• Mon. Apr 29th, 2024

ಕೋಲಾರ I ಮೀನುಗಾರರ ಸಹಕಾರ ಸಂಘದ ತಾಲೂಕು ಅಧ್ಯಕ್ಷರಾಗಿ ಅಬ್ಬಣಿ ಶಂಕರ್ ಅವಿರೋಧ ಆಯ್ಕೆ

PLACE YOUR AD HERE AT LOWEST PRICE

ಕೋಲಾರ ತಾಲೂಕು ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಅಬ್ಬಣಿ ಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಿಗಧಿಯಾಗಿದ್ದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅಬ್ಬಣಿ ಶಂಕರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಸಹಕಾರ ಸಂಘಗಳ ಅಧೀಕ್ಷಕಿ ಎಂ.ಆರ್.ಗೀತಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಅಬ್ಬಣಿ ಶಂಕರ್ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಈ ಸಂದರ್ಭದಲ್ಲಿ ಕೋಲಾರ ತಾಲೂಕು ಮೀನುಗಾರರ ಸಹಕಾರ ಸಂಘದ ನಿರ್ದೇಶಕರುಗಳಾದ ದೇವರಾಜ್, ಮುನಿಯಪ್ಪ, ಗಂಗಮ್ಮ, ಲೋಕೇಶ್, ಎಸ್.ಬಾಬು, ಶ್ರೀರಾಮ, ಯಲ್ಲಪ್ಪ, ಶೇಖರ್, ವೆಂಕಟರಮಣಪ್ಪ ಹಾಜರಿದ್ದರು.

ಚುನಾವಣಿಗೂ ಮುನ್ನಾ ಕೋಲಾರ ತಾಲೂಕು ಮೀನುಗಾರರ ಸಹಕಾರ ಸಂಘದ ಆಡಳಿತಾಧಿಕಾರಿಯಾಗಿ ಸಹಕಾರ ಇಲಾಖೆಯ ಅಧಿಕಾರಿ ಎಲೀಶ್ ಕಾರ್ಯನಿರ್ವಹಿಸಿದ್ದರು.

ಸುದ್ದಿ ಓಧಿ ಹಂಚಿ:

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!