• Mon. May 6th, 2024

*ಹದೆಗಟ್ಟಿದ್ದ ರಸ್ತೆಗೆ ತೇಪೆ ಹಾಕಿಸಿದ ಸಂಸದ ಎಸ್.ಮುನಿಸ್ವಾಮಿ.*

PLACE YOUR AD HERE AT LOWEST PRICE

ಬಂಗಾರಪೇಟೆ:ಕಳೆದ ಒಂದು ವರ್ಷದಿಂದ ತೀವ್ರವಾಗಿ ಹದೆಗೆಟ್ಟಿದ್ದ ಪಟ್ಟಣದ  ಸಂತೆಗೇಟಿನಿಂದ ಬಸ್ ನಿಲ್ದಾಣದವರೆಗೂ ಡಬಲ್ ರಸ್ತೆಯ ಉದ್ದಕ್ಕೂ ದೊಡ್ಡ  ಗುಂಡಿಗಳನ್ನು ಸಂಸದ ಎಸ್.ಮುನಿಸ್ವಾಮಿ ಲೋಕೋಪಯೋಗಿ ಇಲಾಖೆಯ  ಅಧಿಕಾರಿಗಳ ಮೂಲಕ ತೇಪೆ ಹಾಕಿಸಿದರು.

ಕಳೆದ 15 ದಿನಗಳ ಹಿಂದೆ ಕೆಜಿಎಫ್‍ಗೆ ಹೋಗುವ ಸಂದರ್ಭದಲ್ಲಿ ರಸ್ತೆ ತೀವ್ರವಾಗಿ ಹದೆಗೆಟ್ಟಿರುವುದನ್ನು ಮನಗಂಡು ಲೋಕೋಪಯೋಗಿ ಇಲಾಖೆಯ ಎಇಇ ಎಂ.ಸರಸ್ವತಿರಿಗೆ ಮೊಬೈಲ್ ಮೂಲಕ ಸಂಪರ್ಕಿಸಿ ಪಟ್ಟಣದ ಡಬಲ್ ರಸ್ತೆಯಲ್ಲಿ ತೀವ್ರವಾಗಿ ಹದೆಗೆಟ್ಟಿರುವ ರಸ್ತೆಗೆ ತೇಪೆಗಳನ್ನು ಹಾಕುವಂತೆ ಸೂಚನೆ ನೀಡಿದ್ದರು.

ಕಳೆದ ಮೂರು ದಿನಗಳಿಂದ ಪಟ್ಟಣದ ಡಬಲ್ ರಸ್ತೆಯ ಉದ್ದಕ್ಕೂ  ಜಲ್ಲಿಯನ್ನು ಹಾಕಿ ಸಮದಟ್ಟು ಮಾಡಿದ್ದರು.. ಬುಧವಾರ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕುತ್ತಿರುವ ಜಾಗಕ್ಕೆ ಸಂಸದ ಎಸ್.ಮುನಿಸ್ವಾಮಿ ಬೇಟಿ ನೀಡಿ ಉತ್ತಮ ಗುಣಮಟ್ಟದ ಡಾಂಬರನ್ನು ಹಾಕುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿ ಅಲ್ಲಿಯೇ ನಿಂತು ಕೆಲಸ ಮಾಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಎಸ್.ಮುನಿಸ್ವಾಮಿ, ಹಲವಾರು ತಿಂಗಳಿನಿಂದಲೂ ಪಟ್ಟಣದ ಬಹುತೇಕ ರಸ್ತೆಗಳು ತೀವ್ರವಾಗಿ ಹದೆಗೆಟ್ಟಿದ್ದು, ಈ ರಸ್ತೆಯಲ್ಲಿ ಸಾರ್ವಜನಿಕರು ಓಡಾಡಲು ತೀವ್ರ ಕಷ್ಠಕರವಾಗಿರುವುದನ್ನು ತಾಲೂಕಿಗೆ ಭೇಟಿ ನೀಡಿದ ವೇಳೆ ಸಾರ್ವಜನಿಕರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಮನವರಿಕೆ ಮಾಡಿದ್ದರಿಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರಿಂದ ಪ್ರಸ್ತುತ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕುತ್ತಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಬಂಗಾರಪೇಟೆ ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿಯಲ್ಲಿ 8.5 ಕೋಟಿ ಅನುದಾನವು ಮಂಜೂರು ಮಾಡಿದ್ದು, ಕಳೆದ ವಾರ ಈಗಾಗಲೇ ಶಂಕುಸ್ಥಾಪನೆ ಮಾಡಲಾಗಿದ್ದು, ಎಲ್ಲಾ ಕಾಮಗಾರಿಗಳನ್ನು ಬೇಗ ಪ್ರಾರಂಭ ಮಾಡುವಂತೆ ಸೂಚನೆ ನೀಡಲಾಗಿದೆ. ಪಟ್ಟಣದ ಪುರಸಭೆ

ವ್ಯಾಪ್ತಿಯ 27 ವಾರ್ಡುಗಳಲ್ಲಿಯೂ ಸಹ ಕನಿಷ್ಠ 50 ಲಕ್ಷಗಳ ಅಂದಾಜಿನ ಕಾಮಗಾರಿಗಳನ್ನು ಪಟ್ಟಿ ಮಾಡಿ ಮಂಜೂರು ಮಾಡಿಸಲಾಗಿದೆ.

ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ವಹಣೆ ಮಾಡುವಂತೆ ಪುರಸಭೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿರುವುದರಿಂದ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ.ಚಂದ್ರಾರೆಡ್ಡಿ, ಸದಸ್ಯ ಕಪಾಲಿ ಶಂಕರ್ ಮುಂತಾದವರು ಹಾಜರಿದ್ದರು.

 

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!