• Wed. Apr 24th, 2024

PLACE YOUR AD HERE AT LOWEST PRICE

ಕಾಂಗ್ರೆಸ್ ಪಕ್ಷದ ಕೋಲಾರ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಊರುಬಾಗಿಲು ವಿ.ಶ್ರೀನಿವಾಸ್ ನೇಮಕವಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಖಾರ್ಜುನ ಖರ್ಗೆ ಯವರ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮರ್ ಅವರು ಇಂದು ಅದೇಶ ಪತ್ರ ನೀಡಿದ್ದಾರೆ.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಳೆದ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಕ್ರಿಯಾಶೀಲ ಮುಖಂಡರಾಗಿ ಕೆಲಸ ಮಾಡಿದ ಊರುಬಾಗಿಲು ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತೆರವಾದ ನಂತರ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟುವ ಕೆಲಸದಲ್ಲಿ ತಮ್ಮದೇ ಶೈಲಿಯಲ್ಲಿ ಪಕ್ಷ ಸಂಘಟನೆ ಮಾಡುವ ಮೂಲಕ ಗಮನ ಸೆಳೆದಿದ್ದರು. ಕಳೆದ ಮೂರು ವರ್ಷಗಳಿಂದ ಜಿಲ್ಲಾ ಕಿಸಾನ್ ಕೇತ್ ಅಧ್ಯಕ್ಷರಾಗಿ ಹಲವಾರು ರೈತಪರ ಹೋರಾಟಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಬಲ ವಿರೋಧ ಪಕ್ಷದ ನಾಯಕರಾಗಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಕೆಪಿಸಿಸಿ ವತಿಯಿಂದ ಶ್ರೀನಿವಾಸ್ ಅವರನ್ನು ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವುದು, ನೂತನ ಜಿಲ್ಲಾಧ್ಯಕ್ಷ ಲಕ್ಷಿö್ಮನಾರಾಯಣ್ ಅವರೊಂದಿಗೆ ಸೇರಿ ಜೋಡೆತ್ತುಗಳಂತೆ ಕಾಯಾ ವಾಚಾ ಮನಸಾ ಪಕ್ಷ ಕಾಂಗ್ರೆಸ್ ಪಕ್ಷವನ್ನು ಸದೃಡಗೊಳಿಸಲು ಅವಕಾಶ ಸಿಕ್ಕಿದಂತಾಗಿದೆ.

ಇದೇ ವೇಳೆ ಅವಕಾಶ ಕಲ್ಪಿಸಿಕೊಟ್ಟ ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಖಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್‌ಗಾಂಧೀ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿ.ಎಲ್.ಪಿ. ನಾಯಕ ಸಿದ್ಧರಾಮಯ್ಯ, ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ, ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಪಕ್ಷದ ಹಿರಿಯ ಮುಖಂಡರಿಗೆ ಊರುಬಾಗಿಲು ಶ್ರೀನಿವಾಸ್ ಧನ್ಯವಾದ ತಿಳಿಸಿದ್ದಾರೆ.

ಕೆ.ಜಯದೇವ್ ಅಭಿನಂದನೆ:

ಪ್ರದೇಶ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಆಯ್ಕೆಯಾಗಿರುವ ಜಿಲ್ಲಾಧ್ಯಕ್ಷ ಲಕ್ಷಿö್ಮನಾರಾಯಣ್ ಹಾಗೂ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಅವರಿಗೆ ಡಿಸಿಸಿ ಎಸ್.ಸಿ. ವಿಭಾಗದ ಜಿಲ್ಲಾಧ್ಯಕ್ಷ ಕೆ.ಜಯದೇವ್ ಆಭಿನಂದನೆಗಳನ್ನು ತಿಳಿಸಿದ್ದಾರೆ.

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!