• Wed. May 1st, 2024

ಪೋಕ್ಸೊ ಕಾಯಿದೆ:ಮಾಸ್ತಿ ಠಾಣೆ ವ್ಯಾಪ್ತಿಯ ಆರೋಪಿಗಳಿಗೆ ಶಿಕ್ಷೆ.

PLACE YOUR AD HERE AT LOWEST PRICE

 

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಮಾಸ್ತಿ ಪೊಲೀಸ್ ಠಾಣಾ ಸರಹದ್ದಿನ ಮಾಸ್ತಿ ಹೋಬಳಿ, ಗೊಲ್ಲಹಳ್ಳಿ ಗ್ರಾಮದ ವಾಸಿ ಕೇಶವ ಬಿನ್ ಮುನಿಯಪ್ಪ ಮತ್ತು ರಾಜೇನಹಳ್ಳಿ ಗ್ರಾಮದ ವಾಸಿ ವೆಂಕಟೇಶ್‌ಪ್ರಸಾದ್ ಬಿನ್ ಪಿಳ್ಳಪ್ಪ ಎಂಬುವವರಿಗೆ ಶಿಕ್ಷೆ ವಿಧಿಸಿ ಪೋಕ್ಸೊ ನ್ಯಾಯಾಲಯ ಆದೇಶಿಸಿದೆ.

ಈ ಇಬ್ಬರು ಆರೋಪಿಗಳು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಮಾಸ್ತಿ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಕೆ.ನಾಗರಾಜ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.33/2020ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ 1ನೇ ಆರೋಪಿ ಕೇಶವ ಎಂಬಾತನಿಗೆ 20 ವರ್ಷ ಸಜೆ ವಿಧಿಸಿ ಆದೇಶಿಸಿದ್ದಾರೆ.

2ನೇ ಆರೋಪಿ ವೆಂಕಟೇಶ್‌ಪ್ರಸಾದ್ ಗೆ 5ವರ್ಷ ಸಜೆ ಮತ್ತು ಇಬ್ಬರಿಗೂ ತಲಾ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.5,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!