• Mon. Apr 29th, 2024

*ಕೆಜಿಏಫ್‍ನಲ್ಲಿ ಕೈಗಾರಿಕೆ ಸ್ಥಾಪನೆಯಲ್ಲಿ ಶಾಸಕಿ ವಿಫಲ:ಡಾ.ರಮೇಶ್ ಬಾಬು.*

PLACE YOUR AD HERE AT LOWEST PRICE

ಕೆಜಿಏಫ್ ಕ್ಷೇತ್ರದಲ್ಲಿ ಕೈಗಾರಿಕೆ ಸ್ಥಾಪಿಸಿ, ಸ್ಥಳೀಯರಿಗೆ ಉದ್ಯೋಗ ದೊರೆಕಿಸುವುದರಲ್ಲಿ ಕ್ಷೇತ್ರದ ಶಾಸಕರು ವಿಫಲರಾಗಿದ್ದಾರೆಂದು ಜೆಡಿಎಸ್ ಅಭ್ಯರ್ಥಿ ಡಾ.ರಮೇಶ್ ಬಾಬು ಆರೋಪಿಸಿದ್ದರು.

ಪಾರಂಡಹಳ್ಳಿ ಗ್ರಾಪಂಯ ಉದಯನಗರ ಹಾಗೂ ಮಂಜರಗುಟ್ಟಹಳ್ಳಿ ಗ್ರಾಮದಲ್ಲಿ ಗ್ರಾಪಂ ಮಾಜಿ ಸದಸ್ಯರಾದ ನಾರಾಯಣಪ್ಪ ಹಾಗೂ ಇತರರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು.

ಕೆಜಿಏಫ್ ಕ್ಷೇತ್ರದಿಂದ ಪ್ರತಿನಿತ್ಯ ಸಾವಿರಾರೂ ಮಂದಿ ಉದ್ಯೋಗಕ್ಕಾಗಿ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ, ಕೆಜಿಏಫ್ ಕ್ಷೇತ್ರದಲ್ಲಿ ಸಾವಿರಾರೂ ಎಕರೆ ಸರ್ಕಾರಿ ಜಾಗ ಇದ್ದರು ಸಹ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಶಾಸಕರು ಹಾಗೂ ಮಾಜಿ ಶಾಸಕರು ಮುಂದಾಗದಿರುವುದು ದುರದೃಷ್ಠ ಸಂಗತಿ ಎಂದು ಆರೋಪಿಸಿದರು.

ರಾಜ್ಯದಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ಸರ್ಕಾರ ಕೇವಲ 60 ದಿನಗಳು ಮಾತ್ರ ಉಳಿಯಲಿದೆ, ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಸರ್ಕಾರ ಬರುತ್ತದೆ ಎಂದು ಭರವಸೆ ನೀಡಿದರು.

ಸುಮಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದು ಜನಪರ ಸೇವೆ ಮಾಡಲು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ,

ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಸರ್ಕಾರ ರಚನೆಯಾಗಲಿದೆ ಎಂದು ಗ್ರಾಪಂ ಮಾಜಿ ಸದಸ್ಯ ನಾರಾಯಣಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್ ರೆಡ್ಡಿ, ಮುಖಂಡರಾದ ನಟರಾಜ್, ಬಾಬು, ಗಣೇಶ್ ಮೊದಲಾದವರಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!