• Thu. Mar 28th, 2024

೮ ಸಾವಿರ ಚುನಾಯಿತ ಸರ್ಕಾರಿ ನೌಕರ ಪ್ರತಿನಿಧಿಗಳ ತೀರ್ಮಾನ-ವೇತನ ಆಯೋಗ ಜಾರಿ ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ಮಾ.೧ರಿಂದ ಅನಿರ್ಧಿಷ್ಠಾವಧಿ ಮುಷ್ಕರ-ಜಿ.ಸುರೇಶ್‌ಬಾಬು

PLACE YOUR AD HERE AT LOWEST PRICE

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ೮ ಸಾವಿರ ಚುನಾಯಿತ ಪ್ರತಿನಿಧಿಗಳಿದ್ದ ‘ತುರ್ತು ರಾಜ್ಯ ಕಾರ್ಯಕಾರಿಣಿ ಸಭೆ’ಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಮಾ.೧ ರಿಂದ ‘ಅನಿರ್ಧಿಷ್ಠಾವಧಿ ಮುಷ್ಕರ’ ನಡೆಸಲು ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಫೆ.೨೧ ರಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ ಸಭೆಯಲ್ಲಿ ಮಾ.೧ ಮುಷ್ಕರದಲ್ಲಿ ಎಲ್ಲಾ ನೌಕರರು ಪಾಲ್ಗೊಳ್ಳಲು ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ಜುಲೈ ೧ ರಿಂದ ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, ೬ನೇ ವೇತನ ಆಯೋಗದ ಮಾದರಿಯಂತೆ ೭ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿ ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ. ೪೦ ಫಿಟ್‌ಮೆಂಟ್ ಸೌಲಭ್ಯವನ್ನು ೨೦೨೨ರ ಜುಲೈ ಒಂದರಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಹಳೆ ಪಿಂಚಣಿ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತಿಸ್‌ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು ಎಂದು ವಿವರ ನೀಡಿದ್ದಾರೆ.

ರಾಜ್ಯದ ೨೦೨೩-೨೪ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ೭ನೇ ವೇತನ ಆಯೋಗದ ಸೌಲಭ್ಯಗಳನ್ನು ೨೦೨೨ರ ಜುಲೈ ೧ರಿಂದಲೇ ಜಾರಿಗೊಳಿಸಬೇಕಾಗಿತ್ತು ಎಂದು ಅಭಿಪ್ರಾಯಪಡಲಾಯಿತು.
ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ರಾವ್ ಅಧ್ಯಕ್ಷತೆಯಲ್ಲಿ ೭ನೇ ವೇತನ ಆಯೋಗ ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತೃತ ವರದಿ ಸಿದ್ದಪಡಿಸಿ ಸಲ್ಲಿಸಿದ್ದರೂ ಸರ್ಕಾರ ಬಜೆಟ್‌ನಲ್ಲಿ ನೌಕರರ ಬೇಡಿಕೆಗಳಿಗೆ ಸ್ಪಂದಿಸುವ ಪ್ರಸ್ತಾಪವನ್ನೂ ಮಾಡಿದಿರುವ ಕುರಿತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮಾಧಾನ ವ್ಯಕ್ತಪಡಿಸಿತು.

ಈ ಹಿನ್ನಲೆಯಲ್ಲಿ ಮಾ.೧ ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅನಿರ್ಧಿಷ್ಟಾವಧಿ ಮುಷ್ಕರ’ವನ್ನು ಬೆಂಬಲಿಸುವುದೊಂದರಿಗೆ ಯಶಸ್ವಿಗೊಳಿಸಲು ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ಜಿಲ್ಲಾ, ತಾಲ್ಲೂಕು, ಯೋಜನಾ ಶಾಖೆಯ ಎಲ್ಲಾ ಸಮಸ್ತ ಸರ್ಕಾರಿ ಅಧಿಕಾರಿ-ನೌಕರರಲ್ಲಿ ಮನವಿ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಸುದ್ದಿ ಓದಿ ಹಂಚಿ:

Leave a Reply

Your email address will not be published. Required fields are marked *

You missed

error: Content is protected !!