• Thu. Mar 28th, 2024

ಕೊತ್ತೂರು ಮಂಜುನಾಥ್ ಪರಿಶಿಷ್ಟ ಜಾತಿಗೆ ಸೇರಿಲ್ಲ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು- ದಲಿತ ಸಂಘಟನೆಗಳಿoದ ಸಿಹಿ ಹಂಚಿ ಸಂಭ್ರಮಾಚರಣೆ

PLACE YOUR AD HERE AT LOWEST PRICE

 

ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಜಿ. ಮಂಜುನಾಥ್ ರವರ ಜಾತಿ ಪ್ರಮಾಣ ಪತ್ರವು ಪರಿಶಿಷ್ಟ ಜಾತಿಗೆ ಸೇರುವುದಿಲ್ಲವೆಂದು ಈ ಹಿಂದೆ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ಅಪೀಲು ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದ ಮಹತ್ವದ ತೀರ್ಪು ನೀಡಿರುವುದಕ್ಕೆ ಭಾರತೀಯ ವಿವಿಧ ದಲಿತ ಸಂಘಟನೆಗಳು ಸಂಭ್ರಮಾಚರಣೆ ಮಾಡಿವೆ.

ಸಂವಿಧಾನ ಆಶಯಗಳನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್ ತೀರ್ಪನ್ನು ಕೋಲಾರದ ವಿವಿಧ ದಲಿತ ಸಂಘಟನೆಗಳ ಮುಖಂಡರು ಇಲ್ಲಿನ ಅಂಬೇಡ್ಕರ್ ನಗರದ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಣೆ ಮಾಡಿದರು.

ಕಾಂಗ್ರೆಸ್ ಪಕ್ಷವನ್ನು ರಾಜ್ಯ ಮತ್ತು ಜಿಲ್ಲೆಯ ಶೋಷಿತ ದಲಿತ ಸಮುದಾಯವು ಬಹುತೇಕ ನಂಬಿದ್ದಾರೆ ಕಾಂಗ್ರೆಸ್ ಪಕ್ಷದಲ್ಲಿ ನಂಬಿಕೆ ವಿಶ್ವಾಸ ಇಟ್ಟಿದ್ದಾರೆ, ಇಂತಹ ಪಕ್ಷದಲ್ಲಿ ಇದ್ದುಕೊಂಡು ಮೀಸಲಾತಿಯನ್ನು ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಶಾಸಕರಾಗಿ ಅಧಿಕಾರ ಅನುಭವಿಸಿದ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಈ ಕೂಡಲೇ ವಜಾಗೊಳಿಸಿಸಬೇಕು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್ ರಮೇಶ್ ಕುಮಾರ್ ರವರುಗಳು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಬೇಕೆಂದು ದಲಿತ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಭಾರತೀಯ ದಲಿತ ಸೇನೆ ಸಂಸ್ಥಾಪಕ ಅಧ್ಯಕ್ಷ ದಲಿತ ನಾರಾಯಣಸ್ವಾಮಿ ಕರ್ನಾಟಕ ಸಿಂಹ ಸೇನೆ ರಾಜ್ಯಾಧ್ಯಕ್ಷ ಹೂವಳ್ಳಿ ಪ್ರಕಾಶ್ ಅಂಬೇಡ್ಕರ್ ನಗರದ ಗುತ್ತಿಗೆದಾರ ಮಂಜುನಾಥ್ ಕರ್ನಾಟಕ ಟಿಪ್ಪು ಸೇನೆ ಅಧ್ಯಕ್ಷ ಸೈಯದ್ ಆಸಿಫ್, ಸಾಹುಕಾರ್ ಶಂಕ್ರಪ್ಪ ,ಚೇತನ್ ಬಾಬು, ಮುಫೀದ್, ಮಾಹಿತಿ ಮಂಜುನಾಥ್, ಪಿ ಡಿ ಎಸ್ ಯುವ ಘಟಕದ ಅಧ್ಯಕ್ಷ ಮಂಜು, ಕರಾಟೆ ಎಲ್ಲಪ್ಪ ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

You missed

error: Content is protected !!