• Sat. May 4th, 2024

ಮಾಲೂರು ಕೆರೆಯಲ್ಲಿ ಅಪರಿಚಿತ ತಾಯಿ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ಪತ್ತೆ

PLACE YOUR AD HERE AT LOWEST PRICE

 

ಅಪರಿಚಿತ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳ ಮೃತದೇಹಗಳು ಮಾಲೂರು ಕೆರೆಯಲ್ಲಿ ಪತ್ತೆಯಾಗಿದೆ. ಮಾಲೂರಿನ ಕೆರೆಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ತೇಲುತ್ತಿರುವುದನ್ನು ಕಂಡ ಸ್ಥಳೀಯ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ದಾವಿಸಿದ ಪೊಲೀಸರು ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಸಣ್ಣ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಕಾಣುತ್ತಿದ್ದು, ಕಳೆದ ೩-೪ ದಿನಗಳ ಹಿಂದೆ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ. ಮೃತರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲದ ಕಾರಣ ಮೃತದೇಹಗಳನ್ನು ಮಾಲೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಮೃತರ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಮನವಿಮಾಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!