ಜಡ್ಡುಗಟ್ಟಿ ಹೋಗಿರುವ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರಜಾಧ್ವನಿ ನಡೆಸುತ್ತಿದ್ದು, ಬಿಜೆಪಿಯ ಕೆಟ್ಟ ಆಡಳಿತವನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಬೇಕು ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಕೋಲಾರ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋಲಾರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ, ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈಗಲೂ ಐದು ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಯಲ್ಲಿದೆ, ಮುಂದೆ ಕೋಲಾರ ಕ್ಷೇತ್ರವೂ ಸೇರಿದಂತೆ ಇಡೀ ಜಿಲ್ಲೆ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಕೊಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಆಡಳಿತದ ಬಗ್ಗೆ ಜನತೆ ಬೇಸತ್ತಿದ್ದಾರೆ, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಮತ್ತೇ ಅಧಿಕಾರಕ್ಕೆ ಬರಲಿದೆ, ಮುಂದಿನ ೩ ತಿಂಗಳು ಜಿಲ್ಲೆಯ ಗೌರವ ಕಾಪಾಡಲಿಕ್ಕಾಗಿ ಕಾಂಗ್ರೆಸ್ ಪಕ್ಷದ ಎಲ್ಲರೂ ಒಗ್ಗೂಡಿ ಕೆಲಸ ಮಾಡುವ ಮೂಲಕ ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಬೇಕಿದೆ ಎಂದರು.
ತಾಕತ್ತಿದ್ದರೆ ರಾಜ್ಯದ ಪಾಲಿನ ಜಿಎಸ್‌ಟಿ ತನ್ನಿ-
ಮುಖ್ಯಮಂತ್ರಿಗೆ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ ಸವಾಲು
ಮುಖ್ಯಮಂತ್ರಿ ಬೊಮ್ಮಾಯಿ ಅವರೇ ತಾಕತ್ತಿದ್ದರೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲನ್ನು ತನ್ನಿ ಎಂದು ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತುಕೊಂಡಿರುವ ನಾರಾಯಣಸ್ವಾಮಿ ಸವಾಲು ಹಾಕಿದರು.
ಕೋಲಾರದ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರ ಕಳೆದಚುನಾವಣೆಯಲ್ಲಿ ನೀಡಿದ ಯಾವುದೇ ಆಶ್ವಾಸನೆಯನ್ನು ಈಡೇರಿಸಿಲ್ಲ, ಯಾವುದೇ ಜನಪರ ಯೋಜನೆ ನೀಡದೆ ಜನತೆಗೆ ದ್ರೋಹ ಬಗೆದಿದೆ, ಬಿಜೆಪಿ ಸರಕಾರ ಜನರಿಗೆ ವಂಚನೆ ಮಾಡಿದೆಯೆಂದು ಟೀಕಿಸಿದರು.
ಕೊರೊನಾ ಸಂದರಭದಲ್ಲಿ ಕೋಟ್ಯಾಂತರ ರೂಪಾಯಿ ದುರ್ಬಳಕೆ ಆಗಿದೆ, ಮುಂಬರುವ ಚುನಾವಣೆಯಲ್ಲಿ ವಿಧಾನಸೌಧದ ಮೂರನೇ ಮಹಡಿಯ ಆಡಳಿತ ಚುಕ್ಕಾಣಿ ಕಾಂಗ್ರೆಸ್ ತೆಕ್ಕೆಗೆ ಬರಲಿದೆಯೆಂದು ಭವಿಷ್ಯ ನುಡಿದರು.