• Sat. May 4th, 2024

ಸೇವಾದಳದಿಂದ ಮಾದಕ ವಸ್ತು ದುಷ್ಪರಿಣಾಮ ಕುರಿತು ಕಾರ್ಯಾಗಾರ-ಮಾದಕ ವಸ್ತುಗಳಿಂದ ದೂರವಿರಲು ಯುವ ಪೀಳಿಗೆಗೆ ಸಲಹೆ

PLACE YOUR AD HERE AT LOWEST PRICE

ಯುವ ಪೀಳಿಗೆ ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಂಡು ಆರೋಗ್ಯವಂತ ಭಾರತ ನಿರ್ಮಾಣಕ್ಕೆ ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ ಹೇಳಿದರು.

ಕೋಲಾರ ನಗರದ ನಾರಾಯಣ್ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ ಸೇವಾದಳ ಜಿಲ್ಲಾ ಮತ್ತು ತಾಲೂಕು ಘಟಕಗಳವತಿಯಿಂದ ಆಯೋಜಿಸಲಾಗಿದ್ದ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳು ಮತ್ತು ಬರುವ ಪದಾರ್ಥಗಳ ಗೀಳಿಗೆ ಬೀಳುವ ಮೂಲಕ ಮಾದಕ ವಸ್ತುಗಳ ಸೇವನೆಗೆ ದಾಸರಾಗುತ್ತಿದ್ದಾರೆ, ಇದರಿಂದ ಆರೋಗ್ಯದ ನೇರ ಪರಿಣಾಮ ಬೀರುತ್ತಿದ್ದು ವಿವಿಧ ರೀತಿಯ ಕಾಯಿಲೆ ಮತ್ತು ದೈಹಿಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಆದ್ದರಿಂದ ಯುವಕ ಯುವತಿಯರು ಮತ್ತು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು ಮತ್ತು ಮಾದಕ ವ್ಯಸನಿಗಳಾಗಿರುವರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಕೋರಿದರು.


ನಗರದ ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಮಾದಕ ವ್ಯಸನಿಗಳ ಆಪ್ತಸಮಾಲೋಚನೆ ಮತ್ತು ಚಿಕಿತ್ಸೆಗೆ ಪ್ರತ್ಯೇಕವ್ಯವಸ್ಥೆ ಇದೆ ಇದರ ಸದುಪಯೋಗ ಪಡೆದುಕೊಳ್ಳಬೇಕು, ಹಾಗೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಈ ಕುರಿತು ಜಾಗೃತಿ ಅರಿವು ಮೂಡಿಸಲಾಗುತ್ತಿದೆಯೆಂದು ವಿವರಿಸಿದರು.

ಭಾರತ ಸೇವಾದಳಹಿರಿಯ ಸದಸ್ಯ ವಿ.ಪಿ.ಸೋಮಶೇಖರ್ ಮಾತನಾಡಿ, ಸ್ವಾತಂತ್ಯ್ರ ಪೂರ್ವದಲ್ಲಿ ಹೆಚ್ಚು ಗಾಂಜಾ ಬೆಳೆಯುತ್ತಿದ್ದ ಪ್ರದೇಶ ಪಾಕಿಸ್ತಾನದ ಭಾಗಕ್ಕೆ ಸೇರಿಕೊಂಡಿತು. ಅಂದಿನಿಂದ ಈವರೆವಿಗೂ ಕ್ರಮೇಣ ಗಾಂಜಾ ಬೆಳೆಯುವುದನ್ನು ಭಾರತ ಸರಕಾರ ಕಡಿಮೆ ಮಾಡುತ್ತಿದೆ, ಗಾಂಜಾ ಬೆಳೆಯುವ ರೈತರು ಮತ್ತು ಸಿಗರೇಟ್‌ನಂತ ಕಂಪನಿಗಳನ್ನು ಇತರೇ ವಸ್ತುಗಳ ಉತ್ಪಾದನೆಗೆ ಪ್ರೋತ್ಸಾಹಿಸುತ್ತಿದೆ, ಆದರೂ ಕಳ್ಳ ಸಾಗಾಣೆ ಮಾರ್ಗದಲ್ಲಿ ಮಾದಕ ವಸ್ತುಗಳ ಸಾಗಾಟ ಮಾರಾಟ ಸೇವಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಇದಕ್ಕಾಗಿ ಸೇವಾದಳ ಮತ್ತು ಆರೋಗ್ಯ ಇಲಾಖೆ ಜಾಗೃತಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆಯೆಂದು ಹೇಳಿದರು.

ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಪ್ರಚಾರ ಮಾಡುತ್ತಿರುವುದು ಒಂದೆಡೆಯಾದರೆ ಇತ್ತೀಚಿನ ಸಿನಿಮಾಗಳಲ್ಲಿ ಮಾದಕ ವಸ್ತುಗಳಸೇವನೆ ಬಳಕೆ ಪ್ರೋತ್ಸಾಹಿಸುವ ದೃಶ್ಯಗಳು ಹಾಡುಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ, ಯುವಕ ಯುವತಿಯರು ಇಂತ ದೃಶ್ಯಗಳಿಂದ ಪ್ರಚೋದನೆಗೊಳಗಾಗದೆ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು.

ಕೋಲಾರ ಜಿಲ್ಲೆಯಲ್ಲಿ ವಿವಿಧ ಪ್ರಾಕೃತಿಕ ಮತ್ತು ಪರಿಸರ ಮಾಲಿನ್ಯ ಕಾರಣಗಳಿಗಾಗಿ ಕ್ಯಾನ್ಸರ್ ಪೀಡಿತರು ಹೆಚ್ಚಾಗುತ್ತಿದ್ದು, ಇದರ ಜೊತೆಗೆ ಯುವ ಸಮೂಹ ತನ್ನ ಕೈಯಾರೆ ತಾವೆ ಮಾದಕ ವಸ್ತುಗಳ ವಿಷ ಸೇವಿಸುವ ಗೀಳಿಗೆ ತುತ್ತಾಗಬಾರದು, ಇದರಿಂದ ಭವಿಷ್ಯದಲ್ಲಿ ನಾನಾ ರೀತಿಯ ಅನಾರೋಗ್ಯಕ್ಕೆ ತುತ್ತಾಗಿ ಸಮಾಜದಲ್ಲಿ ಲೇವಡಿ, ಅಪಮಾನಕ್ಕೆ ತುತ್ತಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಾರಾಯಣ್ ಕಾಲೇಜಿನ ಕನ್ನಡ ಉಪನ್ಯಾಸಕ ಅನೀಫ್ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಕುರಿತು ಸೇವಾದಳ ಮತ್ತು ಆರೋಗ್ಯಇಲಾಖೆಯ ಅತ್ಯುತ್ತಮ ಕಾರ್ಯಕ್ರಮ ನಡೆಸಿಕೊಟ್ಟಿತು, ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳ ಸಮಸ್ಯೆಗಳ ಕುರಿತಂತೆಯೇ ಪ್ರತ್ಯೇಕ ಕಾರ್ಯಕ್ರಮ ನಡೆಸಿಕೊಡಬೇಕೆಂದು ಆರೋಗ್ಯ ಇಲಾಖೆಯ ಪ್ರೇಮಾರನ್ನು ಕೋರಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸೇವಿಸದಿರುವ ಕುರಿತು ಪ್ರತಿಜ್ಞೆಯ ವಿಧಿಯನ್ನು ಬೋಧಿಸಲಾಯಿತು.
ಇದೇ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕ ಅನೀಫ್ ಮತ್ತು ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾರನ್ನು ಭಾರತ ಸೇವಾದಳವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಾರತ ಸೇವಾದಳ ತಾಲೂಕು ಅಧ್ಯಕ್ಷ ಶ್ರೀರಾಮ್, ಕಾರ್ಯದರ್ಶಿ ಫಲ್ಗುಣ, ಸದಸ್ಯರಾದ ರಾಜೇಶ್ ಸಿಂಗ್, ಧನಂಜಯ್, ಪೈಂಟರ್ ಬಷೀರ್ ಇತರರು ಉಪಸ್ಥಿತರಿದ್ದರು. ಭಾರತ ಸೇವಾದಳ ಜಿಲ್ಲಾ ಸಂಘಟಕ ಎಂ.ಬಿ.ದಾನೇಶ್ ಕಾರ್ಯಕ್ರಮ ನಿರೂಪಿಸಿದರು.

ಸೇವಾದಳವತಿಯಿಂದ ವಿದ್ಯಾರ್ಥಿಗಳಿಗೆ ಸಮೋಸ ವಿತರಿಸಲಾಯಿತು. ರಾಷ್ಟ್ರಗೀತೆ ಗಾಯನದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!