• Thu. May 16th, 2024

*ಕೆಜಿಏಫ್ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ನಿಖಿಲ್ ಕುಮಾರಸ್ವಾಮಿ ಶ್ಲಾಘನೆ.*

PLACE YOUR AD HERE AT LOWEST PRICE

ಕೆಜಿಏಫ್ ಮೀಸಲು ವಿಧಾನ ಸಭಾ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವಿನ ಹೋರಾಟದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಡಾ.ರಮೇಶ್ ಬಾಬು ಅವರು ಬಲಿಷ್ಠವಾಗಿ ಪಕ್ಷ ಸಂಘಟನೆ ಮಾಡುತ್ತಿರುವುದಕ್ಕೆ ಜೆಡಿಎಸ್ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶ್ಲಾಘನೆ ವ್ಯಕ್ತಪಡಿಸಿದರು.

ಕೋಲಾರದಲ್ಲಿ ನಡೆದ ಜೆಡಿಎಸ್ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ಧ ಕೆಜಿಏಫ್ ಕ್ಷೇತ್ರದ ಅಭ್ಯರ್ಥಿ ಡಾ.ರಮೇಶ್ ಬಾಬು ಅವರನ್ನು ಗಮನಿಸಿ ಮಾತನಾಡಿದ ಅವರು, ಚಿನ್ನದ ನಾಡಿನಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಲು ವಿದ್ಯಾವಂತರಾದ ರಮೇಶ್ ಬಾಬು ಅಭ್ಯರ್ಥಿಯಾಗಿರುವುದು ಕೆಜಿಏಫ್ ಕ್ಷೇತ್ರದ ಜನತೆಗೆ ಸಿಹಿ ಸುದ್ದಿಯಾಗಿದೆ.

ಜೆಡಿಎಸ್ ಪಕ್ಷದ ಅಭಿಮಾನಿಗಳನ್ನು ಹಾಗೂ ಕಾರ್ಯಕರ್ತರನ್ನು ಮರಳಿ ಜೆಡಿಎಸ್ ಪಕ್ಷಕ್ಕೆ ಕರೆತರಲು ಹೆಚ್ಚು ಪರಿಶ್ರಮ ತೋರುತ್ತಿದ್ದಾರೆ, ಕೋಲಾರ ಜಿಲ್ಲೆಯಲ್ಲಿ ಕೆಜಿಏಫ್ ಸೇರಿದಂತೆ 6 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತವಾಗಿದೆ ಎಂದರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!