• Sun. May 5th, 2024

ಬಂಗಾರಪೇಟೆ:ಗಾಜಗದಲ್ಲಿ ವಿಧ್ಯಾರ್ಥಿಗಳಿಂದ ಕಲಿಕಾ ಹಬ್ಬ ಆಚರಣೆ.

PLACE YOUR AD HERE AT LOWEST PRICE

ಕರ್ನಾಟಕದ ಶಿಕ್ಷಣ ಇಲಾಖೆಯ “ಸಮಗ್ರ ಶಿಕ್ಷಣ ಕರ್ನಾಟಕ’ ಯೋಜನಾ ವಿಭಾಗವು ರಾಜ್ಯ ಮಾತ್ರವಲ್ಲ, ಇಡೀ ದೇಶದಲ್ಲೇ ಮೊದಲ ಬಾರಿಗೆ “ಕಲಿಕಾ ಹಬ್ಬ’ ಎಂಬ ಚೇತೋಹಾರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಗಾಜಗ ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಶಕುಂತಲಾ ಹೇಳಿದರು.

ಬಂಗಾರಪೇಟೆ ತಾಲ್ಲೂಕಿನ ಗಾಜಗ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮಗುವಿನ ಕಲಿಕೆಯು ಸಂಪೂರ್ಣವಾಗಿ ಅನುಭವ ಜನ್ಯವಾಗಿರುವುದರ ಜತೆಗೆ ಮಗು ತನ್ನನ್ನು ತಾನು ಸ್ವತಃ ತೊಡಗಿಸಿಕೊಳ್ಳುವ ಸ್ವಕಲಿಕೆಯ ಕಾರ್ಯ ಕ್ರಮ ಇದಾಗಿದೆ.

ಆರಂಭದ ಹಂತವಾಗಿ ಇದೇ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ರಾಜ್ಯದ ಒಟ್ಟು 4,103 ಕ್ಲಸ್ಟರ್‌ಗಳಲ್ಲಿ ಕ್ಲಸ್ಟರ್‌ ಮಟ್ಟದ “ಕಲಿಕಾ ಹಬ್ಬ’ಗಳು ಸಂಪನ್ನಗೊಳ್ಳಲಿವೆ. ರಾಜ್ಯದ ಸರಕಾರಿ ಶಾಲೆಯ 4ರಿಂದ 9ನೇ ತರಗತಿಯ ಮಕ್ಕಳು ಈ ಹಬ್ಬದ ಸಂಭ್ರಮದಲ್ಲಿ ತಮ್ಮನ್ನು ತಾವು ಮೈಮರೆತು ನಲಿಯಲಿದ್ದಾರೆ.

ಈ ಹಬ್ಬದಲ್ಲಿ ನಲಿಯುತ್ತಾ ಕಲಿಯುವವರಿದ್ದಾರೆ. ಇದಕ್ಕಾಗಿ ಈಗಾಗಲೇ ರಾಜ್ಯ, ಜಿಲ್ಲಾಮಟ್ಟದಲ್ಲಿ ವಿವಿಧ ಕಾರ್ಯಾಗಾರಗಳು ನಡೆದಿದ್ದು, ಕಲಿಕಾ ಹಬ್ಬದ ಆಶಯವನ್ನು ಮಕ್ಕಳಿಗೆ ತಲುಪಿಸುವುದಕ್ಕಾಗಿ ಕಾರ್ಯತತ್ಪರರಾದ ಕ್ರಿಯಾಶೀಲ ಅಧಿಕಾರಿಗಳು ಮತ್ತು ಶಿಕ್ಷಕರ ಅತ್ಯುತ್ತಮ ತಂಡಗಳು ರಾಜ್ಯಾದ್ಯಂತ ಸಿದ್ಧಗೊಂಡಿವೆ ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಪ್ರಭಾರ ಸಹಾಯಕ ನಿರ್ಧೇಶಕಿ ಚಂದ್ರಕಲಾ, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಸೇರಿದಂತೆ ಹಲವು ಅಧಿಕಾರಿಗಳು,  ವಿಧ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!