• Fri. May 17th, 2024

ಕೋಲಾರ I ರವಿ ಇಂಟರ್‌ನ್ಯಾಷನಲ್ ಶಾಲೆಯ ಉದಯೋತ್ಸವ-೨೦೨೩ಕ್ಕೆ ಚಾಲನೆ

PLACE YOUR AD HERE AT LOWEST PRICE

  • ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು-ಸಿ.ಆರ್.ಅಶೋಕ್

ಮಕ್ಕಳಿಗೆ ಪೋಷಕರು ಒಳ್ಳೆಯ ವಿದ್ಯಾಭ್ಯಾಸ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಕರೆ ನೀಡಿದರು.

ಕೋಲಾರ ನಗರದ ಸ್ಕೌಟ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ರವಿ ಇಂಟರ್‌ನ್ಯಾಷನಲ್ ಶಾಲೆಯ ಉದಯೋತ್ಸವ-೨೦೨೩ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಅವರ ಭವಿಷ್ಯವನ್ನು ಉತ್ತಮವಾಗಿಸಲು ಸಹಕಾರ ನೀಡುವಂತಹ ಶಿಕ್ಷಣ ಸಂಸ್ಥೆಗಳಿಗೂ ಪೋಷಕರು ಬೆನ್ನೆಲುಬಾಗಿ ನಿಲ್ಲುವವರಾಗಬೇಕು ಎಂದು ಮನವಿ ಮಾಡಿದರು.

ಮಕ್ಕಳಲ್ಲಿ ಮೊಬೈಲ್, ಟಿವಿಗಳ ಮೇಲೆ ಆಸಕ್ತಿ ಹೆಚ್ಚಾಗುತ್ತಿದ್ದು, ಸಾಧ್ಯವಾದಷ್ಟು ಅವುಗಳನ್ನು ನಿಯಂತ್ರಿಸಲು ಮುಂದಾಗಬೇಕು. ಪುಸ್ತಕ ಓದುವುದು, ಕ್ರೀಡೆಗಳಲ್ಲಿ ಭಾಗವಹಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು.

ಕ್ಯಾಮ್ಸ್ ಮುಳಬಾಗಿಲು ತಾಲೂಕು ಅಧ್ಯಕ್ಷ, ಜಿಲ್ಲಾ ನಿರ್ದೇಶಕ ಶಂಕರ್ ಮಾತನಾಡಿ, ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕ ಓದುವ ಹವ್ಯಾಸ ಮಾಡಿಕೊಳ್ಳಬೇಕಿದ್ದು, ಇಲ್ಲವಾದರೆ ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲವೆಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರವಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ಇ.ಗೋಪಾಲಪ್ಪ ಮಾತನಾಡಿ, ಪೋಷಕರು ಮಕ್ಕಳಿಗೆ ಮೊದಲು ಶಿಸ್ತು ಕಲಿಸಬೇಕು. ಶಿಕ್ಷಣ ಸಂಸ್ಥೆಯಲ್ಲಿ ಕೇವಲ ೮ ಗಂಟೆಗಳು ಮಾತ್ರ ಇರುತ್ತಾರೆ.
ಉಳಿದ ಸಮಯ ಮನೆಯಲ್ಲಿ ಕಳೆಯುತ್ತಾರೆ ಹಾಗಾಗಿ ಮನೆಯೇ ಮೊದಲ ಪಾಠಶಾಲೆ. ಅಲ್ಲಿಯೇ ಗಮನ ಹೆಚ್ಚು ನೀಡಿ ಓದಿಸಿದರೆ ಅವರಿಗೆ ದಾರಿದೀಪ ಆಗುತ್ತೆ. ಮೊಬೈಲ್ ಬಳಕೆ ಕಡಿಮೆ ಮಾಡಿ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಕೊಡುವ ಜತೆಗೆ ತಂದೆತಾಯಿಗೆ ಗೌರವ ತರುವ ಕೆಲಸಕ್ಕೆ ಮುಂದಾಗಬೇಕೆಂದು ಮಕ್ಕಳಿಗೆ ಕಿವಿಮಾತು.

ವೇದಿಕೆ ಕಾರ್ಯಕ್ರಮದಲ್ಲಿ ರವಿ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಜಿ.ನರೇಶ್ ಬಾಬು, ಯಶೋದಮ್ಮ, ಸುಷ್ಮಾ, ಬಿಇಡಿ ಪ್ರಾಂಶುಪಾಲ ಮಂಜುನಾಥ್ ರೆಡ್ಡಿ, ಪದವಿ, ಪದವಿ ಪೂರ್ವ ಪ್ರಾಂಶುಪಾಲ ಸಲೀಂಪಾಷ, ಶಾಲೆಯ ಮುಖ್ಯಶಿಕ್ಷಕಿ ನಾಜಿಯಾ ಸುಲ್ತಾನ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಸುದ್ದಿ ಓದಿ ಹಂಚಿ:

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!