• Thu. Apr 25th, 2024

ಕೋಲಾರ। ದೊಡ್ಡಹಸಾಳ ಗ್ರಾಮದಲ್ಲಿ ಸಿಎಂಆರ್ ಶ್ರೀನಾಥ್ ಪ್ರಚಾರ

PLACE YOUR AD HERE AT LOWEST PRICE

ಕೋಲಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಹಸಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಜನರ ಕಷ್ಟ ಸುಖ, ಸಮಸ್ಯೆಗಳನ್ನು ಅಲಿಸಿ, ಮುಂಬರುವ 2023 ರ ವಿಧಾನಸಭೆ ಚುನಾವಣೆಯಲ್ಲಿ ನನಗೆ ಬೆಂಬಲ ನೀಡುವಂತೆ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಮನವಿ ಮಾಡಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಮಾತನಾಡಿದ. ತಾನೂ ಸುಮಾರು ವರ್ಷಗಳಿಂದ ಕೋಲಾರ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿ ಸಮಾಜ ಸೇವೆಗಳನ್ನು ಮಾಡುತ್ತಾ ಬರುತ್ತಿದ್ದು, ಹಲವಾರು ಸಮಾಜಮುಖಿ ಕಾರ್ಯಗಳು, ಉಚಿತ ಆರೋಗ್ಯ ತಪಾಸಣಾ ಶಿಬಿರ, ಕಣ್ಣಿನ ತಪಾಸಣಾ ಶಿಬಿರ, ಕರೋನ ಕಷ್ಟ ಕಾಲದಲ್ಲಿ ಕ್ಷೇತ್ರದಲ್ಲಿನ ಎಲ್ಲಾ ಮನೆಗಳಿಗೆ ಆಹಾರ ಪದಾರ್ಥಗಳ ಸಾಮಾಗ್ರಿಗಳನ್ನು ವಿತರಣೆ ಮಾಡುವುದರ ಮೂಲಕ ನಿರಂತರವಾಗಿ ಜನಪರ ಕೆಲಸ ಮಾಡುತ್ತಾ ಕ್ಷೇತ್ರದಲ್ಲಿದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದೇನೆ ಎಂದರು.

ರಾಜ್ಯದ ಜನತೆಯ ಒಳಿತಿಗಾಗಿ ಕುಮಾರಣ್ಣ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಮಧ್ಯಮ ವರ್ಗದ ಜನರು ಬದುಕುವುದಕ್ಕಾಗಿ ತಮ್ಮ ಜೀವನವನ್ನೇ ಕಣ್ಣೀರಿನಲ್ಲಿ ತೊಳೆಯುತ್ತಿದ್ದಾರೆ. ಇದಕ್ಕೆ ಎರಡು ರಾಷ್ಟ್ರೀಯ ಪಕ್ಷಗಳು ಕಾರಣ. ಕುಮಾರಣ್ಣ ಅವರು ಪಂಚರತ್ನ ಯಾತ್ರೆ ಮೂಲಕ ಮಧ್ಯಮ ವರ್ಗದ ಜನರಿಗೆ ಏನೇನು ಯೋಜನೆಯನ್ನು ಕಲ್ಪಿಸುತ್ತೇನೆ ಎಂದು ಹೇಳಿಕೊಂಡು ಜೆಡಿಎಸ್ ಸರ್ಕಾರ ರಚನೆಗೆ ಅವಕಾಶ ಕೋರುತ್ತಿದ್ದಾರೆ.

ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಅವರಿಗೆ ಗುರಿ ಇಲ್ಲದೆ ಕೇವಲ ಭ್ರಷ್ಟಾಚಾರವನ್ನೇ ಮುಂದಿಟ್ಟುಕೊಂಡು ಆರೋಪ- ಪ್ರತ್ಯಾರೋಪ ಮಾಡಿಕೊಂಡು ರಾಜ್ಯದ ಜನರನ್ನು ದಿವಾಳಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿನ ಜನರು-ರೈತರು ನೆಮ್ಮದಿ ಜೀವನಕ್ಕೆ ಕುಮಾರಣ್ಣ ಅವರು ಈಗಾಗಲೇ ಸುಮಾರು 25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ಉಚಿತ ಆರೋಗ್ಯ, ಶಿಕ್ಷಣ, ವಸತಿ, ಉದ್ಯೋಗ, ರೈತ ಚೈತನ್ಯ ಹೀಗೆ ಜನಪರ ಕಾರ್ಯಕ್ರಮಗಳನ್ನ ಕೊಡುವುದಾಗಿ ಜನತೆಯ ಮುಂದೆ ಹೋಗಿ ಮತಯಾಚನೆ ಮಾಡುತ್ತಿದ್ದಾರೆ ಎಂದು ಸಿಎಂಆರ್ ಶ್ರೀನಾಥ್ ಹೇಳಿದರು.

ಇದೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಗುರಿಯಿಲ್ಲದೆ ಧರ್ಮಗಳು, ಜಾತಿ ಆಧಾರದ ಮೇಲೆ ಮತ ಕೇಳುವ ಮೂಲಕ ಗ್ರಾಮೀಣ – ನಗರ ಪ್ರದೇಶದ ಜನರು ಬದುಕಿನಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದು ಇವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಮುಂಬರುವ 2023 ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ನಾನು ಸ್ಪರ್ಧೆ ಮಾಡುತ್ತಿದ್ದು ಉತ್ತಮ ಬೆಂಬಲ ಕೂಡ ಸಿಗುತ್ತದೆ. ಇದೇ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳು ತಾಂಡವವಾಡುತ್ತಿರುವ ಬಗ್ಗೆ ಜನತೆ ತಮ್ಮ ಬಳಿ ತೋಡಿಕೊಳ್ಳುತ್ತಿದ್ದು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ ಕ್ಷೇತ್ರದ ಶಾಸಕ ಶ್ರೀನಿವಾಸಗೌಡರು ರಾಜಕೀಯದ ಕಡೆ ದಿನಗಳನ್ನು ನೆಮ್ಮದಿಯಿಂದ ಕಾಣಬೇಕೆಂದು ಜೆಡಿಎಸ್ ಪಕ್ಷದ ಮುಖಂಡರು ವಕ್ಕಲೇರಿ ರಾಮು ಅವರಿಗೆ ಕೊಟ್ಟಿದ್ದ ಜೆಡಿಎಸ್ ಟಿಕೇಟ್ ಅನ್ನು ಶ್ರೀನಿವಾಸಗೌಡರಿಗೆ ಕೊಟ್ಟು ಪಕ್ಷಾತೀತವಾಗಿ ಗೆಲ್ಲಿಸಿದ್ದರು. ಆದರೆ ಶ್ರೀನಿವಾಸಗೌಡರು ಕೋಲಾರ ಕ್ಷೇತ್ರದ ಜನರನ್ನ ಸಿದ್ದರಾಮಯ್ಯ ಅವರ ಮುಂದೆ ಒತ್ತೆ ಇಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಶಾಸಕ ಶ್ರೀನಿವಾಸಗೌಡರಿಗೆ ಏನಾದರೂ ಮಾನ ಮಾರ್ಯದೆ ಇದ್ದೀದ್ದರೆ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಟ್ಟರೇ ಅವತ್ತೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು. ಆದರೆ ನಾಚಿಕೆ ಇಲ್ಲದೆ ಜೆಡಿಎಸ್ ಶಾಸಕ ಸ್ಥಾನವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮುಂದೆ ಮಂಡಿಯೂರಿರಯವುದು ಅವರ ಘನತೆಗೆ ತಕ್ಕದಲ್ಲ ಎಂದಿದ್ದಾರೆ.

ಕ್ಷೇತ್ರದಲ್ಲಿ ಕುಮಾರಣ್ಣ ಅವರು ಸಿಎಂಆರ್ ಶ್ರೀನಾಥ್ ಅವರ ಮೇಲೆ ನಂಬಿಕೆ ಇಟ್ಟು ಜೆಡಿಎಸ್ ಅಭ್ಯರ್ಥಿಯಾಗಿ ಮಾಡಿದ್ದು ಕಾರ್ಯಕರ್ತರ ನಂಬಿಕೆ ಉಳಿಸುವ ನಿಟ್ಟಿನಲ್ಲಿ ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಿದ್ದಾರೆ. ನಿಮ್ಮೊಂದಿಗೆ ಸದಾಕಾಲವೂ ಜೊತೆಯಾಗಿ ಇರುವ ಸ್ಥಳೀಯ ವ್ಯಕ್ತಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಕುರುಬರ ಸಂಘದ ಮಾಜಿ‌ ನಿರ್ದೇಶಕ ಕೆ.ಟಿ ಅಶೋಕ್ ಕುಮಾರ್, ಬಲಿಜ ಸಂಘದ ಹಾರೋಹಳ್ಳಿ ತೋಟದ ಮನೆಗಳ ಅಶೋಕ್, ರಾಮಸಂದ್ರ ತಿರುಮಲೇಶ್, ಡಾಬಾ ಶಂಕರ್, ದೊಡ್ಡಹಸಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸದಸ್ಯರು ಹಾಗೂ ಜೆಡಿಎಸದ ಮುಖಂಡರು ಕಾರ್ಯಕರ್ತರು ಇದ್ದರು.

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!