• Fri. Apr 26th, 2024

ಅಂಬೇಡ್ಕರ್ ಭವನ ನಿರ್ಮಾಣದಲ್ಲಿ ರಾಜಕೀಯ ಬೇಡ: ಸಂಸದ ಎಸ್.ಮುನಿಸ್ವಾಮಿ.

PLACE YOUR AD HERE AT LOWEST PRICE

ಬಂಗಾರಪೇಟೆ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಸ್ಥಳೀಯ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದ್ದು ಶಿಷ್ಠಾಚಾರ ಉಲ್ಲಂಘನೆಯಾಗಿದ್ದು, ಮತಗಳಿಕೆಗೋಸ್ಕರ ಅಂಬೇಡ್ಕರ ಭವನ ನಿರ್ಮಾಣದ ವಿಚಾರವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಬಾರದು ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಇಡೀ ದೇಶಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನದ ಆದರ್ಶಗಳು ಅಗತ್ಯವಾಗಿದೆ.
ಅಂಬೇಡ್ಕರ್ ಭವನ ನಿರ್ಮಾಣದಲ್ಲಿ ಯಾವುದೇ ರಾಜಕೀಯ ಮಾಡುವುದು ಸರಿಯಲ್ಲ. ಆತುರವಾಗಿ ಗುದ್ದಲಿ ಪೂಜೆ
ನೆರವೇರಿಸುವ ಅಗತ್ಯ ಇರಲಿಲ್ಲ ಎಂದರು.
ರಾಜ್ಯ ಬಿಜೆಪಿ ಸರ್ಕಾರದಿಂದ 2 ಕೋಟಿ ಅನುದಾನದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಸಿದ್ದತೆ ನಡೆದಿದೆ. ಇಡೀ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬಿಜೆಪಿ ಸರ್ಕಾರವು ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುತ್ತಿದೆ.
ಸದ್ಯ ಬಂಗಾರಪೇಟೆಯಲ್ಲಿಯೂ ಸಹ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು 2 ಕೋಟಿ ಅನುದಾನ  ಬಿಡುಗಡೆಯಾಗಿದ್ದು, ಈ ಭವನ ನಿರ್ಮಾಣ ಮಾಡಲು ಸ್ಥಳಾವಕಾಶದ ಸಮಸ್ಯೆ ಇರುವುದರಿಂದ ಚುನಾವಣೆಯಲ್ಲಿ ಮತ ಪಡೆಯಲು ಗುದ್ದಲಿ ಪೂಜೆ ನರವೇರಿಸಿರುವುದು ರಾಜಕೀಯ ತಿಕ್ಕಾಟಕ್ಕೆ ನಾಂದಿಯಾಗಿದೆ ಎಂದರು.
ಅಂಬೇಡ್ಕರ್ ಭವನ ನಿರ್ಮಾಣ ವಿಚಾರದಲ್ಲಿ ಶ್ರೀಧರ್ ಎಂಬುವವರು ಕೋರ್ಟಿನಲ್ಲಿ ದಾವೆ ಹೂಡಿದ್ದಾರೆ. ಕೆರೆಯಲ್ಲಿ ಅಂಬೇಢ್ಕರ್ ಭವನ ನಿರ್ಮಾಣ ಮಾಡಲು ಕಂದಾಯ ಇಲಾಖೆಯಲ್ಲಿ ಕೆಲವು ಸಮಸ್ಯೆಗಳಿವೆ.
ಕೋಲಾರ ಜಿಲ್ಲೆಯಲ್ಲಿ ಕೆರೆಗಳನ್ನು ಸಂರಕ್ಷಣೆ ಮಾಡುವ ದೃಷ್ಠಿಯಿಂದ ಸಮಸ್ಯೆ ತೀವ್ರಗೊಂಡಿದೆ. ಆದ್ದರಿಂದ  ದೂರುದಾರರನ್ನು ಕರೆಯಿಸಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶ್ರಮಿಸೋಣ ಎಂದು ಹೇಳಿದರು.
ಸಾರ್ವಜನಿಕರಿಂದ ಅಹವಾಲು ಸ್ವೀಕಾರದಲ್ಲಿ 150ಕ್ಕೂ ಅರ್ಜಿಗಳು ಬಂದಿದ್ದು, ಇದರಲ್ಲಿ ಹೆಚ್ಚಾಗಿ ಪುರಸಭೆ, ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ದೂರುಗಳು ಬಂದಿದ್ದು, ಕೆಲವು ದೂರುಗಳು ನ್ಯಾಯಾಲಯದಲ್ಲಿರುವುದರಿಂದ ಅಂತಹ ದೂರುಗಳನ್ನು ಪರಿಶೀಲನೆ ಮಾಡಲು ಸಾಧ್ಯವಿಲ್ಲ.
ಉಳಿದಂತೆ ವೈಯುಕ್ತಿಕಗಳಿಗೆ ಸಂಬಂಧಪಟ್ಟ ಅ„ಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಸರ್ವೆ ಇಲಾಖೆಗೆ ಸಂಬಂಧಪಟ್ಟಂತೆ ಎಲ್ಲಾ ಸರ್ವೆ ಕಾರ್ಯಗಳನ್ನು ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಪಟ್ಟಣದ ವ್ಯಾಪ್ತಿಯಲ್ಲಿ ಅಭಿವೃದ್ದಿ ಆಗದೇ ಇರುವ ಬಗ್ಗೆ ಹೆಚ್ಚಿನ ದೂರುಗಳು ಬಂದಿದ್ದು, ರಾಜ್ಯ ಸರ್ಕಾರವು ನಗರೋತ್ಥಾನ ಯೋಜನೆಯಡಿಯಲ್ಲಿ ಒಟ್ಟು 21 ಕೋಟಿ ಅನುದಾನ ಮಂಜೂರಾಗಿದೆ.
ಪ್ರಸಕ್ತ ವರ್ಷದಲ್ಲಿ 8 ಕೋಟಿ ಅನುದಾನ ಬಂದಿದ್ದು, ಇದರಲ್ಲಿ ಎಲ್ಲಾ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಈ ತಿಂಗಳ 20ರ ನಂತರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸೇರಿದಂತೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಸೇರಿದಂತೆ ಎಲ್ಲರ ಸಮ್ಮುಖದಲ್ಲಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು.
ಈ ಸಂದರ್ಭದಲ್ಲಿ ಬಂಗಾರಪೇಟೆ ಪಟ್ಟಣದಲ್ಲಿ ಯಾವ ಯಾವ ಕಾಮಗಾರಿಗಳು ಬಾಕಿ ಇವೆ ಎಂಬುದರ ಬಗ್ಗೆ ಚರ್ಚೆ ಮಾಡಿ ಅಭಿವೃದ್ದಿ ಮಾಡಲು ಕ್ರಮಕೈಗೊಳ್ಳಲಾಗುವುದೆಂದರು.
ತಾಲೂಕಿನಲ್ಲಿ ಸಾರ್ವಜನಿಕರಿಂದ ಬರುವ ದೂರುಗಳನ್ನು ಸ್ವೀಕರಿಸಲು ತಾಲೂಕು ಕಚೇರಿಯಲ್ಲಿ ಒಬ್ಬ ಸಿಬ್ಬಂದಿಯನ್ನು ನೇಮಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ತಪ್ಪದೇ ಸಲ್ಲಿಸುವುದು.
ಈಗಾಗಲೇ ನೀಡಿರುವ ಎಲ್ಲಾ ದೂರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನೆ ಮಾಡಿದ್ದು, ದೂರುಗಳನ್ನು ಪರಿಶೀಲಿಸಿ ಬಗೆಹರಿಸಲು ಎಲ್ಲಾ ಅಧಿಕಾರಿಗಳು ದೂರುದಾರರಿಗೆ ಖುದ್ದು ಮಾಹಿತಿ ನೀಡಲಿದ್ದಾರೆಂದರು.
ಈ ಸಭೆಯಲ್ಲಿ 10ಕ್ಕೂ ಹೆಚ್ಚು ವಿಕಲಚೇತನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲುಹಾಜರಾಗಿದ್ದರು. ವಿಕಲಚೇತನರಿಗೆ ಸರ್ಕಾರದಿಂದ ನೀಡಬಹುದಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಸೂಚನೆ ನೀಡಿದರು. ಒಬ್ಬರಿಗೆ ದ್ವಿಚಕ್ರ ವಾಹನವನ್ನು ನೀಡಲು ತಮ್ಮ ಸ್ವಂತ ಹಣದಿಂದ ಖರೀದಿ ಮಾಡಿಕೊಡಲಾಗುವುದೆಂದರು.
ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿಪಂ ಸಿಇಓ ಯುಕೇಶ್‍ಕುಮಾರ್, ಮಾಜಿ ಶಾಸಕ ಎಂ.ನಾರಾಯಣಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಜಿಪಂ ಮಾಜಿ ಸದಸ್ಯ ಬಿ.ವಿ.ಮಹೇಶ್, ಎಂ.ಪಿ.ಶ್ರೀನಿವಾಸಗೌಡ, ತಹಶೀಲ್ದಾರ್ಎಂ .ದಯಾನಂದ್, ರಶ್ಮಿ, ತಾಪಂ ಇಒ ಎನ್.ವೆಂಕಟೇಶಪ್ಪ, ಪುರಸಭೆ ಮುಖ್ಯಾ„ಕಾರಿ ಜಿ.ಎನ್.ಚಲಪತಿ, ಸದಸ್ಯ ಕಪಾಲಿ ಶಂಕರ್, ಡಿವೈಎಸ್‍ಪಿ ರಮೇಶ್, ಇನ್ಸ್‌ಪೆಕ್ಟರ್  ಟಿ.ಸಂಜೀವರಾಯಪ್ಪ, ಬಿಇಒ ಡಿ.ಎನ್.ಸುಕನ್ಯಾ, ಎಲ್ಲಾ ಗ್ರಾಪಂಗಳ ಪಿಡಿಒಗಳು ಹಾಜರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!