ಶ್ರೀನಿವಾಸಪುರ: ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸಾಮರಸ್ಯಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಯೋಜನೆಗಳನ್ನು ಜಾರಿಗೊಳಿಸಲು ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಜನಪರ ವೇದಿಕೆಯವರಿಂದ ಪ್ರತಿಭಟನೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರ ಮುಂದಿನ ಬಜೆಟ್ ನಲ್ಲಿ ಕೇಸಿ ವ್ಯಾಲಿ ನೀರನ್ನು ಕಡ್ಡಾಯವಾಗಿ ಮೂರನೇ ಹಂತದ ಶುದ್ಧೀಕರಣ ಮಾಡಬೇಕು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ ಸರ್ಕಾರಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯೊಂದಿಗೆ ಮೆಡಿಕಲ್ ಕಾಲೇಜ್ ಸ್ಥಾಪಿಸಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಯಾಗಬೇಕು.
ಕೆಲಸದ ದಿನಗಳು 200 ದಿನಗಳು ಮಾಡಿ ಕೂಲಿ 700 ರೂಗೆ ಏರಿಕೆ ಮಾಡಬೇಕು. ಬಗರ್ ಹುಕುಂ ಸಾಗುವಳಿ ಸಕ್ರಮವಾಗಬೇಕು. ರೈತರ ಹಿತಕ್ಕೆ ವಿರುದ್ಧವಾಗಿ ರಾಜ್ಯದದ ಭೂಸ್ವಾಧೀನ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ರದ್ದು ಮಾಡಬೇಕು.
ಶ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲ ನೀಡಬೇಕು ಅಂತರಗಂಗೆ ಸೇರಿದಂತೆ ಜಿಲ್ಲೆಯಲ್ಲಿರುವ ಪ್ರವಾಸಿ ಸ್ಥಳಗಳನ್ನು ಪ್ರವಾಸಿ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಬೇಕು. ಇನ್ನು ಹಲವಾರು ಬೇಡಿಕೆಗಳನ್ನು ಬಜೆಟ್ ನಲ್ಲಿ ಮಂಡಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿಗಳಿಗೆ ಮನವಿ ಪತ್ರವನ್ನು ರವಾನೆ ಮಾಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ದಂಡಾಧಿಕಾರಿಗಳಿಗೆ ಸಲ್ಲಿಸಿದರು
ಈ ಪ್ರತಿಭಟನೆಯಲ್ಲಿ ನಾರಾಯಣಸ್ವಾಮಿ, ಚಿನ್ನಪ್ಪ ರೆಡ್ಡಿ, ಪಾತಕೋಟೆ ನವೀನ್, ವೆಂಕಟಾಚಲ, ರಾಮಾಂಜನೇಯ, ಶೋಭಾ, ಶಿವರಾಜ್, ಮಂಜುಳಾ ಮತ್ತಿತರು ಹಾಜರಿದ್ದರು.