• Thu. Apr 25th, 2024

ಕೆಜಿಎಫ್‌ ಕ್ಷೇತ್ರದ ಕಾಂಗ್ರೆಸ್‌ ಬಿಜೆಪಿ ಮುಖಂಡರು ಜೆಡಿಎಸ್‌ ಸೇರ್ಪಡೆ

PLACE YOUR AD HERE AT LOWEST PRICE

ರಾಷ್ಟ್ರೀಯ ಪಕ್ಷಗಳು ಕಮೀಷನ್ ಹಣ, ಅಧಿಕಾರದ ಕಿತ್ತಾಟದಿಂದ ರಾಜ್ಯ ಅಧೋಗತಿಗೆ ಹೋಗಿದೆ. ಇದರಿಂದ ಅಭಿವೃದ್ಧಿ ಕೆಲಸಗಳು ಶೂನ್ಯವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ನೇತೃತ್ವದ ಪ್ರಾದೇಶಿಕ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ತಿಳಿಸಿದರು

ಕೋಲಾರ ನಗರದ ಜೆಡಿಎಸ್ ಕಛೇರಿಯಲ್ಲಿ ಶುಕ್ರವಾರ ಕೆಜಿಎಫ್ ಮುಖಂಡ ಯೋಗೇಶ್ ಗೌಡ ನೇತೃತ್ವದಲ್ಲಿ ನೂರಾರು ಮುಖಂಡರು ಕಾಂಗ್ರೆಸ್- ಬಿಜೆಪಿ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು ಕಾಂಗ್ರೆಸ್‌ ಮತ್ತು ಬಿಜೆಪಿ ಸರಕಾರಗಳು ಜನತೆಯ ಹಿತ ಮುಖ್ಯವಾಗಿಲ್ಲ ಆಡಳಿತದಲ್ಲಿ ಬರೀ ಸುಳ್ಳು ಭರವಸೆಗಳನ್ನು ನೀಡಿ ರೈತ ವಿರೋಧಿ ನೀತಿಗಳನ್ನು ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ಕೋಟಿಗಳ ಅವ್ಯವಹಾರದ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳು ಚರ್ಚೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಕೋಮು ಗಲಭೆ ಸೃಷ್ಟಿಸಿರುವುದರಿಂದ ಜನತೆ ಬೇಸತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ ಎಂದರು.

ಕೆಜಿಎಫ್ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ರಮೇಶ್ ಬಾಬು ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಆಡಳಿತದ ದುಸ್ಥಿತಿಯನ್ನು ಮತದಾರರು ನೋಡಿದ್ದಾರೆ ಜೆಡಿಎಸ್ ವರಿಷ್ಠರಾದ ಎಚ್‌.ಡಿ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಅವಧಿಯಲ್ಲಿನ ಅಭಿವೃದ್ಧಿ ಪರ ಕೆಲಸಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಪಕ್ಷವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಉತ್ತಮ ರೀತಿಯಲ್ಲಿ ಸಂಘಟಿಸುವ ಮೂಲಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಜಿಎಫ್ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ ಎಂದರು

ಕೆಜಿಎಫ್ ನಗರಸಭೆ ಮಾಜಿ ಅಧ್ಯಕ್ಷ ದಯಾನಂದ್ ಮಾತನಾಡಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರ ಪಡೆ ಇದೆ ಬಿಜೆಪಿ ಕಾಂಗ್ರೆಸ್ ಪಕ್ಷದ ಮುಖಂಡರ ಆಮಿಷಗಳಿಗೆ ಬಲಿಯಾಗಲಿಲ್ಲ. ನಮ್ಮಲ್ಲಿನ ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಿನಿಂದ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.

ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಜನಪನಹಳ್ಳಿ ಆನಂದ್, ವೀರೇಂದ್ರ, ಚಂಗೇಗೌಡ, ಗ್ರಾಪಂ ಸದಸ್ಯ ಮಂಜುನಾಥ್, ಮುರಳಿ ಮೋಹನ್, ಜಗದೀಶ್, ಅಪ್ಪಣ್ಣ, ಮುಂತಾದವರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!