• Thu. Apr 25th, 2024

PLACE YOUR AD HERE AT LOWEST PRICE

ಆಡು ಮುಟ್ಟದ ಸೊಪ್ಪಿಲ್ಲ. ಸರ್ವಜ್ಞನು ಹೇಳದ ಮಾತಿಲ್ಲ. ಅವರ ತ್ರಿಪದಿಗಳ ಜ್ಞಾನ ಭಂಡಾರಕ್ಕೆ ಸಾಟಿಯೇ ಇಲ್ಲ ಎಂದು ಅಪರ ಜಿಲ್ಲಾಧಿಕಾರಿ ಹೆಚ್. ಅಮರೇಶ್ ತಿಳಿಸಿದರು.

ಕೋಲಾರ ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ, ಸಂತ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅನಾದಿ ಕಾಲದಿಂದಲೂ ನಮ್ಮ ದೇಶದ ನಾಡು ನುಡಿ, ಸಂಸ್ಕತಿ ಪರಂಪರೆಯನ್ನು ಕಟ್ಟಿ ಬೆಳೆಸಿದ ಮಹಾತ್ಮರು ಅನೇಕರು. ಅವರೆಲ್ಲರೂ ಮುಂದಿನ ಪೀಳಿಗೆಗಾಗಿ ತಮ್ಮಲ್ಲಿ ಇರುವಂತಹ ಜ್ಞಾನವನ್ನು ನೀಡಿದ ಮಹಾನ್ ಚೇತನಗಳು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಅನೇಕ ಸಾಧಕರು ಉದಯಿಸಿ ತಮ್ಮ ಆದರ್ಶಗಳಿಂದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಖರದಲ್ಲಿ ನಿಲ್ಲಿಸಿದಂತಹ ವ್ಯಕ್ತಿಗಳಲ್ಲಿ ಅತ್ಯಂತ ಮುಖ್ಯವಾಗಿ ಕಂಡು ಬರುವಂತಹ ಸರ್ವರಿಗೂ ಜ್ಞಾನವನ್ನು ಹಂಚಿದಂತಹ ಮಹಾನ್ ಚೇತನ ನಮ್ಮಕವಿ ಸರ್ವಜ್ಞ ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಕುವೆಂಪು ಉದ್ಯಾನವನದ ಕುಂಬಾರ ವಸತಿ ನಿಲಯದಿಂದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿಗಳ ಮೆರವಣಿಗೆಯೊಂದಿಗೆ ರಂಗಮಂದಿರಕ್ಕೆ ಆಗಮಿಸಿದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕುಂಬಾರ ಸಂಘದ ಜಿಲ್ಲಾ ಅಧ್ಯಕ್ಷ ಕಲ್ಲಂಡೂರು ಶ್ರೀನಿವಾಸಪ್ಪ, ಕುಂಬಾಕಲಾ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಶ್ರೀನಿವಾಸ್, ಕಸಾಪ ಜಿಲ್ಲಾ ಅಧ್ಯಕ್ಷ ಗೋಪಾಲಗೌಡ, ಶಿಕ್ಷಕ ಎಲ್ ರಾಜಪ್ಪ, ವಕೀಲ ಶ್ರೀನಿವಾಸ್, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಸಮುದಾಯದ ಯುವ ಮುಖಂಡರಾದ ಅಪ್ಪಿ, ರಾಜು ಶ್ರೀನಿವಾಸಪ್ಪ, ನಂದೀಶ್, ಮಂಜುನಾಥ್, ನಾಗೇಶ್ ಗಂಗಾರಾಜು, ಅಶ್ವಥ್, ನಾರಾಯಣಸ್ವಾಮಿ, ಚಿಕ್ಕರೆಡ್ಡಿಪ್ಪ, ತ್ರಿಲೋಕ್, ಮುಂತಾದವರು ಉಪಸ್ಥಿತರಿದ್ದರು.

ಸುದ್ದಿ ಓದಿ ಹಂಚಿ:

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!