• Tue. May 14th, 2024

ಮುಳಬಾಗಿಲು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಿ:ರೈತ ಸಂಘ ಒತ್ತಾಯ.

PLACE YOUR AD HERE AT LOWEST PRICE

ಮುಳಬಾಗಿಲು ನಗರದ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ನಕಲಿ ಕ್ಲಿನಿಕ್ ಹಾವಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ರೈತ ಸಂಘದಿಂದ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸುರೇಂದ್ರರಿಗೆ
ಮನವಿ ನೀಡಿ ಆಗ್ರಹಿಸಲಾಯಿತು.
ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ವೈದ್ಯರ ನಿರ್ಲಕ್ಷ್ಯವನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಆಸ್ಪತ್ರೆ, ಕ್ಲಿನಿಕ್ ವೈದ್ಯರು ಅಮಾಯಕ ಬಡ ರೋಗಿಗಳನ್ನು ಗುಣಮಟ್ಟದ ಚಿಕಿತ್ಸೆ ಹೆಸರಿನಲ್ಲಿ ಲಕ್ಷ ಲಕ್ಷ ಲೂಟಿ ಮಾಡಲು ಸರ್ಕಾರಿ ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಫಾರೂಖ್ ಪಾಷ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.
ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾಗುತ್ತಿದ್ದರೂ ಆಸ್ಪತ್ರೆಯಲ್ಲಿ  ಮಾತ್ರ ಮೂಲಭೂತ ಸೌಕರ್ಯಗಳ ಕೊರತೆ ಹೆಚ್ಚಾಗುತ್ತಿದೆಯೇ ಹೊರತು ಸಮಸ್ಯೆ ಬಗೆಹರಿಯುತ್ತಿಲ್ಲ. ಅನೇಕ ವರ್ಷಗಳಿಂದ ಮೂಲೆ ಗುಂಪಾಗಿರುವ ಸ್ಕ್ಯಾನಿಂಗ್ ಸೆಂಟರ್, ಆಂಬ್ಯುಲೆನ್ಸ್,  ಸ್ಕ್ಯಾನಿಂಗ್ ಕೇಂದ್ರ ಸರಿಪಡಿಸಬೇಕು.
ಆಸ್ಪತ್ರೆಯ ಅವ್ಯವಸ್ಥೆ ಕಣ್ಣ ಮುಂದೆ ಇದ್ದರೂ ಸ್ಥಳೀಯ ಶಾಸಕರಾಗಲಿ ಉಸ್ತುವಾರಿ ಸಚಿವರಾಗಲಿ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ತಲೆ ಕೆಡಿಸಿಕೊಳ್ಳದಿರುವುದು ನಾಚಿಕೆಯ ವಿಚಾರವಾಗಿದೆ ಎಂದು ಆರೋಪಿಸಿದರು.
ಜನನ ಪ್ರಮಾಣ ಪತ್ರ ಪಡೆಯಲು ತಂದೆ ಲಂಚ ನೀಡಿದರೆ ಅದೇ ತಂದೆ ಮರಣ ಹೊಂದಿದಾಗ ಮರಣ ಪ್ರಮಾಣ ಪತ್ರ ಪಡೆಯಲು ಮಗ ಹಣ ನೀಡಿ ಪ್ರಮಾಣ ಪತ್ರ ಪಡೆಯುವ ಮಟ್ಟಕ್ಕೆ ಆಸ್ಪತ್ರೆ ಹದಗೆಟ್ಟಿದೆ.
ರಾಜ್ಯ ಕಾರ್ಯಾಧ್ಯಕ್ಷ ಬಂಗಾರಿ ಮಂಜು ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಅನುಕೂಲವಾಗುವ ರಕ್ತ ಪರೀಕ್ಷೆ, ಕ್ಯಾಲ್ಸಿಯಂ ಔಷಧಿಗಳ ಲಭ್ಯತೆಯಿದ್ದರೂ ಇಲ್ಲಿನ ವೈದ್ಯರು ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ ಮತ್ತುಮೆಡಿಕಲ್ ಸ್ಟೋರ್‌ಗಳಿಗೆ ಹೊರಗಡೆ ಚೀಟಿ ಬರೆದುಕೊಡುವ ಸ್ಥಿತಿ ಇದೆ.
ಇವುಗಳನ್ನೇ ಬಂಡವಾಳವಾಗಿಸಿಕೊಂಡಿರುವ  ಮರಣ ಹೊಂದಿರುವವರ ಹೆಸರಿನಲ್ಲಿ ನಕಲಿ ವೈದ್ಯರ ಪ್ರಮಾಣ  ಪತ್ರಗಳನ್ನು ಪಡೆದು ಆಂಧ್ರ ತಮಿಳುನಾಡು ಮೂಲದ ವೈದ್ಯರು ಗಡಿಭಾಗಗಳಲ್ಲಿ ಕ್ಲಿನಿಕ್‍ಗಳನ್ನು ತೆರೆದು
ಗುಣಮಟ್ಟದ ಚಿಕಿತ್ಸೆ ಹೆಸರಿನಲ್ಲಿ ಬಡ ರೋಗಿಗಳ ಜೊತೆ ಚೆಲ್ಲಾಟವಾಡುತ್ತಿದ್ದರೂ ತಡೆಯಬೇಕಾದ  ಆರೋಗ್ಯಾಧಿಕಾರಗಳು ನೆಪ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
24 ಗಂಟೆಯಲ್ಲಿ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಆಸ್ಪತ್ರೆ ಮುಂದೆ ಅಹೋರಾತ್ರಿ ಧರಣಿ ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ನೀಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಾ.ಸುರೇಂದ್ರ  ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬೇಗನೆ ಸರಿಪಡಿಸಲಾಗುವುದು.  ಯಂತ್ರೋಪಕರಣಗಳ ನಿರ್ವಹಣೆಗೆ ಸಿಬ್ಬಂದಿ ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಮನವಿ ನೀಡುವಾಗ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್, ಜಿಲ್ಲಾ ಕಾರ್ಯಾಧ್ಯಕ್ಷ ಹೆಬ್ಬಣಿ ಆನಂದರೆಡ್ಡಿ, ತಾಲೂಕು ಪ್ರ.ಕಾ. ರಾಜೇಶ್, ಭಾಸ್ಕರ್, ಸುನೀಲ್‍ಕುಮಾರ್, ಮೇಲಗಾಣಿ ವಿಜಯ್‍ಪಾಲ್, ಅಂಬ್ಲಿಕಲ್ ಮಂಜುನಾಥ್, ಜುಬೇರ್ ಪಾಷ, ಆದಿಲ್ ಪಾಷ, ಗುರುಮೂರ್ತಿ, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್ ಮೊದಲಾದವರಿದ್ದರು‌

 

 

 

 

 

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!