• Sun. May 12th, 2024

PLACE YOUR AD HERE AT LOWEST PRICE

ಸಚಿವರೇ ಕೊಲೆಗೆ ಪ್ರಚೋದನೆ ನೀಡುವಂತ ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಝಡ್ ಪ್ಲಸ್ ಭದ್ರತೆಯ ಒದಗಿಸಬೇಕು ಎಂದು ಅಹಿಂದ ಮುಖಂಡ ಎನ್.ರಾಜಣ್ಣ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಿಪ್ಪ್ಪುವಿನ ರೀತಿಯಲ್ಲಿ ಜನತೆ ಹೊಡೆದಾಕಬೇಕು ಎಂದು ಹೇಳುವ ಮೂಲಕ ಸಚಿವ ಅಶ್ವತ್ಥ ನಾರಾಯಣ ಕೊಲೆಗಡುಕ ಸಂಸ್ಕೃತಿಯನ್ನು ರಾಜ್ಯದ ಜನತೆಯ ಮುಂದೆ ಒಪ್ಪಿಕೊಂಡಿದ್ದು, ಪೊಲೀಸರು ಈ ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದೇನೆ ಎಂಬ ಪ್ರಜ್ಞೆಯಿಲ್ಲದೆ ಜನರನ್ನು ಪ್ರಚೋದನೆಗೀಡು ಮಾಡುತ್ತಿರುವ ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಕೇಡು ಬಯಸಿರೋ ದುಷ್ಟ ಸಚಿವ ಅಶ್ವತ್ಥ ನಾರಾಯಣರಿಗೆ ಮುಂದಿನ ದಿನಗಳಲ್ಲಿ ಪ್ರಜ್ಞಾವಂತ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಸುದ್ದಿ ಓದಿ ಹಂಚಿ:

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!