ಕೋಲಾರ ಜಿಲ್ಲಾ ಯಾದವ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸ್ಥಾನ ಹಾಗೂ ತಾಲ್ಲೂಕು ಸಂಘದ ಗೌರವಾಧ್ಯಕ್ಷ ಸ್ಥಾನಕ್ಕೂ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ಸಮಾಜಸೇವಕ ಮುಕ್ಕಡ್ ವೆಂಕಟೇಶ್ ತಿಳಿಸಿದ್ದಾರೆ.
ನಾನು ಸಂಘದ ಓರ್ವ ಸದಸ್ಯನಾಗಿ ಮುಂದುವರೆಯುತ್ತೇನೆ, ಸಂಘ ಬಲಪಡಿಸುವ ಕಾರ್ಯದಲ್ಲಿ ದುಡಿಯುತ್ತೇನೆ ಎಂದು ತಿಳಿಸಿರುವ ಅವರು, ಸಂಘಟನೆ ಸೂಚಿಸುವ ಕೆಲಸವನ್ನು ಶಿರಸಾವಹಿಸಿ ಮಾಡುವುದಾಗಿ ತಿಳಿಸಿ, ನನ್ನ ಅವಧಿಯಲ್ಲಿ ಸಹಕಾರ ನೀಡಿದ ಯಾದವ ಬಂಧುಗಳಿಗೆ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಸುದ್ದಿ ಓದಿ ಹಂಚಿ: