PLACE YOUR AD HERE AT LOWEST PRICE
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ವರ್ಧೆ ಮಾಡಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ನೇತೃತ್ವದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಹೊನ್ನೇನಹಳ್ಳಿ ಯಲ್ಲಪ್ಪ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಲು ಮಾಜಿ ಸಿಎಂ
ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಅವರು ಕಾರಣವಾಗಿದ್ದು ಅವರಿಗೆ ಅಭಿನಂದನೆ ಸಲ್ಲಿಸಿದ್ದೇವೆ ಜೊತೆಗೆ ಜಿಲ್ಲೆಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಲಾಗಿದ್ದು ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನಿಂದ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಅತ್ಯಧಿಕವಾದ ಮತಗಳಿಂದ ಗೆಲ್ಲಿಸಿ ಕಳಸುತ್ತೇವೆ ಎಂದು ತಿಳಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಿಲಿಟರಿ ರಾಮಣ್, ಲಾಲ್ ಬಹಾದ್ದೂರ್ ಶಾಸ್ತ್ರಿ, ಮೋಚಿಪಾಳ್ಯ ನಾಗೇಶ್ ಇದ್ದರು.