• Sun. May 19th, 2024

ಬಂಗಾರಪೇಟೆ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತಾತ್ಕಾಲಿಕ ತಡೆ, ಹುಣಸನಹಳ್ಳಿ ವೆಂಕಟೇಶ್ ಆಕ್ರೋಶ.

PLACE YOUR AD HERE AT LOWEST PRICE

ಬಂಗಾರಪೇಟೆ ತಾಲೂಕು ಕಚೇರಿ ಮುಂಭಾಗದಲ್ಲಿ ಪತ್ರಕರ್ತರನ್ನು  ಉದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ರೈತ ಸೇನೆಯ ಅದ್ಯಕ್ಷ ಹುಣಸನಹಳ್ಳಿ ವೆಂಕಟೇಶ್  ಪಟ್ಟಣದ ಹೃದಯ ಭಾಗದಲ್ಲಿರುವ ಪುರಸಭೆ ವ್ಯಾಪ್ತಿಯ ಸರ್ವೇ ನಂಬರ್ 137 ರಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಹೋರಾಟ ಸಮಿತಿಯ ನಿರಂತರ ಹೋರಾಟದಿಂದ ಘನ ನ್ಯಾಯಾಲಯವು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಸ್ತು ಎಂದು ತೀರ್ಪು ನೀಡಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಭವನ ನಿರ್ಮಾಣ ವಿರೋಧಿಗಳು ಮೇಲ್ಮನವಿ ಸಲ್ಲಿಸಿದ್ದರು, ಆದರೆ ತಾಲೂಕು ಆಡಳಿತ ಪುರಸಭೆ ಅಧಿಕಾರಿಗಳು ಸಮರ್ಪಕವಾದ ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸದ ಹಿನ್ನೆಲೆಯಲ್ಲಿ ದಿನಾಂಕ 10.01.2023ರಂದು ನ್ಯಾಯಾಲಯವು ತಾತ್ಕಾಲಿಕ ತಡೆ ನೀಡುವುದರ ಮೂಲಕ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಿದೆ.
ಮೀಸಲಾತಿಯ ಅಡಿಯಲ್ಲಿ ಜಯಿಸಿದ ಸ್ಥಳೀಯ ಶಾಸಕ ಎಸ್,ಎನ್. ನಾರಾಯಣಸ್ವಾಮಿ ಭವನ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅನುದಾನ ಬಿಡುಗಡೆಯಾಗಿದೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸುಳ್ಳು ಹೇಳಿ ಹೋರಾಟಗಾರರನ್ನು ನಂಬಿಸಿ ತಾರಾ ತುರಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಿದ್ದರು.
 ಆದರೆ ಈ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಪ್ರಶ್ನಿಸಿದಾಗ “ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಯಾವುದೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲ” ಎಂದು ತಿಳಿಸಿರುತ್ತಾರೆ.
ಶಾಸಕರು ಭವನ ನಿರ್ಮಾಣವನ್ನು ಮುಂದಿಟ್ಟುಕೊಂಡು ಅಂಬೇಡ್ಕರ್ ವಾದಿಗಳನ್ನು, ಮತ್ತು ದಲಿತರನ್ನು ಮತ ಬ್ಯಾಂಕ್ ಆಗಿ ಬಳಕೆ ಮಾಡುತ್ತಿರುವುದು ಸರಿಯಲ್ಲ, ಇದು ಹೀಗೆ ಮುಂದುವರೆದರೆ ಪ್ರತಿಯೊಂದು ಗ್ರಾಮಕ್ಕೂ ಹೋಗಿ ಜನ ಜಾಗೃತಿಯನ್ನು ಮೂಡಿಸಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವಂತೆ ಪ್ರಚಾರ ಮಾಡಲಾಗುವುದು ಎಂದು ಎಚ್ಚರಿಸಿದರು.
 ತಹಸಿಲ್ದಾರ್ ಅವರನ್ನು ಈ ಘಟನೆಗೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ನನ್ಯಾಯಾಲಯಕ್ಕೆ ಒದಗಿಸಿ ಮಧ್ಯಪ್ರವೇಶಿಸುವಂತೆ ಕೋರಲಾಗಿದ್ದು, ಅವರು ಅದು ಕೆರೆಯ ಅಂಗಳ ವಾಗಿದ್ದು ಭವನ ನಿರ್ಮಾಣಕ್ಕೆ ನನ್ನ ವಿರೋಧವಿದೆ, ಕೆರೆಯನ್ನು ಉಳಿಸುವುದು ನನ್ನ ಜವಾಬ್ದಾರಿಯಾಗಿದೆ ಎಂದಿದ್ಹಾದಾರೆ.
ಹಾಗಾದರೆ ಅಲ್ಲಿ ನಿರ್ಮಾಣವಾಗಿರುವ ಇತರೆ  ಕಟ್ಟಡಗಳನ್ನು ಕೆಡವಲು ಸಾಧ್ಯವೇ? ಅಥವಾ ಕೆರೆಯ ಅಂಗಳವಾಗಿದ್ದರೆ ಮದರಸ, ಅಲ್ಪಸಂಖ್ಯಾತರ ನಿಲಯ, ಕನ್ನಡ ಭವನ, ಯಾವ ಆಧಾರದ ಮೇಲೆ ನಿರ್ಮಾಣವಾಯಿತ್ತು.
 ಪುರಸಭೆಯ ಅಧಿಕಾರಿಗಳು ಕೆರೆಯ ಅಂಗಳ ವಾಗಿದ್ದರೆ  ಅಲ್ಲಿರುವ ಕಟ್ಟಡಗಳಿಗೆ   ಇ -ಖಾತೆ ಹೇಗೆ ಮಾಡಿದ್ದಾರೆ ?  ಎಂದು ಪ್ರಶ್ನಿಸಿದರು.
ದಿನಾಂಕ 13.01.2023 ರಂದು ಸಂಸದ ಎಸ್ ಮುನಿಸ್ವಾಮಿ ಹಾಗೂ ಜಿಲ್ಲಾಡಳಿತದ ನೇತೃತ್ವದಲ್ಲಿ ಬಂಗಾರಪೇಟೆ ಪುರಸಭೆಯ ಆವರಣದಲ್ಲಿ ನಡೆಯಲಿರುವ ಸಾರ್ವಜನಿಕರ ಕುಂದುಕೊರತೆಗಳ ಸಭೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಪಟ್ಟ ಸಮಸ್ಯೆ ಬಗೆಹರಿಸದೆ ಹೋದಲ್ಲಿ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸ್ವಾಭಿಮಾನಿ ರೈತ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್. ರಾಮಾಪುರ ಅಪ್ಪಯ್ಯ. ಇತರರು ಉಪಸ್ಥಿತರಿದ್ದರು

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!