• Thu. Sep 28th, 2023

ವಿದ್ಯಾರ್ಥಿ ವೇತನವನ್ನು ಮರು ಜಾರಿಗೊಳಿಸಲು ಒಕ್ಕೂಟದ ಅಧ್ಯಕ್ಷ ಎಂ.ಮಂಜುನಾಥ್‌ ಒತ್ತಾಯ.

PLACE YOUR AD HERE AT LOWEST PRICE

ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು  ರದ್ದು ಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯವಾಗಿದ್ದು ರದ್ದುಗೊಳಿಸಿರುವ ವಿದ್ಯಾರ್ಥಿ ವೇತನವನ್ನು ಮರು ಜಾರಿಗೊಳಿಸಬೇಕೆಂದು ತಾಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷ ಕುಂಬಾರಪಾಳ್ಯ ಮಂಜುನಾಥ್ ಒತ್ತಾಯಿಸಿದರು.
ಪಟ್ಟಣದ ಹಿಂದುಳಿದ ವರ್ಗಗಳ ಕಚೇರಿಯಲ್ಲಿ ನೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು ಹಿಂದುಳಿದ ವರ್ಗದ ಮಕ್ಕಳು ಹೈಸ್ಕೂಲಿಗೆ ದಾಖಲಾಗುವವರ ಪ್ರಮಾಣ ಶೇ.೭೫ ರಷ್ಟಿದೆ. ವಿದ್ಯಾರ್ಥಿ ವೇತನ ಕಡಿತದಿಂದ  ಶೇ.೨೫ ರಷ್ಟು ಮಕ್ಕಳು ಶಾಲಾ ಶಿಕ್ಷಣದಿಂದ ಹೊರಗಿದ್ದಾರೆಂದರು.
ಮಕ್ಕಳಿಗೆ ಬಿಸಿಯೂಟ, ಸಮವಸ್ತ್ರ, ಶೂ, ಕೆನೆ ಭರಿತ ಹಾಲು, ಸೈಕಲ್ ಹೀಗೆ ವಿವಿಧ ಸೌಲಭ್ಯ ನೀಡಿ ಶಾಲೆಗೆ ಕರೆತಂದು ವಿದ್ಯಾಭ್ಯಾಸ ನೀಡಿ  ದಮನಿತರ ಮಕ್ಕಳು ಉದ್ಧಾರವಾಗಲಿ ವಿದ್ಯಾರ್ಥಿ ವೇತನ ಜೊತೆ ಈ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರವು ಈಗ ಏಕಾಏಕಿ ಒಂದರಿಂದ ಎಂಟನೇ ತರಗತಿವರೆಗಿನ ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ರದ್ದುಗೊಳಿಸಿ ಆದೇಶ ಹೊರಡಿಸಿರುವುದು ದಲಿತ- ಆದಿವಾಸಿ- ಹಿಂದುಳಿದ- ಅಲ್ಪಸಂಖ್ಯಾತ ವಿರೋಧಿ ಸಂವಿಧಾನ ದ್ರೋಹಿ ಕೃತ್ಯವಾಗಿದೆ.
ವಾರ್ಷಿಕ ೨.೫ ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ದಮನಿತ ವರ್ಗಗಳ ಮಕ್ಕಳಿಗೆ ತಿಂಗಳಿಗೆ ತಲಾ ೨೨೫ರೂ, ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳಿಗೆ ತಲಾ ೫೨೫ರೂ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿತ್ತು.
ಕೇಂದ್ರ ಸರ್ಕಾರದ ಈ  ನಿರ್ಧಾರದಿಂದಾಗಿ ಸ್ಕಾರ‍್ಶಿಪ್ಗೆ ಅರ್ಜಿ ಸಲ್ಲಿಸಿರುವ ಲಕ್ಷಾಂತರ ಮಕ್ಕಳು ಅನ್ಯಾಯಕ್ಕೆ ಒಳಗಾಗಲಿದ್ದಾರೆ. ದೇಶದಲ್ಲಿ ಸದ್ಯ ೧೪.೮೯ ಲಕ್ಷ ಶಾಲೆಗಳಿದ್ದುಇದರಲ್ಲಿ ೧೦.೨೨ ಲಕ್ಷ ಸರ್ಕಾರಿಶಾಲೆಗಳು.
ಈ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಸಂಖ್ಯೆ ೨೨.೫೬ ಕೋಟಿ. ಆರ್ಥಿಕ ಮಾನದಂಡದ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಶೇ.೯೦ಕ್ಕೂ ಹೆಚ್ಚು ಪ್ರಮಾಣದ ಮಕ್ಕಳು ಆರ್ಥಿಕವಾಗಿ ಹಿಂದುಳಿದವರು.
ಹೀಗಾಗಿ ಇವರೆಲ್ಲರೂ ವಿದ್ಯಾರ್ಥಿ ವೇತನಕ್ಕೆ ಅರ್ಹರು. ಕೇಂದ್ರ  ಸರ್ಕಾರ ಈ ಮಕ್ಕಳ ಶಿಕ್ಷಣದ ಮೇಲೆ ಪ್ರಹಾರ ನಡೆಸಲು ಹೊರಟಿದೆ ಎಂದರಲ್ಲದೆ, ಏಕಾ ಏಕಿ ವಿದ್ಯಾರ್ಥಿ ವೇತನ ನಿಲ್ಲಿಸುವುದರಿಂದ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆಯಾಗಲು ಕಾರಣವಗಿದೆ.
ಈ ವೇಳೆ ಒಕ್ಕೂಟದ ಪ್ರಧಾನ ಕರ‍್ಯದರ್ಶಿ ಚಿನ್ನಿ, ವೆಂಕಟೇಶ್, ಗೌರವಾಧ್ಯಕ್ಷ ಎಲ್.ರಾಮಕೃಷ್ಣ, ಉಪಾಧ್ಯಕ್ಷ ಎಸ್.ವೆಂಕಟೇಶ್,  ಆನಂದ್‌ಕುಮಾರ್, ವಕೀಲ ಅಮರೇಶ್, ವೆಂಕೋಬರಾವ್ ಪಡತಾರೆ, ಕೆ.ರಾಮಮೂರ್ತಿ, ವೆಂಕಟೇಶಪ್ಪ, ಆದಿನಾರಾಯಣ, ಕೆ.ರಮೇಶ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!