• Tue. Apr 23rd, 2024

ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿಯಾಗಬೇಕು:ಮಾಜಿ ಶಾಸಕ ವೆಂಕಟಮುನಿಯಪ್ಪ

PLACE YOUR AD HERE AT LOWEST PRICE

ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಿ ಬರುವ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಮಲವನ್ನು ಅರಳಿಸುವುದೇ ನಮ್ಮ ಗುರಿಯಾಗಬೇಕೆಂದು ಮಾಜಿ ಶಾಸಕ ಬಿ.ವಿ.ವೆಂಕಟಮುನಿಯಪ್ಪ ಹೇಳಿದರು.
ಬಂಗಾರಪೇಟೆ ಪಟ್ಟಣದ ದೇಶಿಹಳ್ಳಿ ತಮ್ಮ ನಿವಾಸದಲ್ಲಿ ನಡೆದ ಬೂತ್ ವಿಜಯ ಅಭಿಯಾನದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದ ಪ್ರಮುಖರು ಈಗನಿಂದಲೇ ಎಚ್ಚರಿಕೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಆಡಳಿತ ನೀಡುವ ಮೂಲಕ ಜನಸಾಮಾನ್ಯರ ವಿಶ್ವಾಸಗಳಿಸುತ್ತಿದೆ, ಪಕ್ಷದ ಕಾರ್ಯಕರ್ತರು ಡಬಲ್ ಇಂಜಿನ್ ಸರ್ಕಾರಗಳ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಜನರಿಗೆ ಮುಟ್ಟುವ ಹಾಗೆ ಮನೆಮನೆಗೂ ತೆರಳಿ ಪ್ರಚಾರ ಮಾಡಿ ಕ್ಷೇತ್ರದಲ್ಲಿ ಬಿಜೆಪಿ ಭಾವುಟ ಹಾರಾಡಲು ಶ್ರಮಿಸಬೇಕು ಎಂದು ತಿಳಿಸಿದರು.
ಬೂತ್ ವಿಜಯ ಅಭಿಯಾನ ಜಿಲ್ಲಾ ಸಂಚಾಲಕ ಕೆ.ಚಂದ್ರಾರೆಡ್ಡಿ ಮಾತನಾಡಿ ಡಬಲ್ ಇಂಜಿನ್ ಸರ್ಕಾರ ಹಿಂದೆಂದೂ ಜನರು ಕಂಡು ಕಾಣದಷ್ಟು ಅಭಿವೃದ್ದಿ ಮಾಡುತ್ತಿದೆ.
ಪ್ರಧಾನಿ ಮೋದಿ ಸಂಕಷ್ಟದ ಸಮಯದಲ್ಲಿ ಸಮಯ ಪ್ರಜೆÐಯಿಂದ ನಿಬಾಯಿಸಿ ದೇಶವನ್ನು ಸಂರಕ್ಷಿಸಿದ್ದಾರೆ. ಕೊರೋನಾ ಸಮಯದಲ್ಲಿ ಎಲ್ಲರಿಗೂ ಉಚಿತ ಔಷಧಿ ನೀಡಿ ಜನರ ಜೀವ ರಕ್ಷಿಸಿ,ಹೊರ ದೇಶಕ್ಕೂ ಔಷಧಿಗಳನ್ನು ರವಾನೆ ಮಾಡಿ ಸ್ವಾವಲಂಭಿ ದೇಶವಾಗಿ ರೂಪಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಸಹ ಬಡವರ ಆರ್ಥಿಕಾಭಿವೃದ್ದಿಗೆ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿ ಬಡವರ ಆಶಾಕಿರಣವಾಗಿದ್ದಾರೆ.
ಇಂತಹ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದರೆ ರಾಜ್ಯ ಮತ್ತಷ್ಟು ಅಭಿವೃದ್ದಿಯಾಗುವುದರಲ್ಲಿ ಅನುಮಾನವಿಲ್ಲ, ಆದ್ದರಿಂದ ಪಕ್ಷದ ಕಾರ್ಯಕರ್ತರು, ಮುಖಂಡರು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಒಮ್ಮತದಿಂದ ಗೆಲ್ಲಿಸುವ ಪಣ ತೊಡಬೇಕೆಂದು ಕರೆ ನೀಡಿದರು.
ಈ ವೇಳೆ ಬೂತ್ ವಿಜಯ ವಿಸ್ತಾರಕ ಆನಂದ್, ಮಂಡಲ ಅಧ್ಯಕ್ಷ ನಾಗೇಶ್, ಮಾಜಿ ಜಿಪಂ ಸದಸ್ಯ ಬಿ.ವಿ.ಮಹೇಶ್, ಶ್ರೀನಿವಾಸಗೌಡ, ಎಸ್‍ಸಿ ಮೋರ್ಚಾ ಅಧ್ಯಕ್ಷ ಅಮರೇಶ್, ಪ್ರಾರ್ಥಸಾರಥಿ, ಚೌಡಪ್ಪ, ಬತ್ತಲಹಳ್ಳಿ ಮಂಜುನಾಥ್, ಹನುಮಪ್ಪ, ಶಶಿಕುಮಾರ್,  ಅಧ್ಯಕ್ಷೆ ಕಲಾವತಿ, ಹೆಚ್.ಶ್ರೀನಿವಾಸ್, ಯುವ ಮೋರ್ಚಾ ಅಧ್ಯಕ್ಷ ಬಿಂದು ಮಾಧವ, ಪುರಸಭೆ ಸದಸ್ಯ ಮಹೇಶ್, ಮೆಹಬೂಬ್ ಮತ್ತಿತರರು ಇದ್ದರು.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!