• Wed. Apr 24th, 2024

PLACE YOUR AD HERE AT LOWEST PRICE

ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಮಕ್ಕಳ ಅಪಹರಣ, ದೌರ್ಜನ್ಯ ಪ್ರಕರಣಗಳ ಮಾಹಿತಿ ಹಾಗೂ ತಡೆಗೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಪ್ರಶ್ನಿಸಿದ ವಿಧಾನಪರಿಷತ್‌ನಲ್ಲಿ ಸದಸ್ಯ ಇಂಚರ ಗೋವಿಂದರಾಜು ಅವರಿಗೆ ಉತ್ತರಿಸಿದ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ, ಕಳೆದ ಐದು ವರ್ಷಗಳಲ್ಲಿ ೬೧೬೦ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಸದನಕ್ಕೆ ಉತ್ತರ ನೀಡಿದರು.

ಎಂಎಲ್‌ಸಿ ಗೋವಿಂದರಾಜು ವಿಧಾನಪರಿಷತ್‌ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕಳೆದ ೫ ವರ್ಷದಲ್ಲಿ ಮಕ್ಕಳ ಅಪಹರಣ ಮತ್ತು ಅಪರಾಧಗಳ ಪ್ರಕರಣಗಳು, ಹಾಗೂ ಕಳೆದ ಎಂಟು ವರ್ಷಗಳಲ್ಲಿ ಸುಮಾರು ಐದು ಪಟ್ಟು ಹೆಚ್ಚು ಮಕ್ಕಳ ಮೇಲೆ ಅಪರಾಧಗಳು ನಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ, ಬಂದಿದ್ದಲ್ಲಿ ಸರ್ಕಾರ ಇದುವರೆಗೂ ತೆಗೆದುಕೊಂಡ ಕ್ರಮ, ಎಷ್ಟು ಪ್ರಕರಣಗಳನ್ನು ಇತ್ಯಾರ್ಥಪಡಿಸಲಾಗಿದೆ ಇದರಲ್ಲಿ ಎಷ್ಟು ಜನರು ಶಿಕ್ಷೆಗೆ ಒಳಗಾಗಿದ್ದಾರೆ ಮಾಹಿತಿ ನೀಡುವಂತೆ ಕೋರಿದರು.
ರಾಷ್ಟ್ರೀಯ ಅಪರಾಧ ಬ್ಯೂರೋ ದಾಖಲೆಗಳ ಪ್ರಕಾರ ೨೦೧೩ ರಲ್ಲಿ ರಾಜ್ಯದಲ್ಲಿ ೧೩೫೩ ಪ್ರಕರಣಗಳಿದ್ದರೆ, ೨೦೨೧ ರಲ್ಲಿ ೭೨೬೧ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ ೨೦೨೦ ರಿಂದ ಸುಮಾರು ೨೫೬೩ ಪ್ರಕರಣಗಳನ್ನು ಪೊಲೀಸರು ಇನ್ನೂ ತನಿಖೆ ಮಾಡಬೇಕಿದೆ ಹಾಗೂ ೨೦೨೨ ರಲ್ಲಿ ತನಿಖೆ ಮಾಡಬೇಕಾದ ಒಟ್ಟು ಪ್ರಕರಣ ಸಂಖ್ಯೆಯು ಇದೀಗ ೯೮೨೪ ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ಇದಲ್ಲದೇ ಮಕ್ಕಳ ವಿರುದ್ದ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ೧೩,೯೦೩ ಪ್ರಕರಣಗಳು ನ್ಯಾಯಾಲಗಳಲ್ಲಿ ವಿಚಾರಣೆ ಬಾಕಿ ಉಳಿದಿದ್ದು, ೪೬೭೩ ಪ್ರಕರಣಗಳನ್ನು ೨೦೨೧ ರಲ್ಲಿ ವಿಚಾರಣೆಗೆ ಕಳುಹಿಸಲಾಗಿರುತ್ತದೆ. ಇನ್ನು ಸೈಬರ್ ಅಪರಾಧ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ೨೦೧೯ಕ್ಕೆ ಹೋಲಿಸಿದರೆ ೨೦೨೦ ರಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧ ಪ್ರಕರಣಗಳಲ್ಲಿ ೪೦೦ ಪ್ರತಿಶತದಷ್ಟು ಹೆಚ್ಚಾಗಿರುವ ಬಗ್ಗೆ ರಾಷ್ಟ್ರೀಯ ಅಪರಾಧ ಬ್ಯೂರೋ ವರದಿಯಲ್ಲಿದೆ ಎಂದು ಸರ್ಕಾರದ ಗಮನಕ್ಕೆ ತಂದರು.

ಇದರ ಅಂಕಿ-ಅಂಶಗಳಂತೆ ಮಕ್ಕಳ ಮೇಲಿನ ಆನ್‌ಲೈನ್ ಅಪರಾಧಗಳ ೮೪೨ ಪ್ರಕರಣಗಳಲ್ಲಿ ೭೩೮ ಪ್ರಕರಣಗಳು ಮಕ್ಕಳನ್ನು ಲೈಂಗಿಕವಾಗಿ ಆಶ್ಲೀಲವಾಗಿ ಚಿತ್ರಿಸುವ, ಪ್ರಕಟಿಸುವ ಅಥವಾ ರವಾನಿಸುವ ಪ್ರಕರಣವಾಗಿದೆ ಎಂಬುದಾಗಿ ಇದಲ್ಲದೇ ಮಕ್ಕಳು ಸ್ಮಾರ್ಟ್‌ಫೋನ್ ಮತ್ತು ಇಂಟರ್‌ನೆಟ್‌ಗೆ ದಾಸರಾಗುತ್ತಿರುವುದರಿಂದ ಮಕ್ಕಳ ಮೇಲೆ ಆಗುತ್ತಿರುವಂತಹ ಅಪರಾಧ ಪ್ರಕರಣಗಳು ಏರುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಮೊಬೈಲ್ ಕೊಡಿಸುವ ಪೋಷಕರು ತಮ್ಮ ಮಕ್ಕಳ ಚಲನವಲನದತ್ತ ಗಮನ ಹರಿಸಬೇಕಾಗಿರುತ್ತದೆ ಎಂಬುದಾಗಿ ಸುದೀರ್ಘವಾಗಿ ಗೋವಿಂದರಾಜುರವರು ಗೃಹ ಸಚಿವರ ಗಮನಕ್ಕೆ ಬಂದರು.

ಇದಕ್ಕೆ ಉತ್ತರಿಸಿದ ಗೃಹ ಸಚಿವರಾದ ಅರಗಜ್ಞಾನೇಂದ್ರ, ಮಕ್ಕಳ ಅಪಹರಣ ಪ್ರಕರಣಗಳಲ್ಲಿ ಕಳೆದ ೫ ವರ್ಷದಲ್ಲಿ, ಗಂಡು ಮಕ್ಕಳ ಸಂಖ್ಯೆ: ೨೮೫೮, ಹೆಣ್ಣು ಮಕ್ಕಳ ಸಂಖ್ಯೆ: ೬೧೬೦, ಪೋಕ್ಸೋ ಪ್ರಕರಣಗಳ ಸಂಖ್ಯೆ:೧೨೫೩೨, ಬಾಲ್ಯ ವಿವಾಹ ತಡೆ ಕಾಯ್ದೆ ಪ್ರಕರಣಗಳ ಸಂಖ್ಯೆ:೮೫೩, ಬಾಲ ಕಾರ್ಮಿಕ ತಡೆ ಕಾಯ್ದೆ ಪ್ರಕರಣಗಳು:೩೧೯, ಜೆ.ಜೆ. ಕಾಯ್ದೆ ಪ್ರಕರಣಗಳ ಸಂಖ್ಯೆ:೨೯೨, ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ವರದಿಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ಅಂಕಿ-ಅಂಶಗಳನ್ನು ಗಮನಿಸಿದಲ್ಲಿ ಸರಾಸರಿ ೧೦ ರಿಂದ ೨೦ ಶೇಕಡಾ ಹೆಚ್ಚಾಗಿರುವುದು ಕಂಡುಬಂದಿರುತ್ತದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಜೆ.ಜೆ. ಕಾಯ್ದೆ ಪ್ರಕರಣಗಳ ಸಂಖ್ಯೆ:೨೯೨, ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ವರದಿಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ಅಂಕಿ-ಅಂಶಗಳನ್ನು ಗಮನಿಸಿದಲ್ಲಿ ಸರಾಸರಿ ೧೦ ರಿಂದ ೨೦ ಶೇಕಡಾ ಹೆಚ್ಚಾಗಿರುವುದು ಕಂಡುಬಂದಿರುತ್ತದೆ. ಆದರೆ ಕಳೆದ ಎಂಟು ವರ್ಷಗಳಲ್ಲಿ ಐದು ಪಟ್ಟು ಹೆಚ್ಚಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವರ ಉತ್ತರಕ್ಕೆ ಗೋವಿಂದರಾಜು ಅಸಮಾಧಾನ ವ್ಯಕ್ತಪಡಿಸಿದಾಗ ಮಾತನಾಡಿದ ಸಚಿವರು, ಸದಸ್ಯರು ಸಂಕ್ಷೀಪ್ತವಾಗಿ ವಿವರಗಳನ್ನು ನೀಡಿರುತ್ತಾರೆ. ಇದನ್ನು ನಾನು ಒಪ್ಪುತ್ತೇನೆ. ಈ ಸಂಬಂಧವಾಗಿ ಅತ್ಯಾಚಾರ, ಪೋಕ್ಸೋ ಪ್ರಕರಣಗಳ ತನಿಖೆಯನ್ನು ಅಪರಾಧ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ, ೨೦೧೮ ರಲ್ಲಿನ ತಿದ್ದುಪಡಿಯಂತೆ ನಿಗದಿಪಡಿಸಿರುವ ೬೦ ದಿನಗಳ ಕಾಲಮಿತಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಲು ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ ಸುತ್ತೋಲೆಯ ಮೂಲಕ ನಿರ್ದೇಶನಗಳನ್ನು ನೀಡಲಾಗಿದೆ ಎಂದರು.

ಚಾಲ್ತಿಯಲ್ಲಿರುವ ಸಾಮಾಜಿಕ ಜಾಲತಾಣಗಳಾದ ಬ್ಲಾಗ್, ಟ್ವಿಟರ್, ಫೇಸ್ ಬುಕ್, ಪೊಲೀಸ್ ವೆಬೆ ಸಸೈಟ್ ಹಾಗೂ ಇತರೆ ಜಾಲತಾಣಗಳ ಮೂಲಕ ಮಾನವ ಕಳ್ಳ ಸಾಗಾಣಿ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವನ್ನು ಪ್ರಕಟಿಸುವ ಕಾರ್ಯವನ್ನು ಚುರುಕುಗೊಳಿಸುವುದಾಗಿ ಸದನಕ್ಕೆ ಸಚಿವರು ಉತ್ತರ ನೀಡಿದರು.

ಸುದ್ದಿ ಓದಿ ಹಂಚಿ:

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!