• Mon. Apr 29th, 2024

ಸವಿತಾ ಮಹರ್ಷಿ ಗುರುಗಳ ಹಾದಿಯಲ್ಲಿ ಸಾಗಿ ಆಚಾರ-ವಿಚಾರ ಮೈಗೂಡಿಸಿಕೊಂಡು ಸಮಾಜದಲ್ಲಿ ಸದ್ಪ್ರಜೆಗಳಾಗಿ-ಇಂಚರ ಗೋವಿಂದರಾಜು

PLACE YOUR AD HERE AT LOWEST PRICE

ಸವಿತಾ ಮಹರ್ಷಿ ಗುರುಗಳ ಹಾದಿಯಲ್ಲಿ ಸಾಗಿ ಆಚಾರ-ವಿಚಾರ ಮೈಗೂಡಿಸಿಕೊಂಡರೆ ಸಮಾಜದಲ್ಲಿ ಸದ್ಪ್ರಜೆಗಳಾಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಅಭಿಪ್ರಾಯ ಪಟ್ಟರು.

ಇಂದು ನಗರದ ಸುವರ್ಣ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮತ್ತು ಉದ್ಘಾಟಿಸಿ ಮಾತನಾಡಿದರು.

ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಸವಿತಾ ಸಮಾಜ ತನ್ನದೇ ಆದ ಪರಂಪರೆ ಹೊಂದಿದೆ. ಸವಿತಾ ಮಹರ್ಷಿ ಕ್ಷೌರಿಕ ಸಮಾಜದ ಮೂಲಪುರುಷರು. ಸವಿತಾ ಮಹರ್ಷಿಗಳು ದೇವಾನುದೇವತೆಗಳಿಗೆ ಕ್ಷೌರ ಮಾಡುತ್ತಿದ್ದರು ಎಂಬ ನಂಬಿಕೆಯಿದೆ. ಅಲ್ಲದೆ, ದೇವತೆಗಳ ಜೊತೆಗೆ ತಪಸ್ಸು ಮಾಡುತ್ತಿದ್ದರು ಎಂದು ಹೇಳಿದರು.

ಸವಿತಾ ಸಮಾಜದಲ್ಲಿಯೇ ೨೭ ಉಪಜಾತಿಗಳಿವೆ. ಇದರಲ್ಲಿ ಬರುವ ಹಡಪದ ಸಮಾಜದವರು ಜಗದ್ಗುರು ಬಸವಣ್ಣನ ಕಾಲದಲ್ಲಿ ಲಿಂಗ ಕಟ್ಟಿಸಿಕೊಂಡರೂ ಹಡಪದರು ಕ್ಷೌರಿಕ ವೃತ್ತಿ ಮಾಡುತ್ತಿದ್ದಾರೆ. ಸವಿತಾ ಸಮಾಜವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯಲಾಗುತ್ತಿದೆ ಎಂದರು.

ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮಿ ಅವರು ಮಾತನಾಡಿ ರಾಷ್ಟ್ರಕೂಟ, ವಿಜಯನಗರ, ಕಲ್ಯಾಣ ಚಾಲ್ಯುಕರ ಶಾಸನಗಳಲ್ಲಿ ಸವಿತಾ ಸಮಾಜದ ಬಗ್ಗೆ ಉಲ್ಲೇಖವಿದೆ. ಅನೇಕ ಶಾಸನಗಳ ಮೇಲೆ ಸವಿತಾ ಸಮಾಜದ ಸಾಧನಗಳಾದ ಕತ್ತಿ, ಕನ್ನಡಿ ಹಾಗೂ ಕತ್ತರಿಗಳನ್ನು ಕೆತ್ತಲಾಗಿದೆ. ಎರಡು ಸಾವಿರ ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸವಿತಾ ಸಮಾಜ ತನ್ನ ಸೇವಾಕಾರ್ಯದಿಂದಲೇ ಹೆಸರುವಾಸಿಯಾಗಿದೆ ಎಂದು ತಿಳಿಸಿದರು.

ಶ್ರೀ ಸವಿತಾ ಮಹರ್ಷಿ ಅವರ ಕುರಿತು ಡಾ.ನಾಗಾನಂದ ಕೆಂಪರಾಜು ಅವರು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ನಾದಸ್ವರ ನುಡಿಸಿದವರಿಗೆ ಪ್ರಶಸ್ತಿ ಪತ್ರ ನೀಡಿದರು. ನಂತರ ಮಾಲೂರು ವಿಜಿ ಮತ್ತು ತಂಡದವರು ನಕುಲ ಪೌರಾಣಿಕ ನಾಟಕ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್‌ರೆಡ್ಡಿ, ಜಿಲ್ಲಾ ಸವಿತಾ ಸಮಾಜ ಸಂಘದ ಅಧ್ಯಕ್ಷರು ಮತ್ತು ಸವಿತ ಸಮಾಜದ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!