• Mon. May 13th, 2024

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಸಹಾಯ ಮಾಡಿದ ದಾನಿಗಳನ್ನು ಮರೆಯಬಾರದು, ಶಿಕ್ಷಣದಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತನ್ನಿ- ಐಪಿಎಸ್ ಅಧಿಕಾರಿ ಡಿ.ದೇವರಾಜ್

PLACE YOUR AD HERE AT LOWEST PRICE

ಕಾಲೇಜು ಶಿಕ್ಷಣ ಎಂಬುದು ಪ್ರತಿಯೊಬ್ಬರ ಜೀವನದ ಪ್ರಮುಖ ನಿರ್ಣಾಕ ಕಾಲವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಹಾಗೂ ದುಶ್ಚಟಗಳಿಗೆ ಬಲಿಯಾಗದೆ, ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಛಲದಿಂದ ಓದಿನತ್ತ ಗಮನಹರಿಸಬೇಕು, ಇದೇ ವೇಳೆ ತಮ್ಮ ಶಿಕ್ಷಣಕ್ಕೆ ಪೂರಕವಾಗಿ ದಾನಿಗಳಿಂದ ಸಿಗುವ ವಿದ್ಯಾರ್ಥಿ ವೇತನವನ್ನು ಸದುಪಯೋಗಪಡಿಸಿಕೊಳ್ಳುವುದು ನಿಮ್ಮ ಕರ್ತವ್ಯವಾಗಬೇಕೆಂದು ಐಪಿಎಸ್ ಅಧಿಕಾರಿ ಡಿ.ದೇವರಾಜ್ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ನಗರದ ಟಿ.ಚೆನ್ನಯ್ಯ ರಂಗಮ0ದಿರದಲ್ಲಿ ಸೋಮವಾರ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ೧೪೭೪ ವಿದ್ಯಾರ್ಥಿನಿಯರಿಗೆ ೧.೩೫ ಕೋಟಿ ರೂಪಾಯಿ ವಿದ್ಯಾರ್ಥಿವೇತನ ವಿತರಿಸಿ ಅವರು ಮಾತನಾಡಿದರು.
ಮನುಷ್ಯ ಜೀವನದಲ್ಲಿ ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾದದ್ದು, ಈ ಸಂದರ್ಭದಲ್ಲಿ ಸಹಾಯ ಮಾಡಿದವರನ್ನು ಯಾವುದೇ ಕಾರಣಕ್ಕೂ ಮರೆಯಬಾರದು ಎಂದ ಅವರು, ಮಲಬಾರ್ ಚಾರಿಟೇಬಲ್ ಟ್ರಸ್ಟ್ ತನ್ನ ಲಾಭದಲ್ಲಿ ಶೇ.೫ರಷ್ಟನ್ನು ಸಮಾಜದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಾಗೂ ಪ್ರಗತಿಗೆ ನೀಡುತ್ತಿದ್ದು, ಈ ಸಹಾಯವನ್ನು ಪಡೆದು ಉನ್ನತ ಶಿಕ್ಷಣವನ್ನು ಪ್ರತಿಯೊಬ್ಬರೂ ಪಡೆಯುವಂತೆ ಆಗಬೇಕು, ಜೊತೆಗೆ ಯುವಜನತೆ ದಾರಿ ತಪ್ಪದೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಂತೆ ಕಿವಿಮಾತು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಶ್ರೀನಿವಾಸಗೌಡ, ನಾವು ಎಲ್ಲಾ ಓದುವ ಸಂದರ್ಭದಲ್ಲಿ ಸರಿಯಾದ ಸೌಲಭ್ಯಗಳಿಲ್ಲದೆ ಅನೇಕರು ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ಪ್ರಸ್ತುತ ಸರಕಾರಗಳು ಶಿಕ್ಷಣಕ್ಕೆ ಆದ್ಯತೆ ಕೊಟ್ಟು ಪ್ರೋತ್ಸಾಹ ಕೊಡುವ ಕೆಲಸ ಮಾಡುತ್ತಿದ್ದು, ಗಂಡು ಮಕ್ಕಳಂತೆ ಹೆಣ್ಣುಮಕ್ಕಳಿಗೂ ಕೂಡ ವಿದ್ಯಾಭ್ಯಾಸ ಕಲ್ಪಿಸುವ ನಿಟ್ಟಿನಲ್ಲಿ ಪೋಷಕರು ಮುಂದಾಗಬೇಕೆAದರು.

ಇನ್ನೂ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ನನ್ನ ಜೀವನದ ವಿದ್ಯಾಭ್ಯಾಸ ಸಂದರ್ಭದಲ್ಲಿ ಕಷ್ಟಪಟ್ಟಿದ್ದು, ಇದೀಗ ನನ್ನ ಕೈಲಾದ ಸಹಾಯವನ್ನು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಆರೋಗ್ಯಕ್ಕೆ ನೆರವು ನೀಡುತ್ತಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಡಿಡಿಪಿಯು ರಾಮಚಂದ್ರಪ್ಪ, ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮೇಲುಸ್ತುವಾರಿ ಸಂತೋಷ್, ವ್ಯವಸ್ಥಾಪಕ ಚಿಟೇಶ್, ಸಂಯೋಜಕ ಸಾಧಿಕ್ ಪಾಷ, ಪ್ರಾಂಶುಪಾಲರಾದ ಬಾಲಕೃಷ್ಣ, ಸುಬ್ರಮಣಿ, ಉಪನ್ಯಾಸಕರಾದ ನಾಗಾನಂದ ಕೆಂಪರಾಜ್, ಅಶ್ವಥ್‌ಗೌಡ, ರತ್ನಪ್ಪ, ಗೋಪಿಕೃಷ್ಣ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

 

ಇದನ್ನೂ ಓದಿ : ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ – ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯ

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!