• Mon. Apr 29th, 2024

ವಿಶ್ವದ ಅತಿ ದೊಡ್ಡ ಸಂವಿಧಾನ ನಮ್ಮದು:ಕೆಜಿಎಫ್ ನಲ್ಲಿ ಶಾಸಕಿ ರೂಪಕಲಾ.

PLACE YOUR AD HERE AT LOWEST PRICE

ಡಾ. ಬಿ.ಆರ್. ಅಂಭೇಡ್ಕರ್ ರ ಮುಂದಾಳತ್ವದಲ್ಲಿ ರಚಿಸಿದ ಸಂವಿಧಾನವನ್ನು 1950 ರ ಜನವರಿ 26 ರಂದು ಜಾರಿಗೆ ತರಲಾಯಿತು. ಸ್ವಾತಂತ್ರ್ಯಾ ನಂತರ ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನವಾಗಿದೆ. ವಿಶ್ವದ ಅತಿ ದೊಡ್ಡ ಸಂವಿಧಾನ ನಮ್ಮ ದೇಶದ ಸಂವಿಧಾನ ಎಂದು ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಹೇಳಿದರು.

ಕೆಜಿಎಫ್ ನಗರದ ಮುನಿಸಿಪಲ್ ಮೈದಾನದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 74ನೇ ಗಣರಾಜ್ಯೋತ್ಸ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಂವಿಧಾನ ಜಾರಿಗೆ ಬಂದಿದ್ದರಿಂದ ಪ್ರತಿಯೊಬ್ಬ ಪ್ರಜೆಗೂ ತನ್ನ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವಾತಂತ್ರ್ಯ, ಧರ್ಮ, ಸಂಸ್ಕೃತಿ, ಶಿಕ್ಷಣ ಮತ್ತು ಇತರೆ ಹಕ್ಕುಗಳು ಸಿಕ್ಕವು ಎಂದು ತಿಳಿಸಿದರು.

ನಾಡಿನ ಸಮಸ್ತ ಜನತೆಗೆ 74ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಅವರು ತಮ್ಮ ಅಧಿಕಾರವಧಿಯಲ್ಲಿ ಕಾರ್ಯಗತಗೊಳಿಸಿದ ಅನೇಕ ಅಭಿವೃದ್ಧಿ ಕೆಲಸಗಳ ಬಗ್ಗೆ ವಿವರಿಸಿದರು. ತಮಗೆ ಜನತೆ ಮಾಡಿದ ಆಶೀರ್ವಾದದಿಂದ ಶಕ್ತಿ ಮೀರಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿರುವುದಾಗಿ ತಿಳಿಸಿ, ರಸ್ತೆ, ಚರಂಡಿ, ಕುಡಿಯುವ ನೀರು, ಮಿನಿ ವಿಧಾನ ಸೌಧ.

ತಾಲ್ಲೂಕು ಪಂಚಾಯಿತಿ ಕಟ್ಟಡ, ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವಿಭಾಗ, ಕೆ.ಜಿ.ಎಫ್. ನಗರದಲ್ಲಿ ಪ್ರಮುಖ ರಸ್ತೆಗಳನ್ನು ದ್ವಿಪಥ ರಸ್ತೆಗಳಾಗಿ ಮಾರ್ಪಡಿಸಿರುವುದು ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಭಿವೃದ್ದಿ ಹೀಗೆ ಹಲವಾರು ಜನರಿಗೆ ತೀರಾ ಅಗತ್ಯವಿರುವ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಸುಮಾರು ರೂ.350.00 ಕೋಟಿಗೂ ಹೆಚ್ಚು ಅನುದಾನ ತಂದಿರುವುದಾಗಿ ಹೇಳಿದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳನ್ನು ಹಾಕಿಕೊಂಡಿದ್ದು ಕೆ.ಜಿ.ಎಫ್. ನಗರದಲ್ಲಿ ಕೈಗಾರಿಕೆಗಳ ಸ್ಥಾಪನೆ, ಬಿ.ಜಿ.ಎಂ.ಎಲ್. ಕಾರ್ಖಾನೆ ಕಾರ್ಮಿಕರು ವಾಸಿಸುವ ಸ್ಥಳದ ಮಾಲೀಕತ್ವ ಕೊಡಿಸುವುದು, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮುಂತಾದ ಯೋಜನೆಗಳಿಗೆ ಪ್ರಥಮ ಆದ್ಯತೆ ನೀಡಿ ಅನುಷ್ಟಾನಗೊಳಿಸಲಾಗುವುದು ಎಂದು ತಿಳಿಸಿದರು.

ಕೆಂದ್ರ ಸರ್ಕಾರವು ಕೆ.ಜಿ.ಎಫ್. ನಲ್ಲಿ ಗಣಿಗಾರಿಕೆ ಪುನರಾರಂಭಿಸುವ ನಿಟ್ಟಿನಲ್ಲಿ “ಓಪನ್ ಕ್ಯಾಸ್ಟ್” ಮೂಲಕ ಪುನರಾರಂಭಿಸುವ ಯೋಚನೆಯಲ್ಲಿದ್ದು, ಇದರಿಂದ ಇಲ್ಲಿನ ವಾತಾವರಣ ಹದಗೆಡಲಿದೆ. ಈಗಾಗಲೆ ಗಣಿಯಲ್ಲಿ ಕಾರ್ಯ ನಿರ್ವಹಿಸಿರುವ ಅನೇಕರು ಹಲವು ಬಗೆಯ ಅನಾರೋಗ್ಯಕ್ಕೆ ತುತ್ತಾಗಿರುತ್ತಾರೆ.

ಆದುದರಿಂದ ಈ ಯೋಜನೆಯನ್ನು ಕೈಬಿಡಬೇಕು ಎಂದು ಮಾನ್ಯ ಕೇಂದ್ರ ಸರ್ಕಾರವನ್ನು ಮತ್ತು ಜಿಲ್ಲೆಯ ಜನ ಪ್ರತಿನಿಧಿಗಳಿಗೆ ಮನವರಿಕೆ ಮಾಡಲಾಗವುದು ಎಂದು ತಿಳಿಸಿದರು. ಗಣರಾಜ್ಯೋತ್ಸವ ಆಚರಣೆಯ ಪ್ರಯುಕ್ತ ಶಾಲಾ ಮಕ್ಕಳು ದೇಶ ಭಕ್ತಿಯನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ದ್ವಜಾರೋಹಣವನ್ನು ಕೆ.ಜಿ.ಎಫ್. ಪೊಲೀಸ್ ವರಿಷ್ಟಾಧಿಕಾರಿಗಳಾದ ಶ್ರೀಮತಿ ಡಾ. ಧರಣೀದೇವಿ ಮಾಲಗಿತ್ತಿರವರು ನೆರವೇರಿಸಿದರು. ವೇದಿಕೆಯಲ್ಲಿ ತಹಶೀಲ್ದಾರ್ ಸುಜಾತ, ನಗರಸಭೆ ಅದ್ಯಕ್ಷ ನಳ್ಳಲ್ ಮುನಿಸ್ವಾಮಿ, ಉಪಾದ್ಯಕ್ಷೆ ದೇವಿ ಗಣೇಶ್, ಬಿಇಓ ಚಂದ್ರಶೇಖರ್ ಮೊದಲಾದವರಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!