• Thu. May 2nd, 2024

ಮಾಲೂರಿನಲ್ಲಿ ಜ. 14ಕ್ಕೆ ಸಿದ್ದರಾಮೇಶ್ವರ ಜಯಂತಿ ಆಚರಣೆ:ಶಾಸಕ ನಂಜೇಗೌಡ.

PLACE YOUR AD HERE AT LOWEST PRICE

ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಜನವರಿ 14ರಂದು ಮಾಲೂರು ತಾಲೂಕು ಆಡಳಿತ ಹಾಗೂ
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಬೋವಿ ಸಮುದಾಯದ ಸಹಕಾರದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಶ್ರೀ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ ಎರಡು ವರ್ಷಗಳಿಂದ ತಾಲೂಕಿನಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಎಲ್ಲಾ ಜಯಂತಿ ಹಾಗೂ ಸರ್ಕಾರಿ
ಕಾರ್ಯಕ್ರಮಗಳನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು ಪ್ರಸಕ್ತ ವರ್ಷ ಕೋವಿಡ್ ಸೋಂಕು ನಿಯಂತ್ರಣಗೊಂಡಿರುವುದರಿಂದ ಈ ವರ್ಷದಲ್ಲಿ ಎಲ್ಲಾ ಜಯಂತಿಗಳನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಗ್ರಾಮ ಪಂಚಾಯಿತಿಗಳ ಪಲ್ಲಕ್ಕಿ ಉತ್ಸವಗಳು ಭಾಗವಹಿಸಲಿವೆ.
ಸಿದ್ದರಾಮೇಶ್ವರ ಭಾವಚಿತ್ರ ಮೆರವಣಿಗೆಯ ನಂತರ ಪಟ್ಟಣದ ಬೋವಿ ವಿದ್ಯಾರ್ಥಿ ನಿಲಯದ ಸಮುದಾಯ ಭವನದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮದಲ್ಲಿ ಬೋವಿ ಸಮುದಾಯದ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ, ಪದವಿ
ತರಗತಿಗಳಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ತಾಲೂಕು ಆಡಳಿತ ಹಾಗೂ ಬೋವಿ ಸಮುದಾಯದ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ತಾಲೂಕಿನ ಸರ್ಕಾರಿ ವಿವಿಧ ಇಲಾಖೆಗಳ ಅಧಿಕಾರಿಗಳು ಭೋವಿ ಸಮುದಾಯದವರು ಇತರೆ ಸಂಘ ಸಮುದಾಯದ
ಪದಾಧಿಕಾರಿಗಳು ಸಾರ್ವಜನಿಕರು ಭಾಗವಹಿಸುವಂತೆ ಕೋರಲಾಯಿತು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಮಲ್ಲಿಕಾರ್ಜುನ್, ತಾ.ಪಂ ಇಒ ಮುನಿರಾಜು, ಪುರಸಭಾ ಮುಖ್ಯ ಅಧಿಕಾರಿ ಪವನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ರವಿಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನೇಗೌಡ, ಎಎಸ್‍ಐ ಪ್ರಕಾಶ್, ತಾಲೂಕು ಬೋವಿ ಸಮಾಜದ ಅಧ್ಯಕ್ಷ ಹನುಮಪ್ಪ, ಮುಖಂಡರಾದ ಹೆಚ್.ಮುನಿಯಪ್ಪ, ಸೀನಪ್ಪ, ರಾಮಯ್ಯ, ವೆಂಕಟೇಶ್ ಮೂರ್ತಿ, ಜಯಂತಿ, ಜಿ.ಮುನಿಯಪ್ಪ, ಲೋಕೇಶ್, ಜಾಕಿ ಮಂಜು, ಹರಿಪ್ರಸಾದ್, ಅಶ್ವತಪ್ಪ, ವೆಂಕಟೇಶ್, ಸುಭಾಷ್, ಇನ್ನಿತರರು ಹಾಜರಿದ್ದರು.

 

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!