• Sat. May 4th, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ:ತಾಲ್ಲೂಕಿನ ಲಕ್ಷ್ಮಿಪುರ ಗ್ರಾಪಂ ವ್ಯಾಪ್ತಿಯ ಗೌಡತಾತನಗಡ್ಡ ಗ್ರಾಮದಲ್ಲಿ 30ಕ್ಕೂ ಹೆಚ್ಚು ಕುಟುಂಬಗಳು ಕಾಂಗ್ರೆಸ್ ಮತ್ತು ಇತರೆ ಪಕ್ಷಗಳನ್ನು ತೊರೆದು  ಮಾಜಿ ಶಾಸಕ  ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಸತತ 40 ವರ್ಷಗಳ ರಾಜಕಾರಣದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮತದಾರರು ಒಮ್ಮೆ ಹಾಲಿ ಶಾಸಕ ರಮೇಶ್ ಕುಮಾರ್ ರನ್ನು ಆಯ್ಕೆ ಮಾಡಿದರೆ ಮತ್ತೊಮ್ಮೆ ಮಾಜಿ ಶಾಸಕ ವೆಂಕಟಶಿವಾರೆಡ್ಡಿರನ್ನು ಆಯ್ಕೆ ಮಾಡುತ್ತಿದ್ದರು.

ಆದರೆ ಕಳೆದ 2018 ರ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕ ರಮೇಶ್ ಕುಮಾರ್ ರನ್ನು ಆಯ್ಕೆ ಮಾಡಲಾಗಿದ್ದು ಸತತ ಎರಡು ಬಾರಿ ಸೋಲನ್ನು ಅನುಭವಿಸಿರುವಂತಹ ಜೆಡಿಎಸ್ ಜಿಲ್ಲಾಧ್ಯಕ್ಷರೂ ಆಗಿರುವ ಮಾಜಿ ಶಾಸಕ ವೆಂಕಟಶಿವಾರೆಡ್ಡಿ  ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ.

ಇವರು ಹಲವಾರು ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ಕಾರ್ಯಕರ್ತರನ್ನು ತಮ್ಮ ಬಣಕ್ಕೆ ಸೇರ್ಪಡೆ ಮಾಡಿಕೊಳ್ಳುವಲ್ಲಿ ಕಾರ್ಯನಿರ್ತರಾಗಿದ್ದು ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೌಡತಾತನಗಡ್ಡ ಗ್ರಾಮದಲ್ಲಿ 30ಕ್ಕೂ ಹೆಚ್ಚು ಕುಟುಂಬಗಳು ಕಾಂಗ್ರೆಸ್ ಮತ್ತು ಇತರ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷ ಸೇರಿದ್ದಾರೆ.

ಕಾರ್ಯಕ್ರಮದಲ್ಲಿ ಮುಖಂಡರಾದ ತೂಪಲ್ಲಿ ನಾರಾಯಣಸ್ವಾಮಿ, ಬಿ.ವಿ.ಶಿವಾರೆಡ್ಡಿ, ಕೆ.ವಿ.ವಾರೆಡ್ಡಿ, ಗಾಯತ್ರಿ ಮುತ್ತಪ್ಪ, ಶ್ರೀನಿವಾಸರೆಡ್ಡಿ, ಮುನಿರೆಡ್ಡಿ ಸೇರಿ ಗ್ರಾಮದ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!