• Mon. Apr 29th, 2024

ಗ್ರಾಮೀಣ ಜನರ ಅಹವಾಲುಗಳ ಸ್ಪಂದನೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ – ಜಿಲ್ಲಾಧಿಕಾರಿ ವೆಂಕಟ್ ರಾಜಾ

PLACE YOUR AD HERE AT LOWEST PRICE

ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ದೊರೆತ ಸೌಲಭ್ಯಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ವರದಾನವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

ಇಂದು ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಜಲ್ಲಪಲ್ಲಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಗ್ರಾಮೀಣ ಪ್ರದೇಶದ ಜನರ ಅಹವಾಲುಗಳಿಗೆ ಸ್ಪಂದಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ. ಒಂದು ಗ್ರಾಮ ಪಂಚಾಯತಿ ವ್ಯಾಪ್ತಿಯ ಅತಿ ಹಿಂದುಳಿದ ಹಳ್ಳಿಯನ್ನು ಆಯ್ದುಕೊಂಡು ಅಲ್ಲಿನ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ತ್ವರಿತ ಪರಿಹಾರ ಒದಗಿಸುವ ಕಾರ್ಯಗಳು ಈ ಕಾರ್ಯಕ್ರಮದಿಂದ ಸಾಧ್ಯವಾಗುತ್ತಿವೆ.

ಇಂದಿನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ ಪಿಂಚಣಿ ಮಂಜೂರಿ ಆದೇಶ, ಪೌತಿ ಖಾತೆ ಆದೇಶ, ಹಕ್ಕು ಪತ್ರ. ಪಹಣಿ ತಿದ್ದುಪಡಿ ಪತ್ರಗಳನ್ನು ವಿತರಿಸುತ್ತಿರುವುದು ಮಹತ್ವದ ಕಾರ್ಯವಾಗಿದೆ. ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ಒಂದು ತಂಡವಾಗಿ ಪ್ರತಿ ತಿಂಗಳು ಗ್ರಾಮವೊಂದಕ್ಕೆ ಬಂದು ಜನರಿಗೆ ಸ್ಪಂದಿಸುತ್ತಿರುವುದು ಸರ್ಕಾರದ ಜನಪರ ಕಾರ್ಯವಾಗಿದೆ. ಗ್ರಾಮೀಣ ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಕಂದಾಯ ಇಲಾಖೆಯ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ವಿಧವಾ ವೇತನ, ಆರೋಗ್ಯ ಇಲಾಖೆಯಿಂದ ತಾಯಿ ಕಾರ್ಡುಗಳು, ಆಭಾ ಕಾರ್ಡ್, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿಗಳು ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಈ ಸಂದರ್ಭದಲ್ಲಿ ಮಂಜೂರಾತಿ ಪತ್ರ, ಹಕ್ಕು ಪತ್ರ, ದಾಖಲೆಗಳನ್ನು ವಿತರಿಸಲಾಯಿತು. ಗ್ರಾಮಸ್ಥರು ಅಹವಾಲುಗಳನ್ನು ನೀಡಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ೧೫ ದಿನಗಳಲ್ಲಿ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

ಮಳಿಗೆಗಳಿಗೆ ಭೇಟಿ ನೀಡಿ ಎಲ್ಲಾ ಇಲಾಖೆಗಳು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು ಸಾರ್ವಜನಿಕರು ಕೃಷಿ, ಆರೋಗ್ಯ, ತೋಟಗಾರಿಕೆ, ಪಶುಪಾಲನೆ, ಆಹಾರ ಇನ್ನೂ ಮುಂತಾದ ಚಟುವಟಿಕೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಆಯಾ ಮಳಿಗೆಗಳಲ್ಲಿ ಪಡೆಯಬಹುದು ಎಂದರು.

ಮುಳಬಾಗಲು ತಾಲ್ಲೂಕು ತಹಶೀಲ್ದಾರರಾದ ವೈ.ರವಿ ಅವರು ಮಾತನಾಡಿ, ಗ್ರಾಮ ವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಂಡಿರುವ ಈ ಗ್ರಾಮವು ಬೈರಕೂರು ಹೋಬಳಿ ವ್ಯಾಪ್ತಿಗೆ ಒಳಪಟ್ಟಿದ್ದು, ಈ ಗ್ರಾಮದಲ್ಲಿ ಸುಮಾರು ೧೨೪ ಜನ ಸಂಖ್ಯೆ ಹೊಂದಿದೆ. ೩೭ ಮನೆಗಳಿವೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಾರ್ಯ ಈ ಗ್ರಾಮದಲ್ಲಿ ಶೇ.೯೯ ರಷ್ಟು ಗುರಿಯನ್ನು ಸಾಧಿಸಲಾಗಿದೆ. ಈ ಗ್ರಾಮಕ್ಕೆ ೧ ಸ್ಮಶಾನ ಮತ್ತು ಒಂದು ೧ ಕೆರೆ ಮಂಜೂರು ಆಗಿದೆ ಎಂದರು.

ಇಂದು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಅಂಗವಾಗಿ ಈ ಕಾರ್ಯಕ್ರಮದಲ್ಲಿ, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಉಚಿತ ಕೋವಿಡ್ ಬೂಸ್ಟರ್ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಮನೋಹರ್‌ರೆಡ್ಡಿ, ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸರ್ವೇಶ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗ

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!