• Sat. Apr 27th, 2024

ಕೋಲಾರ I ಎಸಿ ಕಚೇರಿ ಸ್ಥಳಾಂತರಕ್ಕೆ ರೈತ ಸಂಘ ವಿರೋಧ ಮನವಿ ಸಲ್ಲಿಕೆ

PLACE YOUR AD HERE AT LOWEST PRICE

ಕೋಲಾರ ನಗರದ ಹೃದಯ ಭಾಗದಲ್ಲಿರುವ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ದ್ವಂಸಗೊಳಿಸಿ ಸಿ.ಇ.ಒ ನಿವಾಸ ನಿರ್ಮಿಸುವ ತೀರ್ಮಾನ ಕೈಬಿಡಬೇಕೆಂದು ರೈತ ಸಂಘದಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು.

ಕೋಲಾರ ನಗರದ ಸುತ್ತ ಮುತ್ತ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಅದನ್ನು ಪತ್ತೆ ಹಚ್ಚಿ ಒತ್ತುವರಿ ತೆರವುಗೊಳಿಸಲು ಸಾಧ್ಯವಾಗದೆ ನಗರ ಹೃದಯ ಭಾಗದಲ್ಲಿರುವ ಎ.ಸಿ ಕಚೇರಿಯನ್ನು ದ್ವಂಸ ಮಾಡಲು ಹೊರಟಿರುವ ತೀರ್ಮಾನದ ವಿರುದ್ದ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ವರ್ಷಗಳ ಇತಿಹಾಸವನ್ನು ಹೊಂದಿರುವಂತ ಕೋಲಾರ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ಧ್ವಂಸಗೊಳಿಸುವ ನಿರ್ಧಾರವನ್ನು ಜಿಲ್ಲಾಡಳಿತ ಕೈಗೊಂಡಿರುವುದು ಸಾವಿರಾರು ಜನರ ಭಾವನೆಗಳಿಗೆ ನೋವುಂಟು ಮಾಡಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿ ನಗರದ ಹೊರವಲಯಕ್ಕೆ ವರ್ಗಾವಣೆ ಆಗಿರುವುದರಿಂದ ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೆ ಬರಲು ನೂರಾರು ರೂಪಾಯಿ ಖರ್ಚು ಮಾಡಿಕೊಂಡು ಬರಬೇಕಾದ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ವರ್ಗಾವಣೆ ಮಾಡಿದರೆ ಆರು ತಾಲೂಕುಗಳ ಜನರಿಗೆ ತೀವ್ರ ತೊಂದರೆಯಾಗಲಿದೆ ಕೂಡಲೇ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ಧ್ವಂಸಗೊಳಿಸುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಜಿಲ್ಲಾ ಕಾರ್ಯಾಧಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಎಸಿ ಕಚೇರಿಯ ಧ್ವಂಸ ಕಾರ್ಯಕ್ಕೆ ಅಧಿಕಾರಿಗಳು ಮುಂದಾದರೆ ಪ್ರಗತಿಪರ ಸಂಘಟನೆಗಳೆಲ್ಲವೂ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಜಿಲ್ಲಾಡಳಿತಕ್ಕೆ ಮತ್ತು ಸರ್ಕಾರಕ್ಕೆ ನೀಡುತ್ತಿದ್ದೇವೆ.

ಮನವಿ ಸ್ವೀಕರಿಸಿದ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮಿ ಮಾತನಾಡಿ, ಮನವಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸರ್ಕಾರಕ್ಕೆ ಕಳುಹಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ನಳಿನಿ.ವಿ, ಮಂಗಸಂದ್ರ ತಿಮ್ಮಣ್ಣ. ಕುವಣ್ಣ, ಆನಂದ್‌ರೆಡ್ಡಿ, ಯಾರಂಘಟ್ಟ ಗೀರೀಶ್, ಸಂದೀಪ್, ಸಂದೀಪ್ ಗೌಡ, ನವೀನ್, ಚಂದ್ರಪ್ಪ , ಆಶೋಕ್, ವೆಂಕಟೇಶಪ್ಪ, ಮುಂತಾದವಿದ್ದರು.

ಸುದ್ದಿ ಓದಿ ಹಂಚಿ:

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!