• Fri. Apr 26th, 2024

ಕೋಲಾರ ಜಿಲ್ಲೆಯಲ್ಲಿ ಚೆನ್ನೈಕಾರಿಡಾರ್ ಮತ್ತಿತರ ಹೆದ್ದಾರಿ ಪರಿಶೀಲಿಸಿದ ಸಚಿವ ನಿತಿನ್ ಗಡ್ಕರಿ ಎನ್‌ಹೆಚ್-೭೫ನ್ನು ಷಟ್ಪಥ ರಸ್ತೆಯಾಗಿ ಅಭಿವೃದ್ದಿಪಡಿಸಲು ಸಂಸದ ಮುನಿಸ್ವಾಮಿ ಮನವಿ

PLACE YOUR AD HERE AT LOWEST PRICE

ರಾಷ್ಟ್ರೀಯ ಹೆದ್ದಾರಿ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರ್ ಅವರು ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿನ ಚೆನ್ನೈಕಾರಿಡಾರ್  ಹಾಗೂ ವಿವಿಧ ಹೆದ್ದಾರಿ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಿ, ಜಿಲ್ಲೆಯಲ್ಲಿ ಹಾದು ಹೋಗುವ ಎನ್.ಹೆಚ್ ೭೫ ರಾಷ್ಟ್ರೀಯ ಹೆದ್ದಾರಿಯನ್ನು ಷಟ್ಪಥ ರಸ್ತೆಯನ್ನಾಗಿ ಅಭಿವೃದ್ದಿಪಡಿಸಲು ಶೀಘ್ರ ಕ್ರಮ ಕೈಗೊಳ್ಳಲು ಸಂಸದ ಎಸ್. ಮುನಿಸ್ವಾಮಿ ಮನವಿ ಮಾಡಿದರು.

ಜಿಲ್ಲೆಯ ವಿವಿಧೆಡೆಗಳಲ್ಲಿ ಹೆದ್ದಾರಿಗಳ ಕಾಮಗಾರಿ ವೀಕ್ಷಿಸಿದ ನಿತಿನ್ ಗಡ್ಕರ್ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿದ ಸಂಸದರು, ರಾಜ್ಯದ ಆಂಧ್ರದ ಗಡಿಯಿಂದ ಹೊಸಕೋಟೆವರೆಗೂ ವಾಹನ ದಟ್ಟಣೆ ಹೆಚ್ಚಿರುವ ಕಾರಣ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು, ಹಾಲಿ ಇರುವ ಚತುಷ್ಪಥ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಶೀಘ್ರ ಬದಲಿಸಲು ಅಗತ್ಯ ಕ್ರಮವಹಿಸಲು ಮನವಿ ಮಾಡಿದರು.

ತಮ್ಮ ಮನವಿಗೆ ಸ್ಪಂದಿಸಿ ಈಗಾಗಲೇ ಷಟ್ಪಥ ರಸ್ತೆಯಾಗಿ ಅಭಿವೃದ್ದಿಪಡಿಸಲು ತಾವು ಅನುಮತಿ ನೀಡಿದ್ದು, ಆದಷ್ಟು ಶೀಘ್ರ ಡಿಪಿಆರ್ ಮಾಡಿ ಬೇಗ ಕಾಮಗಾರಿ ಆರಂಭಿಸಲು ಮನವಿ ಮಾಡಿ, ಕಾಮಗಾರಿಯ ಗುಣಮಟ್ಟದಿಂದ ಕೂಡಿರಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲು ಕೋರಿದರು.

ಕೋಲಾರ ನಗರದಲ್ಲಿ ವಾಹನ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲಾರ ಸುತ್ತಮುತ್ತಲೂ ಕೈಗಾರಿಕೆಗಳು ಬರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸಂಚಾರದ ಸಮಸ್ಯೆ ಕಾಡುವ ಆತಂಕವಿದ್ದು, ಕೂಡಲೇ ಕೋಲಾರ ನಗರಕ್ಕೆ ರಿಂಗ್ ರೋಡ್ ಮಂಜೂರು ಮಾಡಿ, ಅಗತ್ಯ ಅನುದಾನ ಬಿಡುಗಡೆ ಮಾಡಲು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು.
ರಾಷ್ಟಿçÃಯ ಹೆದ್ದಾರಿ ೭೫ ಹಾದು ಹೋಗುವ ನಂಗಲಿ-ಹೊಸಕೋಟೆ ನಡುವೆ ಜಿಲ್ಲೆಯ ವಿವಿಧೆಡೆ ಜನ ಸಂಚಾರಕ್ಕೆ ಅಗತ್ಯ ಮೇಲ್ಸೇತುವೆ, ಅಂಡರ್‌ಪಾಸ್ ಇಲ್ಲದ ಕಾರಣ ಅಪಘಾತಗಳು ಹೆಚ್ಚು ಆಗುತ್ತಿದ್ದು, ಆತಂಕಕಾರಿಯಾಗಿದೆ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದ ಅವರು, ಗ್ರಾಮಗಳ ಸಮೀಪ ಅಗತ್ಯವಿರುವ ಕಡೆಗಳಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮವಹಿಸಲು ಮನವಿ ಮಾಡಿದರು.

 

ಚಿಂತಾಮಣಿ-ಬೆಂಗಳೂರು ಬೈಪಾಸ್‌ರಸ್ತೆ, ಶ್ರೀನಿವಾಸಪುರ ರಸ್ತೆ, ಮುಳಬಾಗಿಲು-ವಿಕೋಟಾ ರಸ್ತೆ ಸೇರಿದಂತೆ ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿಗಳ ಅಭಿವೃದ್ದಿಗೆ ಸುಮಾರಿ ೧೫೦೦ ಕೋಟಿ ರೂ ನೀಡಿರುವ ಕೇಂದ್ರ ಸಚಿವರಿಗೆ ಸಂಸದ ಮುನಿಸ್ವಾಮಿ ಧನ್ಯವಾದ ಸಲ್ಲಿಸಿದರು.

ಕೋಲಾರ ಜಿಲ್ಲೆಯಲ್ಲಿ ಹಾದು ಹೋಗುವ ಚೆನ್ನೈ ಕಾರಿಡಾರ್ ಸೇರಿದಂತೆ ವಿವಿಧ ಹೆದ್ದಾರಿಗಳ ವೀಕ್ಷಣೆಗೆ ಆಗಮಿಸಿದ್ದ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಹೂಗುಚ್ಚ ನೀಡಿ ವಂದಿಸುವ ಮೂಲಕ ಮಾಜಿ ಸಚಿವ ವರ್ತೂರು ಪ್ರಕಾಶ್ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಎಂಟಿಬಿ ನಾಗರಾಜ್, ಸಚಿವ ಸಿಸಿ ಪಾಟೀಲ್, ಸಂಸದ ಎಸ್. ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ ವೇಣುಗೋಪಾಲ್ , ಮಾಲೂರಿನ ಮಾಜಿ ಶಾಸಕ ಮಂಜುನಾಥಗೌಡ, ಕೆಜಿಎಫ್ ಮಾಜಿ ಶಾಸಕ ವೈ.ಸಂಪAಗಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಜರಿದ್ದರು.

 

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!