ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಪ್ರಪಂಚ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘವು ಉತ್ತಮ ಹಾದಿಯಲ್ಲಿ ನಡೆಯುತ್ತಿದ್ದು, ಮುಂದಿನ ವರ್ಷದಲ್ಲಿ ಸಮಾಜದ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಸಂಘದ ಅಡಿಯಲ್ಲಿ ಹಮ್ಮಿಕೊಳ್ಳಲಾಗುವುದೆಂದು ಸವಿತಾ ಸಮಾಜದ
ಗೌರವಾಧ್ಯಕ್ಷ ಜಿ.ಟಿ ದುರ್ಗಾ ಪ್ರಸಾದ್ ಹೇಳಿದರು.
ಬೇತಮಂಗಲ ಪಟ್ಟಣದ ಅವರ ಕಛೇರಿಯಲ್ಲಿ ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ
ನೂತನ ವರ್ಷ 2023ರ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ಕೆಜಿಎಫ್ ತಾಲೂಕು ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ
ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಗಿದೆ ಎಂದರು.
ಸವಿತಾ ಸಮಾಜದ ಜನರು ಸ್ವಂತ ದುಡಿಮೆಯಲ್ಲಿ ಯಾರ ಹಂಗಿಲ್ಲದೆ ಸ್ವಾವಲಂಭಿ ಜೀವನ ನಡೆಸುತ್ತಿದ್ದು,
ಸರ್ಕಾರವು ಸಹ ಮೀಸಲಾತಿಯಲ್ಲಿ ಶೇಕಡವಾರು ಹೆಚ್ಚಿಸಿ ಮತ್ತಷ್ಟು ಶಕ್ತಿ ನೀಡಬೇಕೆಂದು ಒತ್ತಾಯಿಸಿದರು.
ಮುಂದಿನ ವರ್ಷದಲ್ಲಿ ಸವಿತಾ ಸಮಾಜದ ಅಭಿವೃದ್ಧಿಗಾಗಿ ಹಲವು ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಪ್ಪ, ಉಪಾಧ್ಯಕ್ಷ ಪ್ರಭಾಕರ್, ಖಜಾಂಚಿ
ಮುನಿಸ್ವಾಮಿ(ಚಿನ್ನಪ್ಪಯ್ಯ), ಕಾರ್ಯಕಾರಿ ಸಮಿತಿ ಅಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಜಂಟಿ
ಕಾರ್ಯದರ್ಶಿ ಸುಭ್ರಮಣಿ, ಸಂಘಟನಾ ಕಾರ್ಯದರ್ಶಿ ಮುರಳೀಧರ್, ನಿರ್ದೇಶಕ ಗೋವಿಂದಪ್ಪ, ಸಂಚಾಲಕ
ಮಂಜುನಾಥ್ ಇದ್ದರು.