PLACE YOUR AD HERE AT LOWEST PRICE
ಬಂಗಾರಪೇಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶ್ರಮಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ಎ.ಐ.ಯು.ಟಿ.ಯು.ಸಿ) ಸಂಘಟನೆ ವತಿಯಿಂದ ಸುಭಾಷ್ ಚಂದ್ರ ಬೋಸ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ರಾಜ್ಯ ಉಪಾಧ್ಯಕ್ಷರಾದ ಕೆ.ವಿ. ಭಟ್ ವಹಿಸಿ ಮಾತನಾಡಿ, ಇಂದಿನ ಯುವ ಪೀಳಿಗೆ ಸುಭಾಷ್ ಚಂದ್ರ ಬೋಸ್ ಅವರ ಆದರ್ಶ ತತ್ವವನ್ನು ಪಾಲಿಸಬೇಕು.
ಇವರು ಸ್ವಾತಂತ್ರ್ಯ ಹೋರಾಟಕ್ಕಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಇವರಲ್ಲಿ ದೇಶಪ್ರೇಮ ಚಿರಕಾಲ ಗೂಡು ಮಾಡಿತು. ಯುವಕರಿಗೆ ಸುಭಾಷ್ ಚಂದ್ರ ಬೋಸ್ ಎಂಬುದು ಆದರ್ಶ ದಾಯಕವಾಗಿದೆ. ಪ್ರತಿದಿನ ಬೋಸ್ ರನ್ನು ನೆನಪು ಮಾಡಿಕೊಂಡು ಉತ್ತಮ ಜೀವನ ಸಾಗಿಸೋಣ ಎಂದರು.
ಈ ಕಾರ್ಯಕ್ರಮದಲ್ಲಿ ಜನಾಧಿಕಾರಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಪ್ಪ, ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ರಮೇಶ್ ಗೌಡ, ಶ್ರಮಶಕ್ತಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಆರ್. ವಿಶ್ವನಾಥ್, ಮಂಜುನಾಥ್, ಶ್ರೀನಿವಾಸಪ್ಪ, ಮಂಚಹಳ್ಳಿ ಸತೀಶ್, ಕುಮಾರ್, ವೆಂಕಟಪತಿ, ತಾತೇಗೌಡ, ರಮೇಶ್ ಮುಂತಾದವರು ಭಾಗವಹಿಸಿದ್ದರು.