• Thu. Apr 25th, 2024

೧೧೨ ಕರೆಗಳ ದೂರನ್ನು ಸ್ವೀಕರಿಸಿದ ತಕ್ಷಣ ಸ್ಪಂದಿಸಿ – ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಗೆ ಹೊಸದಾಗಿ ಹಂಚಿಕೆಯಾಗಿರುವ ೦೩ ಹೆದ್ದಾರಿ ಗಸ್ತು ವಾಹನಗಳನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ಚಾಲನೆ ನೀಡಿದರು.

ನಂತರ ಜಿಲ್ಲೆಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಮತ್ತು ಹೊಸದಾಗಿ ಹಂಚಿಕೆಯಾಗಿರುವ ಹೆದ್ದಾರಿ ಗಸ್ತು ವಾಹನಗಳ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪಘಾತಗಳು ಸಂಭವಿಸಿದಾಗ ತುರ್ತಾಗಿ ಸ್ಪಂದಿಸುವುದು ಮತ್ತು ಅವಶ್ಯವಿದಲ್ಲಿ “ಗೋಲ್ಡ್‌ನ್ ಅವರ್”ನಲ್ಲಿ ಆಸ್ಪತ್ರೆಗೆ ದಾಖಲಿಸಲು ಕ್ರಮಕೈಗೊಳ್ಳಲು ಸೂಚಿಸಿದರು.

೧೧೨ ತುರ್ತುಸ್ಪಂದನ ವಾಹನದ ಅಧಿಕಾರಿ/ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿ, ೧೧೨ ಕರೆಗಳ ದೂರನ್ನು ಸ್ವೀಕರಿಸಿದ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಕೋಲಾರ ಜಿಲ್ಲೆಯಲ್ಲಿ ಈಗಾಗಲೆ ೧೧೨ ತುರ್ತುಸ್ಪಂದನ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದರ ಸದುಪಯೋಗ ಪಡೆಯುವಂತೆ ಸಾರ್ವಜನಿಕರಲ್ಲಿ ಕೋರಿದರು.

ಈ ಸಂದರ್ಭದಲ್ಲಿ ಎ.ಎ.ಒ ರವಿಕುಮಾರ್, ಆರ್.ಪಿ.ಐ ಮಹಾಲಿಂಗಪ್ಪ ಜುಮನಾಳ್, ಪಿ.ಐ ಶಿವಕುಮಾರ್, ಪಿ.ಎಸ್.ಐ ಕಂಟ್ರೋಲ್ ರೂಂ ಶಬಾಜ್ ಅಹಮದ್ ಮತ್ತು ಆಪ್ತಸಹಾಯಕ ನಾಗರಾಜ್ ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!