PLACE YOUR AD HERE AT LOWEST PRICE
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಚುನಾವಣೆ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಬಾಬುರೆಡ್ಡಿ ಮಾತನಾಡಿ ದೇಶದ ಜನತೆ ಬದಲಾವಣೆ ಬಯಸುತ್ತಿದ್ದಾರೆ ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ರವರ ನೇತೃತ್ವದ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಅಧಕಾರದಲ್ಲಿದೆ.
ಎಎಪಿ ಇದೇ ಮೊದಲಿಗೆ ದೆಹಲಿಯಲ್ಲಿ ಅಧಿಕಾರ ಹಿಡಿದಿದ್ದು ದೆಹಲಿಯ ಸರ್ಕಾರಿ ಆಸ್ಪತ್ರೆಗಳು ಹಾಗೂ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಆಸ್ಪತ್ರೆ ಹಾಗೂ ಶಾಲೆಗಳಿಗೆ ಕಮ್ಮಿ ಇಲ್ಲದಂತೆ ಮಾದರಿಯಾಗಿ ನಿರ್ಮಿಸಲಾಗಿದೆ ಎಂದರು.
ಇಂದಿನ ವ್ಯವಸ್ಥೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಅಥವಾ ಅನಾರೋಗ್ಯದ ಸಣ್ಣ ಸಮಸ್ಯೆ ಬಗ್ಗೆ ಚಿಕಿತ್ಸೆ ಕೊಡಬೇಕಾದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು ಸರ್ಕಾರಗಳು ಬಡವರ ಪರ ನಿಲ್ಲಬೇಕಿದೆ ಎಂದರು.
ಬಡವರ ಸಮಸ್ಯೆಗಳಿಗೆ ನಾನು ಇದ್ದೇನೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉಚಿತ ಶಿಕ್ಷಣ ಹಾಗೂ ಚಿಕಿತ್ಸೆ ನೀಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಇಂತಹ ಹಲವು ವ್ಯವಸ್ಥೆಗಳು ಬರಬೇಕಾದರೆ ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.