ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಪ್ರಪಂಚ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಕೆಜಿಏಫ್ ಕ್ಷೇತ್ರದಲ್ಲಿ ವಿಧಾನ ಸಭಾ ಚುನಾವಣೆಯ ರಂಗೇರಿದ್ದು ಬಿಜೆಪಿ ಬೆಂಬಲತ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಮುಖಂಡರು ಚರ್ಚಿಸುತ್ತಿರುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆಜಿಎಫ್ ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಪಂಯ ಬಿಜೆಪಿ ಬೆಂಬಲಿತ ಗ್ರಾಪಂಯ ಸದಸ್ಯರು ಬಹುತೇಕ ಸದಸ್ಯರು
ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಂಭವವಿದೆ ಎನ್ನಲಾಗುತ್ತಿದೆ.
ಇತ್ತೀಚಿಗೆ ಕೋಲಾರದ ಖಾಸಗಿ ಹೋಟೆಲ್ ಒಂದರಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದ್ ಗೌಡ ಅವರೊಂದಿಗೆ ಟಿ.ಗೊಲ್ಲಹಳ್ಳಿ ಗ್ರಾಪಂಯ ಕಾಂಗ್ರೆಸ್ ಮುಖಂಡರಾದ ಶ್ರೀರಾಮಪ್ಪ ಹಾಗೂ ಬ್ಯಾಟೇಗೌಡರ ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಮಾತುಕತೆ ನಡೆಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದ್ ಗೌಡ, ಸ್ಥಳೀಯ ಮುಖಂಡರಾದ ಬ್ಯಾಟೇಗೌಡ, ಶ್ರೀರಾಮಪ್ಪ ಅವರೊಂದಿಗೆ ಮಾತುಕತೆ ನಡೆಸಿರುವ ಗ್ರಾಪಂ ಸದಸ್ಯರು ಶೀಘ್ರದಲ್ಲಿಯೇ ಶಾಸಕಿ ಎಂ.ರೂಪಕಲಾ ಶಶಿಧರ್ ಸಮ್ಮುಖದಲ್ಲಿ ಬೃಹತ್ ವೇದಿಕೆಯ ಮೂಲಕ ಕಾಂಗ್ರೆಸ್ ಪಕ್ಷದ ಬಾವುಟ ಹಿಡಿಯಲಿದ್ದಾರೆಂದು ಮುಖಂಡರೊಬ್ಬರು ತಿಳಿಸಿದ್ದಾರೆ.
ಬಿಜೆಪಿ ಬೆಂಬಲಿತರಾಗಿ ಸತತವಾಗಿ 2-3 ಭಾರಿ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿರುವವರು ಬಿಜೆಪಿ ಪಕ್ಷವನ್ನು ಬಿಡಲು ಕೆಜಿಏಫ್ ಬಿಜೆಪಿಯಲ್ಲಿನ ಗುಂಪುಗಾರಿಕೆ ಯಿಂದ ನೋದಿರುವುದೆ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.
ಟಿ.ಗೊಲ್ಲಹಳ್ಳಿ ಗ್ರಾಪಂಯ ಸದಸ್ಯರು ಸೇರಿದಂತೆ ಇತರೆ ಗ್ರಾಪಂಗಳಲ್ಲಿಯೂ ಬಿಜೆಪಿ ಮುಖಂಡರು ಹಾಗೂ ಗ್ರಾಪಂ ಸದಸ್ಯರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶೀಘ್ರದಲ್ಲಿಯೇ ಸೇರ್ಪಡೆ ಪರ್ವ ಪ್ರಾರಂಭವಾಗಲಿದೆ ಎಂದು ಸ್ಥಳೀಯ ಮುಖಂಡರು ತಿಳಿಸಿದರು.