• Fri. Apr 26th, 2024

ಕೋಲಾರ I ಸಾಮಾಜಿಕ ಸಮಾನತೆಗಾಗಿ ಕಾವ್ಯ – ಸಾಹಿತ್ಯ ರಚಿಸಿದ ಡಾ.ಸಿದ್ದಲಿಂಗಯ್ಯ : ಮುಕುಂದ

PLACE YOUR AD HERE AT LOWEST PRICE

ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನ್ನೆಡೆಸಿದ್ದ ದಲಿತ ಕವಿ, ಸಿದ್ದಲಿಂಗಯ್ಯನವರ ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ ಅವರು ಸಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ ಆದರ್ಶವಾದಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮುಕುಂದ ಬಣ್ಣಿಸಿದರು.

ಕೋಲಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಡಾ.ಸಿದ್ಧಲಿಂಗಯ್ಯ ಅವರ ಒಂದು ನೆನಪು ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

’ದಲಿತ ಕವಿ’ ಎಂದೇ ಪ್ರಸಿದ್ಧರಾದ ಕವಿ ಡಾ. ಸಿದ್ದಲಿಂಗಯ್ಯ ಅವರು ಶ್ರವಣಬೆಳಗೊಳದಲ್ಲಿ ನಡೆದ ೮೧ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಎರಡು ಬಾರಿ ನಾಮಕರಣಗೊಂಡಿರುವುದರ ಜೊತೆಗೆ, ಕನ್ನಡ ಅಭಿವೃದ್ಧಿ ಪ್ರಾಽಕಾರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಽಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿ, ರಾಜ್ಯದಾದ್ಯಂತ ತಮ್ಮ ಸಾಹಿತ್ಯ ಸೇವೆಯಿಂದ ಅನೇಕರನ್ನು ಜನ ಸೇವೆಗೆ ಮತ್ತು ಸಾಹಿತ್ಯ ಸೇವೆಗೆ ಪ್ರೇರೇಪಿಸಿದ ಆದರ್ಶ ವ್ಯಕ್ತಿ ಎಂದರು.

ಸಮಿತಿಯ ಸಾಂಸ್ಕೃತಿಕ ಕಾರ್ಯದರ್ಶಿ ಸಂಗೀತ್ ವೆಂಕಟೇಶ್ ಮಾತನಾಡಿ, ಸಿದ್ದಲಿಂಗಯ್ಯ ಅವರು ಬರೆದ ಕವಿತೆಗಳು ಭಾರತದ ಹಲವು ಭಾಷೆಗಳಿಗೆ ತರ್ಜುಮೆಗೊಂಡಿದ್ದು, ಡಾ. ಸಿದ್ದಲಿಂಗಯ್ಯ ಅವರ ಹೆಸರು ಕನ್ನಡದ ಆಚೆಗೂ ಪಸರಿಸಿದೆ. ಕನ್ನಡ ಸಾಹಿತ್ಯ ಲೋಕಕ್ಕೆ ಸಿದ್ದಲಿಂಗಯ್ಯ ಅವರು ಅಪಾರ ಕೊಡುಗೆ ನೀಡಿದ್ದರು ಎಂದ ಅವರು ಭಕ್ತರಪ್ಪ ಭಕ್ತರು ನನ್ನ ಜನಗಳು ಎಂಬ ಅವರ ಲೇಖನ ಗೀತೆಯನ್ನು ಹಾಡಿ ರಂಜಿಸಿದರು.

ಮುಖಂಡರಾದ ರಾಜಣ್ಣ ಮಾತನಾಡಿ ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು ಇವರ ದಾಖಲಾರ್ಹ ಕೃತಿಗಳು. ಕನ್ನಡ ಸಾಹಿತ್ಯಕ್ಕೊಂದು ಹೊಸ ತಿರುವನ್ನು ನೀಡಿದ ಡಾ. ಸಿದ್ಧಲಿಂಗಯ್ಯ ಆದರ್ಶವಾದಿ ಇವರ ಜೀವನ ಸಾಧನೆ ಇತರರಿಗೆ ಮಾದರಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಗೌರವಾಧ್ಯಕ್ಷ ಜಿ. ಶ್ರೀನಿವಾಸ್ ವಹಿಸಿದ್ದು, ಈ ಸಂದರ್ಭದಲ್ಲಿ ರಾಜಪ್ಪ, ವೆಂಕಟೇಶಪ್ಪ, ಕೆ.ವಿ.ಜಗನ್ನಾಥ್, ರಂಗಪ್ಪ, ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!