• Fri. May 17th, 2024

ಶ್ರೀನಿವಾಸಪುರ:ಮಾದರಿ ಶಾಲೆಯಾಗಿ ರೂಪಗೊಂಡ ಬೀಡಗಾನಹಳ್ಳಿ ಶಾಲೆ.

PLACE YOUR AD HERE AT LOWEST PRICE

ರಾಜ್ಯದಲ್ಲಿ ಬಹುತೇಕ ಸರ್ಕಾರಿ ಶಾಲೆಗಳಿಗೆ ದಾಖಲಾತಿಗಳು ಇಲ್ಲದೇ ಮುಚ್ಚಲಾಗುತ್ತಿದೆ. ಆದರೇ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಬೀಡಗಾನಹಳ್ಳಿ ಎಂಬ ಪುಟ್ಟಗ್ರಾಮದ ಸರ್ಕಾರಿ ಶಾಲೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ.

ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಲೇಬೇಕು ಎಂಬ ನಿಟ್ಟಿನಲ್ಲಿ ನೆಲವಂಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೌತಮಿ ಮುನಿರಾಜು ಹಾಗೂ ಗ್ರಾಮದ ಸೋಮು ಹಾಗೂ ರಾಮಕೃಷ್ಣ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ.

ಸಿಡಿಪಿಓ ಅನುದಾನದಲ್ಲಿ ಬಂದ ಹಣವನ್ನು ಸದುಪಯೋಗಪಡಿಸಿಕೊಂಡು ಯಾವುದೇ ಖಾಸಗಿ ಶಾಲೆಗಳಿಗೆ ಕಮ್ಮಿ ಇಲ್ಲಾ ಎಂಬಂತೆ ವ್ಯವಸ್ಥಿತವಾಗಿ ಮಾದರಿ ಶಾಲೆಯನ್ನಾಗಿ ಮಾರ್ಪಡು ಮಾಡಲಾಗಿದೆ ಹಚ್ಚಹಸಿರಿನಿಂದ ತುಂಬಿರುವ ಶಾಲಾ ಆವರಣ.

ಹೈಟೆಕ್ ಶೌಚಾಲಯ, ವ್ಯವಸ್ಥಿತವಾದಂತ ಕಾಂಪೌಂಡ್, ಮಕ್ಕಳು ಆಟವಾಡಳು ಆಟೋಪಕರಣಗಳನ್ನು ನಿರ್ಮಾಣ ಮಾಡಲಾಗಿದ್ದು ಕಾರ್ಯಕ್ರಮವನ್ನು ಟೇಪ್ ಕತ್ತರಿಸುವುದರ ಮೂಲಕ ಹಾಗೂ ಗಿಡವನ್ನು ನೆಡುವುದರ ಮೂಲಕ ಶಾಸಕ ಕೆ ಆರ್ ರಮೇಶ್ ಕುಮಾರ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕರು ಶಾಲೆಯ ಆವರಣವನ್ನು ಸ್ವಚ್ಛತೆಯನ್ನು ಕಾಪಾಡಿ ಶಾಲಾ ಆವರಣದಲ್ಲಿ ಪ್ರಾಣಿ-ಪಕ್ಷಿಗಳಿಗೆ ಅನುಕೂಲವಾಗುವಂತಹ ಗಿಡಗಳನ್ನು ನೆಟ್ಟು ಮಕ್ಕಳಿಗೆ ಒಳ್ಳೆಯ ವಾತಾವರಣ ಸೃಷ್ಟಿಸಿ ಎಂದು ಸಲಹೆ ಕೊಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೌಸ್ ಸಾಬ್, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಕೆ ಕೆ ಮಂಜುನಾಥ್, ಕಾಂಗ್ರೆಸ್ ಪಕ್ಷದ ಮುಖಂಡರಾದ ವಕೀಲ ಮುನಿರಾಜು, ಪಾತೂರು ಬಾಬುರೆಡ್ಡಿ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!