• Tue. Oct 22nd, 2024

ಕೋಲಾರ I ನೌಕರರಲ್ಲಿ ಉಲ್ಲಾಸ ಮತ್ತು ಚೈತನ್ಯ ಪಡೆಯಲು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಅಗತ್ಯ- ಸಂಸದ ಎಸ್.ಮುನಿಸ್ವಾಮಿ

PLACE YOUR AD HERE AT LOWEST PRICE

ಸದಾ ಕರ್ತವ್ಯನಿರತ ನೌಕರರು ತಮ್ಮ ವೃತ್ತಿಯಲ್ಲಿ ವಿಶ್ರಾಂತಿ ಮತ್ತು ಚೈತನ್ಯ ಪಡೆಯಲು ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಪ್ರತಿದಿನ ತೊಡಗಿಸಿಕೊಳ್ಳಬೇಕು. ಆ ಮೂಲಕ ಪ್ರಶಾಂತವಾದ ಮನಸ್ಸು ಮತ್ತು ಸದೃಢವಾದ ದೈಹಿಕ ಆರೋಗ್ಯವನ್ನು ಹೊಂದಬೇಕೆಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಮುನಿಸ್ವಾಮಿ ಅಭಿಪ್ರಾಯ ಪಟ್ಟರು.

ಶನಿವಾರ ಕೋಲಾರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಕ್ರೀಡ ಇಲಾಖೆ ಕೋಲಾರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುತ್ತಿದ್ದರು.

ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಒಂದು ಗಂಟೆ ಕ್ರೀಡೆಗೆ ಮೀಸಲಾಗಿಡಿ, ಮತ್ತು ಎಲ್ಲರೂ ಸಕ್ರಿಯವಾಗಿ ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾದವರಿಗೆ ಟ್ರ್ಯಾಕ್ಶೂಟ್ ಕೊಡುತ್ತೇನೆ ಎಂದು ತಿಳಿಸಿದರು.

ಸರ್ಕಾರಿ ನೌಕರರು ತಮ್ಮ ಮಕ್ಕಳಿಗೂ ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು, ಎಲ್ಲಾ ಸರ್ಕಾರಿ ನೌಕರರು ಒಗ್ಗಟ್ಟಾಗಿ ಕೆಲಸವನ್ನು ನಿರ್ವಹಿಸಿ ಜಿಲ್ಲೆಯನ್ನು ಅಭಿವೃದ್ಧಿ ಪಥದ ಕಡೆಗೆ ಕೊಂಡೊಯ್ಯಬೇಕು ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪುವ ರೀತಿ ಕೆಲಸ ನಿರ್ವಹಿಸಬೇಕು.
ಜಿಲ್ಲೆಯ ಯುವಕರಿಗೆ ಕ್ರೀಡಾ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ 875 ಲಕ್ಷದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಗೌಡ,ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಶಶಿಕಲಾ, ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್‌ ಬಾಬು ಮತ್ತು ಪದಾಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿ ನೌಕರರೂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Post

ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ನೀಡಿದ್ದಾರೆ. ಆದರೆ,‌ ರಾಜೀನಾಮೆ ನೀಡಲು ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ : ಮಾಜಿ ಸಂಸದ ಎಸ್.ಮುನಿಸ್ವಾಮಿ
ನಾವು ಆಸೆಗಳಿಗೆ ಮಿತಿಯಿಲ್ಲದೆ ಬದುಕುತ್ತೇವೆ,ಸಮಾಜಕ್ಕೆ ಒಂದಷ್ಟು ಕೊಡುಗೆಯಾಗಿ ನೀಡಿದಾಗ ನಮ್ಮ ಜನ್ಮ ಸಾರ್ಥಕವಾಗುತ್ತದೆ: ಶಿಕ್ಷಕ ಕೆ.ಹೆಚ್.ಸಂಪತ್ ಕುಮಾರ್
ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ: ನರಸಿಂಹಯ್ಯ 

Leave a Reply

Your email address will not be published. Required fields are marked *

You missed

error: Content is protected !!