• Sat. May 11th, 2024

ಕೋಲಾರ ಜಿಲ್ಲಾ ಮಟ್ಟದ ಸಿರಿಧಾನ್ಯ ಜಾಗೃತಿ ನಡಿಗೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್‌ ಕುಮಾರ್ ಚಾಲನೆ

PLACE YOUR AD HERE AT LOWEST PRICE

ಸಿರಿಧಾನ್ಯಗಳ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಸಿರಿಧಾನ್ಯ ಜಾಗೃತಿ ನಡಿಗೆಗೆ ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ ಚಾಲನೆ ನೀಡಿದರು.

ಮಂಗಳವಾರ ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಕೋಲಾರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಿರಿಧಾನ್ಯಗಳ ಜಾಗೃತಿ ಮೂಡಿಸುವ ಕಾಲ್ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭಗೊಂಡು ಪವಾಸಿ ಮಂದಿರದ ಬಳಿ ಮುಕ್ತಾಯವಾದ ನಂತರ ಮಾತನಾಡಿದ ಅವರು, 2022-23ನೇ ಸಾಲಿನ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಘೋಷಿಸಲಾಗಿದೆ ಎಂದು ಅವರು ಹೇಳಿದರು.

ಸಿರಿಧಾನ್ಯಗಳು ಎನ್ನುವುದು ನಮ್ಮ ಅನಾದಿಕಾಲದಿಂದಲೂ ಬಂದಿದೆ. ಆಧುನಿಕ ಕಾಲದಲ್ಲಿ ಬೇರೆ ಬೇರೆ ಜಂಕ್‌ಫುಡ್‌ಗೆ ಯುವಜನತೆ ಮಾರುಹೋಗಿದ್ದು, ಇದರ ಪರಿಣಾಮ 40-45 ವಯಸ್ಸಿನ ನಂತರ ಆರೋಗ್ಯದ ಮೇಲೆ ಬೀರುವ ಪ್ರಭಾವನ್ನು ತಿಳಿದುಕೊಳ್ಳಬೇಕು. ಸಿರಿಧಾನ್ಯಗಳು ಎಂದರೆ ನವಣೆ, ಸಜ್ಜೆ, ರಾಗಿ, ಸಾಮೆ, ಊದಲು, ಇನ್ನು ಮುಂತಾದವುಗಳು ಇವುಗಳ ಉಪಯೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಸಿರಿಧಾನ್ಯಗಳನ್ನು ತಿನ್ನುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ಪ್ರಸಕ್ತ ಸಾಲಿನ ಸಾವಯವ ಮತ್ತು ಸಿರಿಧಾನ್ಯಗಳ ಮೇಳ ಹಾಗೂ ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನವನ್ನು ಜಿಲ್ಲಾ ತೋಟಗಾರಿಕೆ ನರ್ಸರಿ, ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಇದೇ ಜನವರಿ 13 ರಿಂದ ಮೂರು ದಿನಗಳ ಕಾಲ ಏರ್ಪಡಿಸಲಾಗಿದೆ.

ಈ ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ ಅಲಂಕರಿಸಿದ ವಿವಿಧ ಸ್ಥಬ್ಧಚಿತ್ರಗಳ ಪ್ರದರ್ಶನ, ವಿಶೇಷ ಮರಳಿನ ಕಲಾಕೃತಿ, ತೆಂಗಿನ ಗರಿಗಳಿಂದ ನಿರ್ಮತವಾದ ಮನೆ, ಹಣ್ಣು ಮತ್ತು ತರಕಾರಿಗಳಲ್ಲಿ ವಿವಿಧ ಕಲಾಕೃತಿಗಳ ಕೆತ್ತನೆ, ಒಳಾಂಗಣ ಉದ್ಯಾನವನದ ಪ್ರಾತ್ಯಕ್ಷಿಕೆ, ವಿದೇಶಿ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ, ಭೌಗೋಳಿಕ ಗುರುತಿನ ಬೆಳೆಗಳ ಪ್ರದರ್ಶನ, ಔಷಧಿ ಸುಗಂಧ ದ್ರವ್ಯ ಸಸಿಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ, ಎತ್ತಿನ ಗಾಡಿಯಲ್ಲಿ ಹೂ ಮತ್ತು ತರಕಾರಿಗಳ ಜೋಡಣೆ,ಜೇನು ಸಾಕಣೆ ಪ್ರಾತ್ಯಕ್ಷಿಕೆ, ಪುಷ್ಪರಂಗೋಲಿ ಸೇರಿದಂತೆ ಹಲವು ಆಕರ್ಷಣೆಗಳನ್ನು ಏರ್ಪಡಿಸಲಾಗಿದೆ.

ಇದಲ್ಲದೇ ರಂಗೋಲಿ ಸ್ಪರ್ದೆ, ಸಿರಿಧಾನ್ಯಗಳಲ್ಲಿ ವಿವಿಧ ಬಗೆಯ ತಿಂಡಿ ತಿನಿಸುಗ¼ನ್ನು ತಯಾರಿಸುವ ಸ್ಪರ್ದೆ ಹಾಗೂ ಜಿಲ್ಲೆಯ ಪ್ರಗತಿಪರ ರೈತರಿಗೆ “ರೈತ ಪ್ರಶಸ್ತಿ” ಪ್ರಧಾನ ಮಾಡುವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಕೃಷಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಕಾಲ್ನಡಿಗೆ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಿ. ದೇವರಾಜ್, ಪ್ರೊಬೆಷನರಿ ಐಎಎಸ್ ಅಧಿಕಾರಿ ವಿನಾಯಕ್, ಜಂಟಿ ಕೃಷಿ ನಿರ್ದೇಶಕಿ ರೂಪಾದೇವಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕಿ ಶೃತಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಕುಮಾರಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಹಿರಿಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!