• Thu. Apr 18th, 2024

PLACE YOUR AD HERE AT LOWEST PRICE

ಶಿಕ್ಷಣ ಇಲಾಖೆಯಿಂದ ಬಂಗಾರಪೇಟೆ ತಾಲ್ಲೂಕು ಬೂದಿಕೋಟೆ ಹೋಬಳಿ ಗುಲ್ಲಹಳ್ಳಿಯಲ್ಲಿ  ಕ್ಲಸ್ಟರ್ ಹಂತದಲ್ಲಿ ಕಲಿಕಾ ಹಬ್ಬ ನಡೆಸಲಾಯಿತು.

ಹಿಂದಿನ ಎರಡು ವರ್ಷಗಳು ಹಾಗೂ ಪ್ರಸ್ತುತ ವರ್ಷದ ಮಹತ್ವದ ಮತ್ತು ನಿರಂತರ ಕಲಿಕಾ ಅಂಶಗಳನ್ನು ಮರುಕಳಿಸುವ ರೀತಿಯಲ್ಲಿ ಈ ಚಟುವಟಿಕೆಗಳನ್ನು ವಿನ್ಯಾಸಗೊಳಿಸಲಾಗಿತ್ತು.

ಮಕ್ಕಳನ್ನು ಹಲವು ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡಿ ಅವರ ಕಲಿಕಾ ಆಸಕ್ತಿಯನ್ನು ಹೆಚ್ಚಿಸುವುದು ಇದರ ಉದ್ದೇಶವಾಗಿದೆ.

ಕಲಿಕಾ ಚೇತರಿಕೆ ಪೂರಕವಾಗಿ ಮಕ್ಕಳು ಚಟುವಟಿಕೆ ಮೂಲಕ ಸಂತೋಷದಾಯಕ ಕಲಿಕೆಯನ್ನು ಮಕ್ಕಳು ಹೊಂದಬೇಕು ಎಂಬ ಹಿನ್ನಲೆಯಿಂದ ಸರ್ಕಾರ ಚಿಂತನೆ ಮಾಡಿದ್ದು, ಈ ಚಿಂತನೆ, ಸಲಹೆ ಹಾಗೂ ಮಾರ್ಗದರ್ಶನದಡಿಯಲ್ಲಿ ಕಲಿಕಾ ಹಬ್ಬಗಳು ಜರುಗುತ್ತಿವೆ.

ಸಾಮಾನ್ಯವಾಗಿ ಎಲ್ಲಾ ಜಿಲ್ಲೆಗಳ ಶಾಲೆಗಳಲ್ಲೂ ಸಹ ಕಲಿಕಾ ಹಬ್ಬವನ್ನು ಆಚರಿಸುತ್ತಿದ್ದಾರೆ. ಇದರಿಂದ ಮಕ್ಕಳಲ್ಲಿ ಹೊಸತನ ಸೃಷ್ಟಿಯಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸ್ತುತ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕೆ ಎಂದು ಘೋಷಿಸಿದ್ದು ಪ್ರಗತಿಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳಲ್ಲಿ ಕಲಿಕಾ ಹಬ್ಬವನ್ನು ಆಯೋಜಿಸಿದೆ. ಅನ್ವಯಿಕ ಶಿಕ್ಷಣ ವೈಜ್ಞಾನಿಕ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಪ್ರಸಾರಗೊಳಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ಕಲಿಕಾ ಹಬ್ಬದ ಗುರಿಯಾಗಿದೆ.

ಕಲಿಕೆ ಎಂಬುದು ಮಕ್ಕಳಿಗೆ ಹೊರೆ ಹಾಗೂ ಒತ್ತಡವನ್ನುಂಟು ಮಾಡದೇ ಆನಂದಮಯ ಚಟುವಟಿಕೆಯ ರೂಪದಲ್ಲಿರಬೇಕು ಎಂಬುದೇ ಕಲಿಕಾ ಹಬ್ಬದ ಉದ್ದೇಶವಾಗಿದೆ.

ಈ ಕಾರ್ಯಕ್ರಮದಲ್ಲಿ ಬಿ.ಆರ್.ಪಿ ಮುನಿರಾಜು ಹಾಗೂ ಸಿಆರ್‌ಪಿ ರಾಜಪ್ಪ ಮತ್ತು ಗುಲ್ಲಹಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲಿಡಿಯಾ, ಗುಲ್ಲಹಳ್ಳಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶಪ್ಪ, ಎನ್.ಟಿ.ಜಿ.ಎಂ ಶಾಲೆಯ ಮುಖ್ಯ ಶಿಕ್ಷಕ ಟಿ.ಆರ್.ಮುನಿನಾರಾಯಣ, ಎಂ.ಹೊಸಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಬಿ.ನಾರಾಯಣಸ್ವಾಮಿ, ದಿನ್ನೂರು ಶಾಲೆಯ ಮುಖ್ಯ ಶಿಕ್ಷಕ ವೆಂಕಟಪ್ಪ, ಮೂತನೂರು ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ ಹಾಗೂ ಎಲ್ಲಾ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಗುಲ್ಲಹಳ್ಳಿ ಗ್ರಾ.ಪಂ ಅಧ್ಯಕ್ಷ ಲೀಲಾಬಾಯಿ ಗೋವಿಂದರಾವ್, ಪಿಡಿಓ ಷರಿನ್‌ತಾಜ್, , ಗ್ರಾಮದ ಮುಖಂಡರು ಹಾಗೂ ವಿಶೇಷವಾಗಿ ಕಲಿಕಾ ಹಬ್ಬದ ಎಲ್ಲಾ ಶಾಲೆಗಳ ಸಿಆರ್‌ಪಿಗಳು, ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.

Related Post

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,
ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

Leave a Reply

Your email address will not be published. Required fields are marked *

You missed

error: Content is protected !!