• Thu. Apr 25th, 2024

ಕೋಲಾರ I ಎಸಿ ಕಚೇರಿ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಕ್ಕೆ ಸಿದ್ದತೆ ಯತ್ನ – ಸಾರ್ವಜನಿಕ ವಲಯದ ವಿರೋಧ

PLACE YOUR AD HERE AT LOWEST PRICE

ಕೋಲಾರ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕಾಗಿ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡದ ಜಾಗವನ್ನು ಕಾಯ್ದಿರಿಸಿ, ಎಸಿ ಕಚೇರಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರಿಸಲು ಸಿದ್ಧತೆಗಳನ್ನು ನಡೆಸಲಾಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಬ್ರಿಟೀಷರ ಕಾಲದ ಕಟ್ಟಡದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಿದ್ದು, ೧೯೬೧ರಿಂದಲೂ ಈವರೆಗೂ ಯಾವುದೇ ತೊಂದರೆಯಿಲ್ಲದೆ ಕಾರ್ಯಚಟುವಟಿಕೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಕೋಲಾರ ನಗರದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಿದ್ದು, ಕೂಗಳತೆ ದೂರದಲ್ಲಿಯೇ ನ್ಯಾಯಾಲಯವೂ ಇದೆ.

ಉಪವಿಭಾಗಾಧಿಕಾರಿಗಳ ಕಚೇರಿಯು ನಗರದಲ್ಲಿ ಇರುವುದರಿಂದಾಗಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬರುವ ಸಾರ್ವಜನಿಕರು, ರೈತರ ಕೆಲಸ ಕಾರ್ಯಗಳಿಗೆ ಸೂಕ್ತವಾಗಿದೆ. ಪಕ್ಕದಲ್ಲಿಯೇ ನ್ಯಾಯಾಲಯವೂ ಇರುವುದರಿಂದ ವಕೀಲರಿಗೂ ಅನುಕೂಲವಾಗಿದೆ.
ಆದರೆ, ಇದೀಗ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ಇಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಸ್ಥಳಾಂತರಿಸಿದ್ದೇ ಆದಲ್ಲಿ ರೈತರು, ಸಾರ್ವಜನಿಕರು, ವೃದ್ಧರು, ವಕೀಲರು ಸೇರಿದಂತೆ ಎಲ್ಲರಿಗೂ ಅನಾನುಕೂಲವಾಗಲಿದೆ. ಕಾರಣ ಜಿಲ್ಲಾಧಿಕಾರಿ ಕಚೇರಿಯು ಕೋಲಾರ ನಗರದಿಂದ ೬-೭ ಕಿಮೀಗಳಿದ್ದು, ಅಲ್ಲಿಗೆ ಹೋಗುವುದಕ್ಕೆ ಬಸ್, ಆಟೋಗಳಿಗೆ ಕಾಯಬೇಕಾದ ಪರಿಸ್ಥಿತಿಯೂ ಇದೆ.
ಬೇರೆ ತಾಲೂಕುಗಳಿಂದ ನಗರಕ್ಕೆ ಕಷ್ಟಪಟ್ಟು ಬರುವುದಲ್ಲದೆ ಇಲ್ಲಿಂದ ಪುನಃ ಬಸ್, ಆಟೋಗಳಿಗೆ ಹಣ ನೀಡಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಲು ಹರಸಾಹಸ ಪಡಬೇಕಾಗಿದೆ. ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕೆ ಕೋಲಾರ ನಗರ ಸೇರಿದಂತೆ ಹೊರವಲಯದಲ್ಲಿ ಸಾಕಷ್ಟು ಸರಕಾರಿ ಜಮೀನು ಇದೆ.

ಅಲ್ಲಿ ಬೇಕಿದ್ದರೆ ನಿರ್ಮಿಸಿಕೊಳ್ಳಲಿ, ಇಲ್ಲವೇ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕೋಲಾರ ತಾಲೂಕು ಕಚೇರಿಗಾದರೂ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕೇ ಹೊರತು ಜಿಲ್ಲಾಧಿಕಾರಿಗಳ ಕಚೇರಿಗೆ ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು ಎನ್ನುವ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಉಪವಿಭಾಗಾಧಿಕಾರಿಗಳ ಕಚೇರಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸ್ಥಳಾಂತರಿಸುವುದರಿಂದ ಸಾರ್ವಜನಿಕರು, ರೈತರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಲಿದೆ. ಬ್ರಿಟೀಷರ ಕಾಲದ ಕಟ್ಟಡ ಉತ್ತಮ ಸ್ಥಿತಿಯಲ್ಲಿದೆ. ಇದನ್ನು ಉಳಿಸಿಕೊಳ್ಳದೆ ಕಟ್ಟಡ ತೆರವುಗೊಳಿಸಿ, ವಸತಿ ಗೃಹಗಳ ನಿರ್ಮಾಣಕ್ಕೆ ಮುಂದಾಗಿರುವುದು ಖಂಡನೀಯವಾಗಿದ್ದು, ಕೂಡಲೇ ಈ ಕ್ರಮವನ್ನು ವಾಪಸ್ ಪಡೆಯುವಂತೆ ಗ್ರಾ.ಪಂ ಸದಸ್ಯ ನಿರಂಜನ್ ಒತ್ತಾಯಿಸಿದ್ದಾರೆ.

 

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!