ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ನಮ್ಮ ಕೋಲಾರ
ಪ್ರಪಂಚ
ಬಂಗಾರಪೇಟೆ
ಮಕ್ಕಳ ಸುದ್ದಿ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ನೆನ್ನೆ ರಾತ್ರಿ ಕೆಜಿಎಫ್ ನಗರದಲ್ಲಿ ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ವಿವಿಧ ಪ್ರಮುಖ ಬೀದಿಗಳಲ್ಲಿ ನೂತನವಾಗಿ ಅಳವಡಿಸಿರುವ ಬೀದಿ ದೀಪಗಳಿಗೆ ಚಾಲನೆ ನೀಡಿದರು.
ನಗರದ ಫೈವ್ ಲೈಟ್ಸ್ ವೃತ್ತದಲ್ಲಿನ ಬ್ರಿಟೀಷರ ಕಾಲದಲ್ಲಿ ಅಳವಡಿಸಿರುವ ವಿದ್ಯುತ್ ಕಂಬದಲ್ಲಿ ದೀಪಗಳು ಒಡೆದು ಹೋಗಿದ್ದವು ಅವಗಳನ್ನು ಹೊಸದಾಗಿ ಅಳವಡಿಸಲಾಗಿದೆ.
ಫೈವ್ ಲೈಟ್ಸ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಐದು ರಸ್ತೆಗಳ ವಿಭಜಕಗಳಿಗೆ (ಡಿವೈಡರ್) ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿರುತ್ತದೆ.
ಇದೇ ವೇಳೆ ರೂ.4.00 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಡಾ.ಅಂಬೇಡ್ಕರ್ ರಸ್ತೆಯ ದ್ವಿಪಥ ರಸ್ತೆಯ ವಿಭಜಕಗಳಿಗೆ ಅಳವಡಿಸಿರುವ ವಿದ್ಯುತ್ ದೀಪಗಳನ್ನು ಮಾನ್ಯ ಶಾಸಕರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ಉಪಾಧ್ಯಕ್ಷೆ ದೃವಿಗಣೇಶ್ , ನಗರಸಭೆ ಸದಸ್ಯರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.