• Tue. May 7th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಸಿದ ಕೇಸ್ ನಲ್ಲಿ ನಾಲ್ಕು ಜನರಿಗೆ ಜೀವಿತಾವಧಿವರೆಗೂ ಸಜೆ ನೀಡಿ ಕೋರ್ಟ್ ಆದೇಶಿಸಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು, ಕಾಮಸಮುದ್ರಂ ಪೊಲೀಸ್ ಠಾಣೆ,  ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಬಂಗಾರಪೇಟೆ ತಾಲ್ಲೂಕಿನ ಕಾಮಸಮದ್ರದ ಎ.ಕೆ. ಕಾಲೋನಿ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬಂಗಾರಪೇಟೆ ತಾಲ್ಲೂಕಿನ ಬೆಂಗನೂರು ಗ್ರಾಮದ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳಿಗೆ ಶಿಕ್ಷೆಯಾಗಿದೆ.

ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ಕಾಮಸಮುದ್ರಂ ಪೋಲೀಸ್ ಠಾಣೆಯಲ್ಲಿ ಸಿ.ಆರ್. 19/2022 ರಂತೆ ಕಲಂ 363, 376 (ಡಿಎ), 376 (3), 34 ಐ.ಪಿ.ಸಿ. ಮತ್ತು ಕಲಂ 6 ಪೋಕ್ಸೊ ಕಾಯ್ದೆಯನ್ವಯ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ಕೈಗೊಂಡು ಕಾಮಸಮುದ್ರಂ ವೃತ್ತದ ವೃತ್ತ ನಿರೀಕ್ಷಕರಾದ ಜೆ.ಎನ್.ಆನಂದ್ ಕುಮಾರ್,  ಆರೋಪಿತರ ವಿರುದ್ಧ ದೋಷಾರೋಪಣಾಪಟ್ಟಿಯನ್ನು ಸಲ್ಲಿಸಿದ್ದರು.

ಸ್ಪೆಷಲ್ ಸಿ. (ಪೋಕ್ಸೊ) 36/2022 ರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಗೌರವಾನ್ವಿತ ನ್ಯಾಯಾಧೀಶರಾದ ಬಿ.ಪಿ.ದೇವಮಾನೆಯವರು ವಿಚಾರಣೆ ನಡೆಸಿದ್ದು, ಸದರಿ ಪ್ರಕರಣದಲ್ಲಿ ವಾದ ವಿವಾದಗಳನ್ನು ಆಲಿಸಿದ ನಂತರ ಆರೋಪಿತರಾದ ಎ1 ಆನಂದ್, ಎ2 ಕಾಂತ್‌ರಾಜ್, ಎ3 ಪ್ರವೀಣ್ ಮತ್ತು ಎ4 ವೇಣು ರವರ ವಿರುದ್ಧ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ದಿನಾಂಕ 17-02-2023 ರಂದು ಆರೋಪಿತರಿಗೆ ಕಲಂ 363, 376 (ಡಿಎ), 376 (3), 34 ಐ.ಪಿ.ಸಿ. ಮತ್ತು ಕಲಂ 6 ಪೋಕ್ಸೊ ಕಾಯ್ದೆ ಆಡಿಯಲ್ಲಿ ಜೀವಿತಾವಧಿವರೆಗೂ ಸಜೆ, ಜೊತೆಗೆ ತಲಾ ರೂ. 25,000/- ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಸಜೆಯನ್ನು ವಿಧಿಸಿ, ತೀರ್ಪು ಪ್ರಕಟಿಸಿದ್ದಾರೆ.

ಸದರೀ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಡಿ. ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!